ಸೆ.17 ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಘೋಷಿಸಿ
ಯುವ ಕಾಂಗ್ರೆಸ್ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನವಾದ ಸೆ. 17ನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಘೋಷಿಸಲು ಒತ್ತಾಯಿಸಿ ಗುರುವಾರ ಭದ್ರಾವತಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನವಾದ ಸೆ. 17ನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಘೋಷಿಸಲು ಒತ್ತಾಯಿಸಿ ಗುರುವಾರ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಪ್ರಮುಖರು ಮಾತನಾಡಿ, ನರೇಂದ್ರ ಮೋದಿಯವರ ನೇತೃತ್ವದಲ್ಲಿ 2014 ರಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರುವ ಸಂದರ್ಭದಲ್ಲಿ ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಅಂದಿನಿಂದ ಇಲ್ಲಿಯವರೆಗೂ ಒಂದೇ ಒಂದು ಉದ್ಯೋಗ ನೀಡದ ಬಿಜೆಪಿ ಪ್ರತಿ ವರ್ಷ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲೇ ಸುಮಾರು 8.23 ಲಕ್ಷ ಹುದ್ದೆಗಳು ಖಾಲಿ ಇದ್ದು, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಖಾಯಂ ಹುದ್ದೆಗಳನ್ನು ಹೊರಗುತ್ತಿಗೆ ಹುದ್ದೆಗಳನ್ನಾಗಿ ಪರಿವರ್ತನೆ ಮಾಡುತ್ತಿದೆ. ಇವೆಲ್ಲವೂ ಯುವ ಜನತೆಯನ್ನು ಭ್ರಮನಿರಸನಗೊಳಿಸುವಂತೆ ಮಾಡಿದ...