ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗದ ನೇತಾರ ಡಿ. ದೇವರಾಜ ಅರಸುರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ಆ. ೨೦ರಂದು ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಗುರುವಾರ ಭದ್ರಾವತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೨೫: ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ಎರಡು ದಶಕಗಳ ನಂತರ ನಿವೇಶನರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಸಿದ್ದತೆಗಳು ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗದ ನೇತಾರ ಡಿ. ದೇವರಾಜ ಅರಸುರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ಆ. ೨೦ರಂದು ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ತಾವು ಶಾಸಕರಾಗಿ ಆಯ್ಕೆಯಾದ ನಂತರ ನಿರಂತರ ಪ್ರಯತ್ನದ ಫಲವಾಗಿ ನಿವೇಶನರಹಿತರಿಂದ ನಗರಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ್ದು, ದೀನದಲಿತರು, ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಜೀವನ ನಡೆಸುತ್ತಿರುವವರು ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳ ವಿತರಣೆಗೆ ಕಾತರದಿಂದ ಎದುರು ನೋಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ.೨೦ರಂದು ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಮನವಿ:
ನಗರಸಭೆ ಬೆಳ್ಳಿ ಮಹೋಹತ್ಸವ ಆಚರಣೆಯ ಸವಿನೆನಪಿಗಾಗಿ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ನಗರಸಭೆ ಖಾಲಿ ನಿವೇಶನದಲ್ಲಿ ಸುಮಾರು ೨ ಕೋ. ರೂ. ವೆಚ್ಚದ ಸುಸಜ್ಜಿತವಾದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿ ಸಹಕಾರ ನೀಡಬೇಕು.
ಈಗಾಗಲೇ ಈ ಸಂಬಂಧ ಡಿಸೆಂಬರ್ ೨೧, ೨೦೧೯ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದ್ದು, ಈ ಹಿನ್ನಲೆಯಲ್ಲಿ ಭವನ ನಿರ್ಮಾಣಕ್ಕೆ ಮುಂದಾಬೇಕೆಂದು ಮನವಿ ಮಾಡಲಾಯಿತು.
ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಕಾರ್ಯಾಧ್ಯಕ್ಷೆ ರಮಾವೆಂಕಟೇಶ್, ಗೀತಾ ಶಿವಕುಮಾರ್, ಭಾಗ್ಯಲಕ್ಷ್ಮಿ ಬಸವರಾಜು, ದೇವಿಕಾ ನಾಗರಾಜ್, ಶೈಲಜಾ ರಾಮಕೃಷ್ಣ, ಆರ್. ಮುಕುಂದಯ್ಯ ಮತ್ತು ಜೇವಿಯರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.