ಕರ್ತವ್ಯದ ಸಮಯದಲ್ಲಿ ಕಡ್ಡಾಯವಾಗಿ ಸುರಕ್ಷತಾ ಸಲಕರಣೆಗಳನ್ನು ಬಳಸಿ : ಬಿ.ಕೆ ಸಂಗಮೇಶ್ವರ್
೨ ಸಾವಿರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ ಕಾರ್ಯಕ್ರಮ ಭದ್ರಾವತಿ ನಗರದ ಬೈಪಾಸ್ ರಸ್ತೆ, ಉಜ್ಜನಿಪುರ, ಕಾರ್ಮಿಕರ ಭವನದಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸುಮಾರು ೨ ಸಾವಿರ ಕಿಟ್ಗಳನ್ನು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿತರಿಸಲಾಯಿತು. ಭದ್ರಾವತಿ : ಕಾರ್ಮಿಕರು ಕೆಲಸದ ಸಮಯದಲ್ಲಿ ತಮ್ಮ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರ ನೀಡಿರುವ ಸುರಕ್ಷತಾ ಕಿಟ್ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಲಹೆ ವ್ಯಕ್ತಪಡಿಸಿದರು. ಅವರು ಭಾನುವಾರ ನಗರದ ಬೈಪಾಸ್ ರಸ್ತೆ, ಉಜ್ಜನಿಪುರ, ಕಾರ್ಮಿಕರ ಭವನದಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಆಯೋಜಿಸಲಾಗಿದ್ದ ೨ ಸಾವಿರ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರು ಸುರಕ್ಷಿತವಾಗಿ, ಆರೋಗ್ಯವಾಗಿರಬೇಕು. ಆಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ. ಈ ಹಿನ್ನಲೆಯಲ್ಲಿ ಸರ್ಕಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ...