ಯಾವುದೇ ಹಬ್ಬವಿರಲಿ ಒಗ್ಗಟ್ಟಾಗಿ ಸೌಹಾರ್ದಯುತವಾಗಿ ಆಚರಿಸಿ
ನಾಗರೀಕರ ಸೌಹಾರ್ದ ಸಭೆಯಲ್ಲಿ ಮುಖಂಡರ ಅಭಿಪ್ರಾಯ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರೀಕರ ಸೌಹಾರ್ದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ: ಹಬ್ಬ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸೌಹಾರ್ದಯುತವಾಗಿ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಅತಿರೇಕ, ದುವರ್ತನೆಯಿಂದ ನಡೆದುಕೊಳ್ಳದೆ ಮಾನವೀಯ ಸಂಬಂಧಗಳನ್ನು ಗೌರವಿಸುವಂತವರಾಗಬೇಕೆಂದು ನಗರದ ವಿವಿಧ ಸಂಘ-ಸಂಸ್ಥೆಗಳ, ಸರ್ವಧರ್ಮಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು. ಗುರುವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರೀಕರ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಮುಖಂಡರಾದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಅಂಜುಮನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ದಿಲ್‌ದಾರ್, ಹಿಂದೂ ಜಾಗೃತಿ ವೇದಿಕೆ ಅರಳಿಹಳ್ಳಿ ದೇವರಾಜ್, ಪೋಕಸ್ ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷೆ ಲತಾ...