ವಿವಿಧೆಡೆ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ಕೃಷ್ಣ-ರಾಧೆ ವೇಷದಲ್ಲಿ ಕಣ್ಮನ ಸೆಳೆದ ಪುಟಾಣಿ ಮಕ್ಕಳು
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಚರಿಸಲಾಯಿತು. ಭದ್ರಾವತಿ: ನಗರದ ವಿವಿಧೆಡೆ ತಾಲೂಕು ಗೊಲ್ಲ ಯಾದವ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು. ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಚರಿಸಲಾಯಿತು. ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಶ್ರೀ ಕೃಷ್ಣನಿಗೆ ತೊಟ್ಟಿಲು ಸೇವೆ ಕೈಗೊಳ್ಳಲಾಗಿತ್ತು. ತೀರ್ಥಪ್ರಸಾದ ವಿನಿಯೋಗ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನೆರವೇರಿದವು. ಅರ್ಚಕರಾದ ರಮೇಶ್ ಭಟ್ ಅರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ತಾಲೂಕು ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ವೆಂಕಟೇಶಪ್ಪ ಹಾಗು ಪದಾಧಿಕಾರಿಗಳು, ಸೇವಾಕರ್ತರು, ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಶ್ರೀ ಕೃಷ್ಣನ ದರ್ಶನ ಪಡೆದರು. ವಿಶೇಷವಾಗಿ ಭಕ್ತರಿಗೆ ಲಾಡು ವಿತರಿಸಲಾಯಿತು. ಭದ್ರಾವತಿ ತಾಲೂಕು ...