ಎಂಪಿಎಂ ಕಾರ್ಖಾನೆ ಪುನಃ ಆರಂಭಗೊಳ್ಳುವ ಮೂಲಕ ಗತವೈಭವ ಮರುಕಳಿಸಲಿ : ಬಿ.ಕೆ ಶಿವಕುಮಾರ್
ಭದ್ರಾವತಿಯಲ್ಲಿ ಎಂಪಿಎಂ ರಿಟೈರ್ಡ್ ಎಂಪ್ಲಾಯೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 12ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ಉಪಾಧ್ಯಕ್ಷರಾದ ಬಿ. ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಭದ್ರಾವತಿ : ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಕಾರ್ಖಾನೆ ಮುಚ್ಚಿರುವುದು ನಗರದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ಹಿನ್ನಡೆಯನ್ನುಂಟು ಮಾಡಿದ್ದು, ಈ ಕಾರ್ಖಾನೆಯನ್ನು ಪುನಃ ಆರಂಭಿಸುವ ಮೂಲಕ ಗತವೈಭವ ಮರುಕಳಿಸಬೇಕೆಂಬ ನಿವೃತ್ತ ನೌಕರರು ಸೇರಿದಂತೆ ಕ್ಷೇತ್ರದ ಜನರ ಆಶಯ ಈಡೇರಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ಉಪಾಧ್ಯಕ್ಷರಾದ ಬಿ.ಕೆ ಶಿವಕುಮಾರ್ ಹೇಳಿದರು. ಎಂಪಿಎಂ ರಿಟೈರ್ಡ್ ಎಂಪ್ಲಾಯೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 12ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಎಂಪಿಎಂ ಕಾರ್ಖಾನೆಯನ್ನು ಪುನಃ ಆರಂಭಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಸಹಕಾರ ನೀಡುವ ಅಗತ್ಯವಿದೆ ಎಂದರು. ನಿವೃತ್ತ ನೌಕರರ ಅನುಭವ ಮತ್ತು ಸೇವೆಯನ್ನು ಗೌರವಿಸುವುದರ ಜೊತೆಗೆ ಅವರ ಸಮಸ್ಯೆಗಳಿಗೆ...