ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಸೇರಿದಂತೆ ನಗರದ ವಿವಿಧೆಡೆ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಭದ್ರಾವತಿ, ಜೂ. ೬: ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಸೇರಿದಂತೆ ನಗರದ ವಿವಿಧೆಡೆ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್, ರೋವರ‍್ಸ್ ಲೀಡರ್ ಪ್ರೊ. ವರದರಾಜ, ರೇಂಜರ‍್ಸ್ ಲೀಡರ್ ಡಾ. ದಾಕ್ಷಾಯಿಣಿ ಎಂ ಡೊಂಗ್ರೆ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಗರಸಭೆ ವ್ಯಾಪ್ತಿಯ ಸುರಗಿತೋಪು ಕೊಳಚೆ ಪ್ರದೇಶದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಪರಿಸರ ದಿನ:
ನಗರಸಭೆ ವ್ಯಾಪ್ತಿಯ ಸುರಗಿತೋಪು ಕೊಳಚೆ ಪ್ರದೇಶದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪ್ರಮುಖರಾದ ಶಿವರಾಜ್, ಉಮೇಶ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನ ವಿಶಿಷ್ಟವಾಗಿ ಆಚರಿಸಲಾಯಿತು.
ಸರ್ಕಾರಿ ಆಸ್ಪತ್ರೆಯಲ್ಲಿ ಪರಿಸರ ದಿನ:
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನ ವಿಶಿಷ್ಟವಾಗಿ ಆಚರಿಸಲಾಯಿತು. ಆಸ್ಪತ್ರೆಯ ಹಿರಿಯ ವೈದ್ಯ ಡಾ. ರವೀಂದ್ರನಾಥ ಕೋಠಿ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಸುಂದರ್‌ಬಾಬುರವರ ಪುತ್ರಿ ಶ್ರೇಷ್ಠ ಹುಟ್ಟುಹಬ್ಬದ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ವೈದ್ಯರಾದ ಡಾ. ವೀರಭದ್ರಪ್ಪ, ಡಾ. ಕವಿತ, ಡಾ. ಮಯೂರಿ, ಡಾ. ಪ್ರೀತಿ, ಡಾ. ಸುದರ್ಶನ್ ರಾವ್, ಡಾ. ಕಿರಣ್, ಡಾ. ಪವನ್, ಡಾ. ವರ್ಷ, ಡಾ. ಜ್ಞಾನಮೂರ್ತಿ, ವಿವಿಧ ವಿಭಾಗಗಳ ಸಿಬ್ಬಂದಿಗಳಾದ ಶೀಲಾ ಮೇರಿ, ಶ್ರೀದೇವಿ, ಶಿಲ್ಪ, ವೆಂಕಟೇಶ್, ಕಿರಣ್, ಸೋಮ, ರಾಜೇಶ್, ಪ್ರವೀಣ್, ಮೋಹನ್, ನಾಗರಾಜ್, ರಾಧಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.