ಶ್ರಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಭದ್ರಾವತಿ ಹೊಸಮನೆ ಶ್ರೀ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗು ಹಣ ಹೋಮ ಮತ್ತು ವಿಶೇಷ ಪೂಜೆ ಜರುಗಿತು.
ಭದ್ರಾವತಿ, ಆ. ೪: ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗಿ ಚೇತರಿಸಿಕೊಳ್ಳುವ ಮೂಲಕ ನಾಡಿನ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಪ್ರಾರ್ಥಿಸಿ ತಾಲೂಕಿನ ಹಲವೆಡೆ ವಿವಿಧ ಸಂಘಟನೆಗಳಿಂದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಶ್ರಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಶ್ರೀ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗು ಹಣ ಹೋಮ ಮತ್ತು ವಿಶೇಷ ಪೂಜೆ ಜರುಗಿತು.
ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಕದಿರೇಶ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ಮುಖಂಡರಾದ ವಿಶ್ವನಾಥ ಕೋಠಿ, ಜಿ. ಆನಂದಕುಮಾರ್, ಎಂ. ಮಂಜುನಾಥ್, ಬಿ.ಎಸ್ ಶ್ರೀನಾಥ್ ಆಚಾರ್, ಹೇಮಾವತಿ, ಸುನೀತಾ, ಮಂಜುಳಾ, ಸರಸ್ವತಿ, ಅನ್ನಪೂರ್ಣ ಸಾವಂತ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಿ.ಎಸ್ ಯಡಿಯೂರಪ್ಪ ಶ್ರೀಘವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೂಡ್ಲಿಗೆರೆ ಗ್ರಾಮದಲ್ಲಿ ವಿಶೇಷ ಪೂಜೆ:
ತಾಲೂಕಿನ ಕೂಡ್ಲಿಗೆರೆ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಿ.ಎಸ್ ಯಡಿಯೂರಪ್ಪ ಶ್ರೀಘವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಆರ್.ಎನ್ ರುದ್ರೇಶ್, ಪ್ರದೀಪ್, ಮಂಜುನಾಥ್, ತಿರುಮಲೈ, ರುದ್ರಮುನಿ, ಜಯಣ್ಣ, ವೆಂಕಟೇಶ್, ಬಸವರಾಜ್, ಚೇತನ್, ಮಹೇಶ್ವರಪ್ಪ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಭದ್ರಾವತಿಯಲ್ಲಿ ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ, ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ, ವಿಶೇಷ ಪೂಜೆ ನೆರವೇರಿಸಲಾಯಿತು.
ಬಿಳಿಕಿ ಮಠದಲ್ಲಿ ರುದ್ರಾಭಿಷೇಕ:
ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ಶ್ರೀ ಜಗದ್ಗುರು ರೇಣುಕಾಚಾರ್ಯ, ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ, ವಿಶೇಷ ಪೂಜೆ ನೆರವೇರಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ನ್ಯಾಯವಾದಿ ಸುಕುಮಾರ್, ಲೋಕೇಶ್‌ರಾವ್, ಅರ್ಜುನ್‌ರಾವ್, ಪ್ರಕಾಶ್, ಅನಂತಸ್ವಾಮಿ, ಗುರುಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.