ಎಚ್೧ಎನ್೧ ಕಾಯಿಲೆ ಕುರಿತು ತಿಳಿದುಕೊಳ್ಳುವ ಜೊತೆಗೆ ಎಚ್ಚರವಹಿಸಿ
ಶಾಲಾ ಮಕ್ಕಳಿಗೆ ಸ್ತ್ರೀ ರೋಗ ತಜ್ಞೆ ಡಾ. ವೀಣಾಭಟ್ ಸಲಹೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ನ್ಯೂಟೌನ್ ಸೇಂಟ್ ಚಾರ್ಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಚ್೧ಎನ್೧ ಕಾಯಿಲೆ ಕುರಿತ ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಭದ್ರಾವತಿ : ಎಚ್೧ಎನ್೧ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಯಾಗಿದ್ದು, ಮಕ್ಕಳು ಇದರ ಲಕ್ಷಣಗಳನ್ನು ತಿಳಿದುಕೊಳ್ಳುವ ಜೊತೆಗೆ ಒಂದು ವೇಳೆ ಸೋಂಕು ಉಂಟಾದ ಸಂದರ್ಭದಲ್ಲಿ ಆತಂಕಕ್ಕೆ ಒಳಗಾಗದೆ ಎಚ್ಚರವಹಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ನಗರದ ಮಹಾತ್ಮಗಾಂಧಿ ರಸ್ತೆಯ ನಯನ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ವೀಣಾ ಭಟ್ ಸಲಹೆ ನೀಡಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ನ್ಯೂಟೌನ್ ಸೇಂಟ್ ಚಾರ್ಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಎಚ್೧ಎನ್೧ ಕಾಯಿಲೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಚ್೧ಎನ್೧ ಕೆಮ್ಮುವಾಗ ಅಥವಾ ಸೀನುವಾಗ ಬರುವ ತುಂತುರುಗಳಿಂದ ಹಾಗೂ ನೇರ ಸಂಪರ್ಕದಿಂದ ಒಬ್ಬರಿಂದ ಒಬ್ಬರಿಗೆ ತುಂಬಾ ಬೇಗ ಹರಡುತ್ತದೆ. ಜ್ವರ, ಕೆಮ್ಮು, ಶೀತ ಮತ್ತು ಮೈ ಕೈ ನೋವು ಇತ್ಯಾದಿ ಈ ಕಾಯಿಲೆಯ ಲಕ್ಷಣಗಳಾಗಿವೆ. ಒಂದು ವೇಳೆ...