ಕಾರ್ಗಿಲ್ ಯೋಧರ ಸ್ಮರಣೆಗಾಗಿ ಭದ್ರಾವತಿ ಹಳೇನಗರದ ನಿವಾಸಿ ಸೂಕ್ಷ್ಮ ಕೆತ್ತನೆಗಳ ಕಲಾವಿದ ಸಚಿನ್ ಎಂ. ವರ್ಣೇಕರ್ ಈ ಬಾರಿ ಕಲಾಕೃತಿ ರಚಿಸಿರುವುದು.
ಭದ್ರಾವತಿ, ಜು. ೨೫: ಕಾರ್ಗಿಲ್ ಯೋಧರ ಸ್ಮರಣೆಗಾಗಿ ಹಳೇನಗರದ ನಿವಾಸಿ ಸೂಕ್ಷ್ಮ ಕೆತ್ತನೆಗಳ ಕಲಾವಿದ ಸಚಿನ್ ಎಂ. ವರ್ಣೇಕರ್ ಈ ಬಾರಿ ಕಲಾಕೃತಿ ರಚಿಸಿದ್ದು, ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಪ್ರಶಸ್ತಿ ಪುರಸ್ಕೃತ ಸಚಿನ್, ಅತಿ ಚಿಕ್ಕದಾದ ೦.೮ ಇಂಚು ಎತ್ತರ ಮತ್ತು ೦.೨೪೦ ಗ್ರಾಂ. ತೂಕದ ಬಂಗಾರದಿಂದ ತಯಾರಿಸಲಾದ ಆಕರ್ಷಕ ಕಲಾಕೃತಿಯನ್ನು ರಚಿಸುವ ಮೂಲಕ ಗಮನ ಸೆಳೆದಿದ್ದು, ಈ ಹಿಂದೆ ಅತಿ ಚಿಕ್ಕದಾದ ಶಿವಲಿಗ, ಆಯೋಧ್ಯೆ ರಾಮಮಂದಿರ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಮಾದರಿಗಳ ಕಲಾಕೃತಿ ರಚಿಸಿದ್ದಾರೆ.
ಕರ್ನಾಟಕ ರಾಮ್ ಸೇನಾ ಸಂಘಟನೆ ತಾಲೂಕು ಅಧ್ಯಕ್ಷರು ಸಹ ಆಗಿರುವ ಸಚಿನ್ ಭಾರತೀಯ ಸೈನಿಕರ ಮೇಲೆ ಅಪಾರ ಗೌರವ ಹೊಂದಿದ್ದು, ಸೈನಿಕರ ಹೋರಾಟ ಸ್ಮರಸಿಕೊಂಡು ಅವರಿಗೆ ಮತ್ತಷ್ಟು ಸ್ಪೂರ್ತಿ ತಂದು ಕೊಡುವ ನಿಟ್ಟಿನಲ್ಲಿ ಈ ಬಾರಿ ಕಲಾಕೃತಿ ರಚಿಸಿದ್ದಾರೆ.