Saturday, June 6, 2020

ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ಧನ

ಭದ್ರಾವತಿ, ಜೂ. ೬ : ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ  ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ ೧೫ ಸಾವಿರ ರು. ಪರಿಹಾರ ಧನ ಘೋಷಿಸಿದೆ. 
ಹಣ್ಣಿನ ಬೆಳೆಗಳಾದ ಅನಾನಸ್, ಪಪ್ಪಾಯಿ, ಅಂಜೂರ, ಕಲ್ಲಂಗಡಿ, ಬಾಲೆ, ಖರ್ಬೂಜ ಮತ್ತು ತರಕಾರಿ ಬೆಳೆಗಳಾದ ಬೂದುಗುಂಬಳ, ಎಲೆಕೋಸು, ಹೂಕೋಸು, ಹಸಿರುಮೆಣಸಿನಕಾಯಿ, ಟೊಮ್ಯಾಟೊ ಬೆಳೆಗಳನ್ನು ಬೆಳೆದು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ರೈತರು ಪರಿಹಾರ ಧನ ಪಡೆಯಲು  ಅರ್ಹರಾಗಿದ್ದು,  ಬೆಳೆಗಾರರು ಜೂ. ೧೬ ರೊಳಗಾಗಿ ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್, ರೈತರ ಬ್ಯಾಂಕ್ ಖಾತೆ ಪಾಸ್ ಬುಕ್ ನಕಲು ಪ್ರತಿ ಹಾಗೂ ಸ್ವಯಂ ದೃಢೀಕೃತ ಘೋಷಣಾ ಪತ್ರದೊಂದಿಗೆ ಅರ್ಜಿ ಸಲ್ಲಿಸುವುದು. 
ಓರ್ವ ರೈತ ಒಂದು ಹೆಕ್ಟೇರ್‌ವರೆಗೆ ಮಾತ್ರ ೧೫ ಸಾವಿರ  ರು. ಪರಿಹಾರ ಧನ ಪಡೆಯಲು ಅವಕಾಶವಿದೆ. ಬಾಳೆ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್ ೨ನೇ ವಾರದ ನಂತರದ ಕಟಾವಿಗೆ ಬಂದಿರುವ ಬೆಳೆಗೆ ಮಾತ್ರ ಪರಿಹಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ನಗರದ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆ ಕಛೇರಿ ಸಂಪರ್ಕಿಸಲು ಕೋರಲಾಗಿದೆ. 

ಬಿಜೆಪಿ ಕೇಂದ್ರ ಸರ್ಕಾರ ಒಂದು ವರ್ಷದ ಸಾಧನೆ

ಸಾಧನಾ ಪತ್ರದ ಮೂಲಕ ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಚಾಲನೆ 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ೨ನೇ ಅವಧಿಯ ಮೊದಲ ವರ್ಷದ ಸಾಧನೆ ಹಾಗೂ ಶಿವಮೊಗ್ಗ  ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರರವರ ಸಾಧನೆ ಮನೆ ಮನೆಗೆ ತಿಳಿಸುವ ೩ ದಿನಗಳ ಕಾರ್ಯಕ್ರಮಕ್ಕೆ ಶನಿವಾರ ನಗರಸಭೆ ವ್ಯಾಪ್ತಿಯ ಹೊಸಮನೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ಭದ್ರಾವತಿ, ಜೂ. ೬: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ೨ನೇ ಅವಧಿಯ ಮೊದಲ ವರ್ಷದ ಸಾಧನೆ ಹಾಗೂ ಶಿವಮೊಗ್ಗ  ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರರವರ ಸಾಧನೆ ಪ್ರತಿಯೊಬ್ಬರಿಗೂ ತಿಳಿಸಿಕೊಡುವ ನಿಟ್ಟಿನಲ್ಲಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಮನೆ ಮನೆಗೆ ಸಾಧನಾ ಪತ್ರ ವಿತರಿಸುವ ೩ ದಿನಗಳ ಕಾರ್ಯಕ್ರಮಕ್ಕೆ ಶನಿವಾರ ನಗರಸಭೆ ವ್ಯಾಪ್ತಿಯ ಹೊಸಮನೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. 
ಮುಖಂಡರು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಹಾಗೂ ಸಂಸದರ ಸಾಧನೆಗಳನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಸಂದೇಶಗಳನ್ನು ತಿಳಿಸಿದರು. 
ತಾಲೂಕು ಬಿಜೆಪಿ ಮಂಡಲ ಪ್ರಭಾರಿ ಜ್ಞಾನೇಶ್ವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಶಿವರಾಜ್, ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್,  ಮುಖಂಡರಾದ ಎಂ. ಮಂಜುನಾಥ್, ಹನುಮಂತನಾಯ್ಕ, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥಚಾರ್, ಗಣೇಶ್ ಹಾಗೂ ಹೊಸಮನೆ ಬೂತ್ ೯೩ರ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಮುಖಂಡರು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಹಾಗೂ ಸಂಸದರ ಸಾಧನೆಗಳನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಸಂದೇಶಗಳನ್ನು ತಿಳಿಸಿದರು. 

ಸರ್ಕಾರಿ ಕಾಲೇಜು, ಆಸ್ಪತ್ರೆ ಸೇರಿದಂತೆ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಸೇರಿದಂತೆ ನಗರದ ವಿವಿಧೆಡೆ ವಿಶ್ವ ಪರಿಸರ ದಿನ ಆಚರಿಸಲಾಯಿತು. 
ಭದ್ರಾವತಿ, ಜೂ. ೬: ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಸೇರಿದಂತೆ ನಗರದ ವಿವಿಧೆಡೆ ವಿಶ್ವ ಪರಿಸರ ದಿನ ಆಚರಿಸಲಾಯಿತು. 
ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್, ರೋವರ‍್ಸ್ ಲೀಡರ್ ಪ್ರೊ. ವರದರಾಜ, ರೇಂಜರ‍್ಸ್ ಲೀಡರ್ ಡಾ. ದಾಕ್ಷಾಯಿಣಿ ಎಂ ಡೊಂಗ್ರೆ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 
ನಗರಸಭೆ ವ್ಯಾಪ್ತಿಯ ಸುರಗಿತೋಪು ಕೊಳಚೆ ಪ್ರದೇಶದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಪರಿಸರ ದಿನ: 
ನಗರಸಭೆ ವ್ಯಾಪ್ತಿಯ ಸುರಗಿತೋಪು ಕೊಳಚೆ ಪ್ರದೇಶದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪ್ರಮುಖರಾದ ಶಿವರಾಜ್, ಉಮೇಶ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನ ವಿಶಿಷ್ಟವಾಗಿ ಆಚರಿಸಲಾಯಿತು. 
ಸರ್ಕಾರಿ ಆಸ್ಪತ್ರೆಯಲ್ಲಿ ಪರಿಸರ ದಿನ: 
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನ ವಿಶಿಷ್ಟವಾಗಿ ಆಚರಿಸಲಾಯಿತು. ಆಸ್ಪತ್ರೆಯ ಹಿರಿಯ ವೈದ್ಯ ಡಾ. ರವೀಂದ್ರನಾಥ ಕೋಠಿ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಸುಂದರ್‌ಬಾಬುರವರ ಪುತ್ರಿ ಶ್ರೇಷ್ಠ ಹುಟ್ಟುಹಬ್ಬದ ಅಂಗವಾಗಿ ಸಸಿಗಳನ್ನು ನೆಡಲಾಯಿತು. 
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ವೈದ್ಯರಾದ ಡಾ. ವೀರಭದ್ರಪ್ಪ, ಡಾ. ಕವಿತ, ಡಾ. ಮಯೂರಿ, ಡಾ. ಪ್ರೀತಿ, ಡಾ. ಸುದರ್ಶನ್ ರಾವ್, ಡಾ. ಕಿರಣ್, ಡಾ. ಪವನ್, ಡಾ. ವರ್ಷ, ಡಾ. ಜ್ಞಾನಮೂರ್ತಿ, ವಿವಿಧ ವಿಭಾಗಗಳ ಸಿಬ್ಬಂದಿಗಳಾದ ಶೀಲಾ ಮೇರಿ, ಶ್ರೀದೇವಿ, ಶಿಲ್ಪ, ವೆಂಕಟೇಶ್, ಕಿರಣ್, ಸೋಮ, ರಾಜೇಶ್, ಪ್ರವೀಣ್, ಮೋಹನ್, ನಾಗರಾಜ್, ರಾಧಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Friday, June 5, 2020

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತಾ ಸಭೆ : ಸಾರಿಗೆ ವ್ಯವಸ್ಥೆ ಕುರಿತು ಚರ್ಚೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ ಹಿನ್ನಲೆಯಲ್ಲಿ ಪರಿಶೀಲನಾ ಸಭೆ ಶುಕ್ರವಾರ ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ನಡೆಯಿತು.   
ಭದ್ರಾವತಿ, ಜೂ. ೫: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ ಹಿನ್ನಲೆಯಲ್ಲಿ ಪರಿಶೀಲನಾ ಸಭೆ ಶುಕ್ರವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ನಡೆಯಿತು. 
ಒಂದೆಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಲಾಕ್‌ಡೌನ್ ಸಡಿಲಗೊಳಿಸಲಾಗಿದೆ. ಆದರೂ ಸಹ ಪೂರ್ಣಪ್ರಮಾಣದಲ್ಲಿ ಸಡಿಲಗೊಳ್ಳದ ಕಾರಣ ಹಲವು ಸಮಸ್ಯೆಗಳು ಎದುರಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳು ಹಾಜರಾಗಲು ಅನುಕೂಲವಾಗುವ ಸ್ಥಿತಿ ರೂಪಿಸಿಕೊಳ್ಳುವುದು ಶಿಕ್ಷಣ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. 
  ಸಭೆಯಲ್ಲಿ ಪ್ರಮುಖವಾಗಿ ಮಕ್ಕಳು ಪರೀಕ್ಷೆಗೆ  ಹಾಜರಾಗಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಕೈಗೊಳ್ಳುವ ಸಂಬಂಧ ಚರ್ಚಿಸಲಾಯಿತು. ಎಲ್ಲೆಡೆ ಪೂರ್ಣ ಪ್ರಮಾಣದಲ್ಲಿ ಸಾರಿಗೆ ಸೌಲಭ್ಯವಿಲ್ಲದ ಕಾರಣ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ಬಸ್ ಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಾರ್ಗ ನಕ್ಷೆ ರಚಿಸುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು. 
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಶಿರಸ್ತೆದಾರ್ ಮಂಜಾನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಚಿದಾನಂದ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್, ಶಿಕ್ಷಣ ಸಂಯೋಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.                                                      

ವಿಐಎಸ್‌ಎಲ್ ಸೇರಿದಂತೆ ವಿವಿಧೆಡೆ ಪರಿಸರ ದಿನಾಚರಣೆ

ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕರೆ 

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಇಸ್ಪಾತ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. 
ಭದ್ರಾವತಿ, ಜೂ. ೫: ಇತ್ತೀಚಿನ ವರ್ಷಗಳಲ್ಲಿ ಪರಿಸರ ನಾಶದಿಂದ ಉಂಟಾಗುತ್ತಿರುವ ದುಷ್ಪರಿಣಾಗಳಿಂದ ಎಚ್ಚೆತ್ತುಕೊಂಡಿರುವ ನಾಗರೀಕ ಸಮಾಜ ಇದೀಗ ಪರಿಸರ ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧೆಡೆ ಶುಕ್ರವಾರ ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು. 
ವಿಐಎಸ್‌ಎಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ: 
ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಕೊರೋನಾ ಮಹಾಮಾರಿ ನಾವು ಎಷ್ಟು ಕನಿಷ್ಟ ಸಂಪನ್ಮೂಲಗಳೊಂದಿಗೆ ಬದುಕಬಹುದು ಎಂಬುದನ್ನು ಕಲಿಸಿದೆ. ನಾವೆಲ್ಲರೂ ಪ್ರಕೃತಿಯನ್ನು ರಕ್ಷಿಸಬೇಕು ಹಾಗೂ ಕಾರ್ಖಾನೆಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಕಾರ್ಯಪಾಲಕ ನಿರ್ದೇಶಕ ಕೆಎಲ್‌ಎಸ್ ರಾವ್ ತಿಳಿಸಿದರು.
ಅವರು ಕಾರ್ಖಾನೆಯ ಇಸ್ಪಾತ್ ಭವನದಲ್ಲಿ ಪರಿಸರ ಧ್ವಜಾರೋಹಣ ನೆರವೇರಿಸಿ ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಈ ವರ್ಷದ ಧ್ಯೇಯ ವಾಕ್ಯ ‘ಜೀವ ವೈವಿಧ್ಯತೆ - ಪರಿಸರಕ್ಕೆ ಸಮಯ’ ಎಂಬುದಾಗಿದೆ ಎಂದರು.
ಪರಿಸರ ನೀತಿ ಹಾಗೂ ಪ್ರತಿಜ್ಞೆಯನ್ನು ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆ ಮಂಡಿಸಲಾಯಿತು. ಮುಖ್ಯ ಮಹಾ ಪ್ರಭಂಧಕ(ವರ್ಕ್ಸ್) ಸುರಜಿತ್ ಮಿಶ್ರಾ, ಎಂ. ಕೃಷ್ಣ, ವಿಕಾಸ್ ಬಸೇರ್, ಎಂ.ಎಸ್ ಕುಮಾರ್. ಡಾ. ಎಂ.ವೈ ಸುರೇಶ್. ಕೆ ಹರಿಶಂಕರ್, ಕೆ.ಎನ್ ಸುರೇಶ್  ಹಾಗೂ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು. ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ವಿ.ಎಮ್ ಉನ್ನಿ ಕೃಷ್ಣನ್ ಪ್ರಾರ್ಥಿಸಿದರು. ಲೋಕೇಶ್ವರ್ ಸ್ವಾಗತಿಸಿದರು. ಎಲ್. ಕುತಲನಾಥನ್ ಕಾರ್ಯಕ್ರಮ ನಿರೂಪಿಸಿದರು.
ಮಲೆನಾಡ ಹಸಿರು ತಂಡದವತಿಯಿಂದ ಭದ್ರಾವತಿ ಹೊಸ ಸೇತುವೆ ರಸ್ತೆಯ ಮಧ್ಯ ಭಾಗದ ಡಿವೈಡರ್‌ನಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಮಲೆನಾಡ ಹಸಿರು ತಂಡದಿಂದ ಪರಿಸರ ದಿನ: 
ನಗರದ ಮಲೆನಾಡ ಹಸಿರು ತಂಡದವತಿಯಿಂದ ಹೊಸ ಸೇತುವೆ ರಸ್ತೆಯ ಮಧ್ಯ ಭಾಗದ ಡಿವೈಡರ್‌ನಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಪೌರಾಯುಕ್ತ ಮನೋಹರ್ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆನಂದ್, ಶಿವಲಿಂಗೇಗೌಡ, ವಲಯ ಅರಣ್ಯಾಧಿಕಾರಿ ಸೀನಪ್ಪ ಭೋವಿ, ಸೋಮಶೇಖರ್, ಮಾಲತೇಶ್, ಬಿ.ಎಚ್ ಸೋಮಶೇಖರ್, ನಾಗಪ್ರಸಾದ್, ಬಿ.ಎಸ್ ಮುರಳಿ, ನವೀನ್ ಶೆಟ್ಟಿ, ನವೀನ್ ಎರೆಹಳ್ಳಿ, ಜಗದೀಶ್, ಶಶಿ, ಏಸು, ಪೈಂಟರ್ ಜಗದೀಶ್, ಕಾರ್ಪೆಂಟರ್ ಮಹೇಶ್, ಭರತ್, ಕೆ.ಪಿ ಗಿರೀಶ್, ನವೀನ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.  


ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಮತ್ತು ಸ್ವಚ್ಛ ಮೇವ ಜಯತೆ, ಜಲಾಮೃತ ಹಾಗೂ ನರೇಗ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
        ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಪರಿಸರ ದಿನಾಚರಣೆ: 
ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಮತ್ತು ಸ್ವಚ್ಛ ಮೇವ ಜಯತೆ, ಜಲಾಮೃತ ಹಾಗೂ ನರೇಗ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಗ್ರಾಮದ ರುದ್ರಭೂಮಿಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾ.ಪಂ. ಅಧ್ಯಕ್ಷೆ ರತ್ನಮ್ಮ ಮಂಜಪ್ಪ, ಉಪಾಧ್ಯಕ್ಷ ಎಚ್.ಎಂ ಚಂದ್ರಪ್ಪ, ಅಭಿವೃದ್ಧಿ ಅಧಿಕಾರಿ ಪಿ. ಹನುಮಂತಪ್ಪ, ಕಾರ್ಯದರ್ಶಿ ಎಸ್.ಎಂ ಸತೀಶ್, ಸದಸ್ಯರಾದ ಎಚ್.ಎಲ್ ಲಕ್ಷ್ಮೀಪತಿ, ಕೃಷ್ಣಮೂರ್ತಿ, ವನಪಾಲಕ ವೇಣು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಚನ್ನಬಸಪ್ಪ, ಡಿಎಸ್‌ಎಸ್ ಸಂಚಾಲಕ ರಂಗನಾಥ್, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ನರೇಗ ಯೋಜನೆಯಡಿ ಕೆಲಸ ಮಾಡುತ್ತಿರುವ ಉದ್ಯೋಗಾಕಾಂಕ್ಷಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಡಿ.ಇ.ಓ ಬೈರೇಶ್‌ಕುಮಾರ್ ನಿರೂಪಿಸಿದರು.  
ಭದ್ರಾವತಿ ತಾಲೂಕಿನ ಸಮೀಪದ ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಬಿಆರ್‌ಪಿ ಸಹಯೋಗದೊಂದಿಗೆ ಪರಿಸರ ದಿನ ಆಚರಿಸಲಾಯಿತು. 
        ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ: 
ತಾಲೂಕಿನ ಸಮೀಪದ ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಬಿಆರ್‌ಪಿ ಸಹಯೋಗದೊಂದಿಗೆ ಪರಿಸರ ದಿನ ಆಚರಿಸಲಾಯಿತು. 
ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.  

ಆದಿ ಕರ್ನಾಟಕ ಜನಾಂಗದವರ ಬೇಡಿಕೆಗಳನ್ನು ಈಡೇರಿಸಿ

ಓಡಾಡಲು ರಸ್ತೆ, ನಿವೇಶನಗಳಿಗೆ ಖಾತೆ, ಸ್ಮಶಾನ ಭೂಮಿ ಮಂಜೂರಿಗೆ ಒತ್ತಾಯ 

ಭದ್ರಾವತಿ ತಾಲೂಕಿನ ಕಲ್ಪನಹಳ್ಳಿಯಲ್ಲಿ ಕಳೆದ ಸುಮಾರು ೫೦ ವರ್ಷಗಳಿಂದ ಗ್ರಾಮ ಠಾಣಾ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಆದಿ ಕರ್ನಾಟಕ ಜನಾಂಗದವರ ಬೇಡಿಕೆಗಳನ್ನು ತಕ್ಷಣ ಈಡೇರಿಸಿಕೊಡುವ ಜೊತೆಗೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲೂಕು ಪಂಚಾಯಿತಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೫ : ತಾಲೂಕಿನ ಕಲ್ಪನಹಳ್ಳಿಯಲ್ಲಿ ಕಳೆದ ಸುಮಾರು ೫೦ ವರ್ಷಗಳಿಂದ ಗ್ರಾಮ ಠಾಣಾ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಆದಿ ಕರ್ನಾಟಕ ಜನಾಂಗದವರ ಬೇಡಿಕೆಗಳನ್ನು ತಕ್ಷಣ ಈಡೇರಿಸಿಕೊಡುವ ಜೊತೆಗೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲೂಕು ಪಂಚಾಯಿತಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಪ್ರತಿಭಟನೆ ನಡೆಸಲಾಯಿತು. 
ಕೂಡ್ಲಿಗೆರೆ ಹೋಬಳಿ ಕಲ್ಪನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗದ ೫ ರಿಂದ ೬ ಕುಟುಂಬಗಳು ಸುಮಾರು ೫೦ ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದು, ಈ ಕುಟುಂಬಗಳಿಗೆ ಓಡಾಡಲು ರಸ್ತೆ ಸಹ ಇದುವರೆಗೂ ನಿರ್ಮಿಸಿಕೊಟ್ಟಿರುವುದಿಲ್ಲ. ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಈ ಭಾಗದ ಜನಪ್ರತಿನಿಧಿಗಳು ಸಹ ಗಮನ ಹರಿಸುತ್ತಿಲ್ಲ ಎಂದು ಅಳಲು ವ್ಯಕ್ತಪಡಿಸಲಾಯಿತು.
ತಕ್ಷಣ ಸರ್ಕಾರದ ನಿಯಮಾನುಸಾರ ಓಡಾಡಲು ರಸ್ತೆ ನಿರ್ಮಾಣ ಮಾಡಿಕೊಡಬೇಕು. ವಾಸದ ನಿವೇಶನಗಳಿಗೆ ಖಾತೆ ಮಾಡಿಕೊಡಬೇಕು. ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು. ಗ್ರಾಮದ ಆದಿ ಕರ್ನಾಟಕ ಜನಾಂಗದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರು ಮಾಡಕೊಡಬೇಕು ಹಾಗೂ ಬೇಡಿಕೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯತನ ವಹಿಸಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಿ ಪ್ರಕರಣದ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಯಿತು. 
ಪ್ರಮುಖರಾದ ಜಿಲ್ಲಾ ಸಂಚಾಲಕ ಟಿ.ಎಚ್ ಹಾಲೇಶಪ್ಪ, ಸಂಘಟನಾ ಸಂಚಾಲಕ ಎಂ. ಪಳನಿರಾಜ್, ತಾಲ್ಲೂಕು ಪ್ರಧಾನ ಸಂಚಾಲಕ ಎಂ. ಕುಬೇಂದ್ರಪ್ಪ, ಜಿಲ್ಲಾ ಮಹಿಳಾ ಒಕ್ಕೂಟದ ರತನ್‌ಜ್ಯೋತಿ, ತಾಲೂಕು ಮಹಿಳಾ ಒಕ್ಕೂಟದ ಸಂಚಾಲಕಿ ಯೋಗೇಶ್ವರಿ, ಕಲ್ಲೇಶ್, ಜಗ್ಗು, ಎಚ್. ಲೋಕೇಶ್, ಇಬ್ರಾಹಿಂ ಸಾಬ್, ಆನಂದ ರಾವ್, ನ್ಯಾಮತಿ ಹಾಲಪ್ಪ, ಶಿವನಾಯ್ಕ, ಜಗದೀಶ್, ಕೆ. ಮಂಜಪ್ಪ, ಕರ್ಣ, ತಿಮ್ಮಣ್ಣ ಮತ್ತು ರಮೇಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
೧೫ ದಿನದಲ್ಲಿ ಸಮಸ್ಯೆಗಳಿಗೆ ಪರಿಹಾರ: 
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ೧೫ ದಿನಗಳಲ್ಲಿ ಭೇಡಿಕೆ ಈಡೇರಿಸಿ ಕೊಡುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. 

Thursday, June 4, 2020

ಎಸ್‌ಸಿಪಿ ಟಿಎಸ್‌ಪಿ ಕಾಮಗಾರಿಯಲ್ಲಿ ಅವ್ಯವಹಾರ : ಪ್ರತಿಭಟನೆ

ತಪ್ಪಿತಸ್ಥ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಲು ಆಗ್ರಹ

ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‌ಸಿಪಿ ಟಿಎಸ್‌ಪಿ ಮತ್ತು ವಾರ್ಷಿಕ ನಿರ್ವಹಣೆ(ಜಂಗಲ್ ಕಟಿಂಗ್) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ತಪ್ಪಿತಸ್ಥ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಗುರುವಾರ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸೇರಿದಂತೆ ಇನ್ನಿತರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೪: ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‌ಸಿಪಿ ಟಿಎಸ್‌ಪಿ ಮತ್ತು ವಾರ್ಷಿಕ ನಿರ್ವಹಣೆ(ಜಂಗಲ್ ಕಟಿಂಗ್) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ತಪ್ಪಿತಸ್ಥ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಗುರುವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸೇರಿದಂತೆ ಇನ್ನಿತರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಎಸ್‌ಸಿಪಿ ಟಿಎಸ್‌ಪಿ ಯೋಜನೆಯಡಿ ೨೦೧೮-೨೦೧೯ ಮತ್ತು ೨೦೧೯-೨೦೨೦ನೇ ಸಾಲಿನಲ್ಲಿ ಸುಮಾರು ೧,೮೪,೦೦೦ ರು. ವೆಚ್ಚದಲ್ಲಿ ಕಾಮಗಾರಿಗಳು ನಡೆದಿವೆ. ಕೆಲವು ಭಾಗದಲ್ಲಿ ತಾಂತ್ರಿಕವಾಗಿ ಮಂಜೂರಾತಿ ಆಗಿರುವ ಜಾಗಗಳನ್ನು ಬಿಟ್ಟು ಬೇರೆ ಕಡೆ ಮಾಡಲಾಗಿದೆ. ಅಲ್ಲದೆ ಈ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಅಳತೆ ಪುಸ್ತಕ, ಬಿಲ್ ಪ್ರತಿಗಳು ಸೇರಿದಂತೆ ಕೆಲವು ಮುಖ್ಯ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಆರೋಪಿಸಲಾಯಿತು. 
೨೦೧೯ ಮತ್ತು ೨೦೨೦ ನೇ ಸಾಲಿನ ಎನ್.ಎಂ ರಸ್ತೆ ಎಸ್‌ಎಚ್ ೬೫ರ ಸರಪಳಿ ೧೪೯.೮ ರಿಂದ ೧೮೬.೬ ಕಿ.ಮೀ ಆಯ್ದ ಭಾಗದಲ್ಲಿ ವಾರ್ಷಿಕ ನಿರ್ವಹಣೆ ಕಾಮಗಾರಿ ಮಾಡದೆ ಸುಮಾರು ೨೦ ಲಕ್ಷ ರು. ಬಿಲ್ ಸಂಬಂಧಪಟ್ಟ ಗುತ್ತಿಗೆದಾರರಿಗೆ ಪಾವತಿಸಲಾಗಿದೆ ಎಂದು ದೂರಲಾಯಿತು. 
ಈ ಎಲ್ಲಾ ಅಕ್ರಮಗಳಿಗೆ ಕಾರಣರಾಗಿರುವ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ನಡೆಸುವ ಮೂಲಕ ಕಾನೂನು ಕ್ರಮ ಕೈಗೊಂಡು ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟವನ್ನು ಅವರಿಂದ ಮರುಪಾವತಿಸಬೇಕೆಂದು ಆಗ್ರಹಿಸಲಾಯಿತು. 
ಪ್ರತಿಭಟನೆಯಲ್ಲಿ ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹನುಮಮ್ಮ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್,  ಐ.ವಿ ಸಂತೋಷ್‌ಕುಮಾರ್, ಪುಟ್ಟರಾಜು, ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.