Thursday, June 4, 2020
ಮದ್ಯಪಾನ ನಿಷೇಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ
Wednesday, June 3, 2020
ಜೂ.೫ರಂದು ಡಿಎಸ್‌ಎಸ್ ವತಿಯಿಂದ ಪ್ರತಿಭಟನೆ
ತಾಲೂಕಿನ ಕೂಡ್ಲಿಗೆರೆ ಹೋಬಳಿ ಕಲ್ಪನಹಳ್ಳಿ ಗ್ರಾಮದಲ್ಲಿ ಸುಮಾರು ೫-೬ ದಲಿತ ಕುಟುಂಬಗಳು ಸುಮಾರು ೫೦ ವರ್ಷಗಳಿಂದ ವಾಸಿಸುತ್ತಿದ್ದು, ದಲಿತ ಕುಟುಂಬದವರು ಓಡಾಡುವ ರಸ್ತೆಗೆ ಅಕ್ರಮವಾಗಿ ಬೇಲಿ ಹಾಕಲಾಗಿದೆ. ಇದಕ್ಕೆ ಪಿಡಿಓ ಕರ್ತವ್ಯ ಲೋಪ ಕಾರಣವಾಗಿದ್ದು, ಈ ಹಿನ್ನಲೆಯಲ್ಲಿ ಅಮಾನತ್ತುಗೊಳಿಸುವಂತೆ ಒತ್ತಾಯಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ.
ದಲಿತ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸುವಂತೆ ತಾಲೂಕು ಸಂಚಾಲಕ ಎಂ. ಕುಬೇಂದ್ರಪ್ಪ ಕೋರಿದ್ದಾರೆ.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಹಲವು ಆರೋಪಗಳು : ಕರ್ತವ್ಯದಿಂದ ಬಿಡುಗಡೆಗೊಳ್ಳಲು ಆಗ್ರಹಿಸಿ ಪ್ರತಿಭಟನೆ
- ಕಾನೂನು ಉಲ್ಲಂಘಿಸಿ ಗ್ರಾ.ಪಂ. ಪಿಡಿಓ ವರ್ಗಾವಣೆ
- ಯಾವುದೇ ಆದೇಶವಿಲ್ಲದೆ ಚಾಲಕನ ನೇಮಕ
- ನಿರ್ಲಕ್ಷ್ಯತನದಿಂದ ಅಂಗವಿಕಲ, ಎಸ್.ಸಿ/ಎಸ್.ಟಿ ಅನುದಾನ ಹಿಂದಕ್ಕೆ
Tuesday, June 2, 2020
ನ್ಯಾಯಾಲಯದಲ್ಲಿ ಕಲಾಪಗಳು ಆರಂಭ : ದಿನಕ್ಕೆ ೨೦ ಪ್ರಕರಣ ವಿಚಾರಣೆ
ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯತನದಿಂದ ಕಳಪೆ ಕಾಮಗಾರಿ
ಗುಣಮಟ್ಟದ ಕಾಮಗಾರಿ ನಡೆಸಲು ಸ್ಥಳೀಯರಿಂದ ಆಗ್ರಹ
ಎರಡು ದಿನಗಳ ಅಂತರರಾಷ್ಟ್ರೀಯ ವೆಬಿನಾರ್
ಭದ್ರಾವತಿ, ಜೂ. ೨: ನಗರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ದಿ ಇಂಡಿಯನ್ ಎಕಾನೊಮಿಕ್ ಅಸೋಸಿಯೇಷನ್ ಸಹಕಾರದೊಂದಿಗೆ ಎರಡು ದಿನಗಳ ಅಂತರರಾಷ್ಟ್ರೀಯ ವೆಬಿನಾರ್(ಆನ್ ಲೈನ್ ವಿಚಾರ ಸಂಕಿರಣ) ಆಯೋಜಿಸಲಾಗಿದೆ.
ಜೂ.೪ ಮತ್ತು ೮ ರಂದು ಬೆಳಿಗ್ಗೆ ೧೧ ಗಂಟೆಯಿಂದ ‘ಕೋವಿಡ್-೧೯’ ಫಿಸ್ಕಲ್ ಮ್ಯಾನೇಜ್ಮೆಂಟ್, ವೇಸ್ ಅಂಡ್ ಚಾಲೆಂಚೆಸ್ ಅಹೆಡ್ (Covid-19 Fiscal Management Ways & Challenges ahead) ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಅರ್ಥಶಾಸ್ತ್ರಜ್ಞರಾದ ಪ್ರೊ. ಎನ್.ಆರ್ ಭಾನುಮೂರ್ತಿ, ಬಾಂಗ್ಲಾದೇಶದ ಪ್ರೊ. ನಜುರುಲ್ ಇಸ್ಲಾಂ, ಜಮ್ಮು ಮತ್ತು ಕಾಶ್ಮೀರದ ಪ್ರೊ. ಸುಪ್ರಾನ್ ಶರ್ಮ, ಚೈನ್ನೈನ ಪ್ರೊ. ಚಂದ್ರಮೋಹನ್ ಭಾಗವಹಿಸಲಿದ್ದಾರೆ.
ದೇಶ-ವಿದೇಶಗಳಿಂದ ಸುಮಾರು ೧೨೦ ಪ್ರಬಂಧಗಳು ಆನ್ಲೈನ್ ಮೂಲಕ ಮಂಡನೆಯಾಗಲಿವೆ. ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ ವೆಬಿನಾರ್ ಉದ್ಘಾಟಿಸಲಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿರುವರು. ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್, ಪ್ರಾಧ್ಯಾಪಕರಾದ ಡಾ. ಬಿ.ಎಂ ನಾಸಿರ್ಖಾನ್, ಪ್ರೊ. ಮೊಹಮ್ಮದ್ ನಜೀಬ್, ಡಾ. ಧನಂಜಯ, ಡಾ. ಆರ್. ಸೀಮಾ, ಡಾ. ದಾಕ್ಷಾಯಣಿ ಎಂ. ಡೋಂಗ್ರೆ, ಪ್ರೊ. ಎಸ್. ವರದರಾಜ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
Monday, June 1, 2020
ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ವೈರಸ್ ಸೋಂಕಿನ ಭೀತಿ
ಹಳೇನಗರ ಠಾಣೆಗೆ ಸ್ಯಾನಿಟೈಸರ್, ಜಿಲ್ಲಾ ರಕ್ಷಣಾಧಿಕಾರಿ ಭೇಟಿ
ಭದ್ರಾವತಿ, ಜೂ. ೧: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಇದೀಗ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೂ ಸೋಂಕಿನ ಭೀತಿ ಎದುರಾಗಿದೆ.ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದ್ದ ಘರ್ಷಣೆ ಹಿನ್ನಲೆಯಲ್ಲಿ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಶಿವಮೊಗ್ಗ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಗಳಿಗೆ ಸೋಮವಾರ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳಲ್ಲಿ ಆತಂಕ ಎದುರಾಗಿದೆ.
ಸೋಂಕಿಗೆ ಒಳಗಾಗಿರುವ ಓರ್ವ ಸಿಬ್ಬಂದಿ ಎರಡು ದಿನ ಹಳೇನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇದರಿಂದಾಗಿ ಇಲ್ಲಿನ ಸಿಬ್ಬಂದಿಗಳಿಗೂ ಸೋಂಕಿನ ಭೀತಿ ಉಂಟಾಗಿದೆ. ಮುಂಜಾಗ್ರತೆ ಕ್ರಮವಾಗಿ ಠಾಣೆಗೆ ಭಾನುವಾರ ರಾತ್ರಿ ಸ್ಯಾನಿಟೈಸರ್ ಮಾಡಿಸಿದ್ದು, ಸ್ವಚ್ಛತೆ ಕೈಗೊಳ್ಳಲಾಗಿದೆ. ಸೋಮವಾರ ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿಗಳು ಠಾಣೆ ಹೊರ ಭಾಗದಲ್ಲೇ ಇದ್ದು, ಠಾಣೆಯೊಳಗೆ ಪ್ರವೇಶಿಸಿಲ್ಲ.