ನಾಡಹಬ್ಬ ದಸರಾ ಉತ್ಸವ ಯಶಸ್ವಿಗೆ ಪ್ರತಿಯೊಬ್ಬರು ಸಹಕಾರ ನೀಡಿ : ಜೆ.ಸಿ ಗೀತಾ ರಾಜಕುಮಾರ್
೯ ಸಮಿತಿಗಳ ರಚನೆ, ೫೦ ಲಕ್ಷ ರು. ಬಳಕೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಭದ್ರಾವತಿ ನಗರಸಭೆ ಸರ್‌ಎಂವಿ ಸಭಾಂಗಣದಲ್ಲಿ ನಾಡಹಬ್ಬ ದಸರಾ ಸಂಬಂಧ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಭದ್ರಾವತಿ : ನಾಡಹಬ್ಬ ದಸರಾ ವೈಭವದಿಂದ ಆಚರಿಸಲು ನಗರದ ಎಲ್ಲಾ ದೇವಾಲಯ ಸಮಿತಿಗಳ ಹಾಗು ಸಂಘ-ಸಂಸ್ಥೆಗಳ ಸಹಕಾರ ಅಗತ್ಯವಾಗಿದ್ದು, ಪ್ರತಿಯೊಬ್ಬ ನಾಗರೀಕ ಸಹ ಈ ಹಬ್ಬದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಮನವಿ ಮಾಡಿದರು. ಅವರು ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಹಬ್ಬ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಹಬ್ಬದ ಯಶಸ್ವಿಗೆ ಪೂರಕವಾದ ಪ್ರತಿಯೊಬ್ಬರ ಸಲಹೆ ಸೂಚನೆಗಳನ್ನು ನಗರಸಭೆ ಆಡಳಿತ ಬಯಸುತ್ತದೆ ಎಂದರು. ಪೌರಾಯುಕ್ತ ಕೆ.ಎನ್ ಹೇಮಂತ್ ಮಾತನಾಡಿ, ಉತ್ಸವ ವಿಜ್ರಂಭಣೆಯಿಂದ ನಡೆಯಲು ೯ ಸಮಿತಿಗಳನ್ನು ರಚಿಸಲಾಗಿದೆ. ದಸರಾ ಆಚರಣೆಗೆ ಈ ಬಾರಿ ಜಿಲ್ಲಾಧಿಕಾರಿಗಳಿಗೆ ೫೦ ಲಕ್ಷ ರು. ಬಳಕೆಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಉತ್ಸವ ಅಂಗವಾಗಿ ಮಹಿಳಾ ದಸರಾ, ಮಕ್ಕಳ ದಸರಾ, ಪೌರ ಕಾರ್ಮಿಕರ ದಸರಾ ಸೇರಿದಂತೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಇತ್ತೀಚೆಗೆ ನಗರ...