ಸೆ.೨೨ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ರಾಜಬೀದಿ ಉತ್ಸವ ಮೆರವಣಿಗೆಗೆ ಕ್ಷಣಗಣನೆ
ಭದ್ರಾವತಿ ರಂಗಪ್ಪ ವೃತ್ತದಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ನಿರ್ಮಿಸಲಾಗಿರುವ ಮಹಾದ್ವಾರ. ಭದ್ರಾವತಿ : ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೪ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಸೆ.೨೨ರ ಮಂಗಳವಾರ ನಡೆಯಲಿದೆ. ೯ ದಿನಗಳ ಪ್ರತಿಷ್ಠಾಪನೆ ನಂತರ ವಿಸರ್ಜನಾ ಕಾರ್ಯ ನಡೆಯುತ್ತಿದ್ದು, ಪ್ರತಿ ದಿನ ಧಾರ್ಮಿಕ ಆಚರಣೆಗಳು, ಸಂಜೆ ರಸಮಂಜರಿ ಹಾಗು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಗಣಹೋಮ, ಅನ್ನಸಂತರ್ಪಣೆ ನಂತರ ಹಿಂದೂ ಧಾರ್ಮಿಕ ಸಭೆ ನಡೆಯಿತು. ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಸೇವಾ ಸಮಿತಿಯಿಂದ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣೆಗೆ ಆಯೋಜಿಸಲಾಗಿದೆ. ಈ ಬಾರಿ ಸಹ ಸಹಸ್ರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೋಲಾಟ, ಗೊಂಬೆ ನೃತ್ಯ, ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಲಿವೆ. ಅಲ್ಲದೆ ಮೆರವಣಿಗೆಯುದ್ದಕ್ಕೂ ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಅನ್ನಸಂತರ್ಪಣೆ ನಡೆಯಲಿದೆ. ಪೊಲೀಸ್ ಇಲಾಖೆ ಈ ಬಾರಿ ಸಹ ಮುನ್ನಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತೆ ಕೈಗೊಳ್ಳುತ್ತಿದ್...