ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಭದ್ರಾವತಿ ರಂಗಪ್ಪ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಗುರುವಾರ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು.
ಭದ್ರಾವತಿ, ಜೂ. ೧೮: ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನಗರದ ರಂಗಪ್ಪ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಗುರುವಾರ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು.
ಶ್ರದ್ದಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಚೀನಾ ನಡೆಯನ್ನು ತೀವ್ರವಾಗಿ ಖಂಡಿಸಿ ಹುತಾತ್ಮ ವೀರ ಸೈನಿಕರ ಹೋರಾಟವನ್ನು ಶ್ಲಾಘಿಸಿದರು. ಭವಿಷ್ಯದಲ್ಲಿ ದೇಶ ಮತ್ತಷ್ಟು ಬಲಿಷ್ಠಗೊಳ್ಳುವ ಜೊತೆಗೆ ನಮ್ಮ ಸೈನಿಕರು ತಕ್ಕ ಉತ್ತರ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಯಾರು ಸಹ ಧೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ ಎಂದರು.
ಆರಂಭದಲ್ಲಿ ಹುತಾತ್ಮ ವೀರ ಯೋಧರಿಗೆ ಪುಷ್ಮ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಕೊನೆಯಲ್ಲಿ ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಶಿವಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಸದಸ್ಯರಾದ ತುಂಗಮ್ಮ, ಕೆ. ಮಂಜುನಾಥ್, ಬಿಜೆಪಿ ಪಕ್ಷದ ಮುಖಂಡರಾದ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಎನ್. ವಿಶ್ವನಾಥರಾವ್, ಹೇಮಾವತಿ ವಿಶ್ವನಾಥ್, ರಾಮನಾಥಬರ್ಗೆ, ವಿಜಯ್, ನಕುಲ್‌ರೇವಣಕರ್, ಧನುಷ್ ಬೋಸ್ಲೆ, ಆನಂದ ಸಾಮಾಜಿಕ ಸೇವಾ ಸಂಸ್ಥೆಯ ಜಿ. ಆನಂದಕುಮಾರ್, ಸುನಿಲ್‌ಗಾಯಕ್‌ವಾಡ್, ವಿಶ್ವ ಹಿಂದೂಪರಿಷತ್ ಪ್ರಮುಖರಾದ ಹಾ. ರಾಮಪ್ಪ, ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.