ಭೂಪಾಳಂರವರು ಗಾಂಧೀಜಿಯವರಿಂದ ಕನ್ನಡದಲ್ಲಿ ಸಹಿ ಮಾಡಿದ ಪತ್ರ ಪಡೆದು ಕನ್ನಡದ ಬದ್ಧತೆ ತೋರ್ಪಡಿಸಿದ್ದರು
ದತ್ತಿ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ಎಂ. ಎಂ ಸ್ವಾಮಿ ಬಣ್ಣನೆ ಕನ್ನಡ ಸಾಹಿತ್ಯ ಪರಿಷತ್ ಭದ್ರಾವತಿ ತಾಲೂಕು ಘಟಕದಿಂದ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದತ್ತಿ ಕಾರ್ಯಕ್ರಮ ಎಂ.ಎಂ ಸ್ವಾಮಿ, ಡಾ. ವಿಜಯದೇವಿ, ರತ್ನಯ್ಯ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. ಭದ್ರಾವತಿ: ವಸುದೇವ ಭೂಪಾಳಂರವರ ವಿಚಾರಧಾರೆ ವಿಶಿಷ್ಟವಾಗಿತ್ತು. ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಸೆರೆಮನೆ ವಾಸ ಅನುಭವಿಸಿದ್ದರು. ಮಹಾತ್ಮ ಗಾಂಧೀಜಿ ಅವರಿಗೆ ಜೈಲಿನಲ್ಲಿಯೇ ಕನ್ನಡ ಓದಲು ಮತ್ತು ಬರೆಯಲು ಹೇಳಿಕೊಡುವ ಮೂಲಕ ಅವರಿಂದ ಕನ್ನಡದಲ್ಲಿಯೇ ಸಹಿ ಮಾಡಿರುವ ಪತ್ರವನ್ನು ಪಡೆದಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ. ಸ್ವಾಮಿ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿವಮೊಗ್ಗದ ಪ್ರತಿಷ್ಠಿತ ಕುಟುಂಬದಲ್ಲಿ ಜನಿಸಿದ ವಸುದೇವ ಭೂಪಾಳಂರವರು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರೊಂದಿಗೆ ಜೈಲಿನಲ್ಲಿದ್ದ ಸಂದರ್ಭದಲ್ಲಿ ಗಾಂಧೀಜಿಯವರಿಗೆ ಕನ್ನಡ ಓದಲು ಮತ್ತು ಬರ...