ಕಾಂಗ್ರೆಸ್ ಪಕ್ಷ ಎಂದಿಗೂ ಶ್ರೀಸಾಮಾನ್ಯರ ಪಕ್ಷ : ಶಾಸಕ ಬಿ.ಕೆ ಸಂಗಮೇಶ್ವರ್
ಸುಮಾರು 6,500 ಕ್ಕೂ ಹೆಚ್ಚು ಪಿಂಚಣಿ ವಂಚಿತರಿಗೆ ಮರು ಮಂಜೂರಾತಿ ಆದೇಶ ಪತ್ರಗಳ ವಿತರಣೆ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಪಿಂಚಣಿಗಳಿಂದ ವಂಚಿತರಾಗಿರುವ ಫಲಾನುಭವಿಗಳಿಗೆ ಮರು ಮಂಜೂರಾತಿ ಆದೇಶ ಪತ್ರಗಳನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ವಿತರಿಸಿದರು. ಭದ್ರಾವತಿ : ವಯೋವೃದ್ಧರು, ವಿಕಲಚೇತನರು, ವಿಧವೆಯರು ಸೇರಿದಂತೆ ಆರ್ಥಿಕವಾಗಿ ಅಶಕ್ತರಾದವರಿಗಾಗಿ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಜಾರಿಗೆ ತಂದ ಹಲವಾರು ಪಿಂಚಣಿ ಯೋಜನೆಗಳು ಇಂದಿಗೂ ಜಾಲ್ತಿಯಲಿದ್ದು, ಇವುಗಳಿಂದ ಸಾಕಷ್ಟು ಪ್ರಯೋಜನವಾಗುತ್ತಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ಅವರು ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಪಿಂಚಣಿಗಳಿಂದ ವಂಚಿತರಾಗಿರುವ ಫಲಾನುಭವಿಗಳಿಗೆ ಮರು ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸುವ ಬೃಹತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಬೇಕೆಂಬ ಉದ್ದೇಶದೊಂದಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಆಡಳಿತಾವಧಿಯಲ್ಲಿ ಹಲವಾರು ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದರು. ಈ ಯೋಜನೆಗಳನ್ನು...