Friday, August 14, 2020

ವಿಇಎಸ್ ವಿದ್ಯಾಸಂಸ್ಥೆ ಛೇರ‍್ಮನ್ ಎನ್. ಕೃಷ್ಣಪ್ಪ ಹುಟ್ಟುಹಬ್ಬ ಆಚರಣೆ

ಭದ್ರಾವತಿ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಛೇರ‍್ಮನ್ ಎನ್. ಕೃಷ್ಣಪ್ಪರವರ ಹುಟ್ಟುಹಬ್ಬ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಆ. ೧೪: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಛೇರ‍್ಮನ್ ಎನ್. ಕೃಷ್ಣಪ್ಪರವರ ಹುಟ್ಟುಹಬ್ಬ ಸರಳವಾಗಿ ಆಚರಿಸಲಾಯಿತು.
          ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ತಾಲೂಕು ಶಾಖೆ ಅಧ್ಯಕ್ಷರು ಹಾಗು ಕರ್ನಾಟಕ ರಾಜ್ಯ ಸರ್ಕಾರದ ಜಂಟಿ ಸಮಾಲೋಚನಾ ಸಮಿತಿ ಸದಸ್ಯರಾದ ಎನ್. ಕೃಷ್ಣನಪ್ಪರವರು ವಿದ್ಯಾಸಂಸ್ಥೆಯ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ್ದು, ಇವರ ಸೇವೆ ಇನ್ನಷ್ಟು ಲಭಿಸುವಂತಾಗಲಿ ಎಂದು ಅಭಿನಂದಿಸಲಾಯಿತು.
         ಆಡಳಿತ ಮಂಡಳಿಯ ಪ್ರಮುಖರಾದ ರಂಗಸ್ವಾಮಿ, ಎ.ಕೆ ಚಂದ್ರಪ್ಪ, ಸಿ. ಜಯಪ್ಪ, ರಂಗನಾಥಪ್ರಸಾದ್, ಎಂ.ಎಸ್ ಬಸವರಾಜ್, ಶಿವಲಿಂಗೇಗೌಡ ಸೇರಿದಂತೆ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಂಕರರಾಚಾರ್ಯರ ವಿಗ್ರಹ ಅಪವಿತ್ರ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಶ್ರೀ ಶಂಕರಾಚಾರ್ಯರ ವಿಗ್ರಹವನ್ನು ಅಪವಿತ್ರಗೊಳಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಅಖಿಲ ಭಾರತ ಮಾಧ್ವ ಮಹಾಮಂಡಳಿ ವತಿಯಿಂದ ತಾಲೂಕು ಆಡಳಿತಕ್ಕೆ ಶಿರಸ್ತೇದಾರ್ ಮಂಜಾನಾಯ್ಕ ಮೂಲಕ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಆ. ೧೪: ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಶ್ರೀ ಶಂಕರಾಚಾರ್ಯರ ವಿಗ್ರಹವನ್ನು ಅಪವಿತ್ರಗೊಳಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಅಖಿಲ ಭಾರತ ಮಾಧ್ವ ಮಹಾಮಂಡಳಿ ವತಿಯಿಂದ ತಾಲೂಕು ಆಡಳಿತಕ್ಕೆ ಶಿರಸ್ತೇದಾರ್ ಮಂಜಾನಾಯ್ಕ ಮೂಲಕ ಮನವಿ ಸಲ್ಲಿಸಲಾಯಿತು.
       ಶೃಂಗೇರಿ ಶ್ರೀ ಕ್ಷೇತ್ರ ಸಕಲ ಬ್ರಾಹ್ಮಣ ಸಮಾಜದವರಿಗೆ ಹಾಗು ಆಸ್ತಿಕರಿಗೆ ಧಾರ್ಮಿಕ ಸ್ಥಳವಾಗಿದ್ದು, ಇತ್ತೀಚೆಗೆ ಕೆಲವು ಕಿಡಿಗೇಡಿಗಳು ವಿಗ್ರಹ ಅಪವಿತ್ರಗೊಳಿಸಿರುತ್ತಾರೆ. ಈ ಘಟನೆಯನ್ನು ಮಹಾಮಂಡಳಿ ಉಗ್ರವಾಗಿ ಖಂಡಿಸುತ್ತದೆ. ಶೀಘ್ರವಾಗಿ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
     ಪ್ರಮುಖರಾದ ಜಯತೀರ್ಥ, ನರಸಿಂಹಚಾರ್, ರಮಾಕಾಂತ, ಕೇಶವಮೂರ್ತಿ, ರಾಘವೇಂದ್ರ, ಪವನ್ ಉಡುಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಾಲು ಉತ್ಪಾದಕರ ಸಹಕಾರ ಸಂಘದ ಕಾಯದರ್ಶಿ ಲಿಂಗರಾಜು ನಿವೃತ್ತಿ : ಅಭಿನಂದನೆ

ಭದ್ರಾವತಿ ತಾಲೂಕಿನ ಶ್ರೀ ರಾಮನಗರದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲಿಂಗರಾಜುರವರನ್ನು ಶುಕ್ರವಾರ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಆ. ೧೪: ತಾಲೂಕಿನ ಶ್ರೀ ರಾಮನಗರದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲಿಂಗರಾಜುರವರನ್ನು ಶುಕ್ರವಾರ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಲಿಂಗರಾಜುರವರು ತಮ್ಮ ಅವಧಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಸಹಕಾರ ಸಂಘಕ್ಕೆ ಹಲವಾರು ಪ್ರಶಸ್ತಿಗಳನ್ನು ತಂದುಕೊಡುವ ಜೊತೆಗೆ ಶಿವಮೊಗ್ಗ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಂಘ ಎಂಬ ಹೆಗ್ಗಳಿಕೆಗೆ ಕಾರಣಕರ್ತರಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್‌ರವರು ೧ ಲಕ್ಷ ರು. ಚೆಕ್ ವಿತರಿಸುವ ಜೊತೆಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಿ ಅಭಿನಂದಿಸಿದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ರಾಮನಗರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮದ್ಯಪಾನ, ಧೂಮಪಾನ ನಿಷೇಧಕ್ಕೆ ಎಲ್ಲಾ ಜಿಲ್ಲೆ, ತಾಲೂಕು ಮಟ್ಟದಲ್ಲಿ ಹೋರಾಟ : ಲಕ್ಕಣ್ಣ ಗೌಡ

ಭದ್ರಾವತಿಗೆ ಆಗಮಿಸಿದ್ದ ಸಂಯುಕ್ತ ಜನಾತದಳ ಕಾರ್ಯಾಧ್ಯಕ್ಷ ಲಕ್ಕಣ್ಣ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಆ. ೧೪: ರಾಜ್ಯದಲ್ಲಿ ಧೂಮಪಾನ ಮತ್ತು ಮದ್ಯಪಾನ ಸಂಪೂರ್ಣವಾಗಿ ನಿಷೇಧ ಮಾಡಬೇಕೆಂಬುದು ಸಂಯುಕ್ತ ಜನತಾದಳದ ಆಶಯವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ  ಲಕ್ಕಣ್ಣ  ಗೌಡ ತಿಳಿಸಿದರು.
     ಅವರು ನಗರದಲ್ಲಿ ಯುವ ಘಟಕದ ತಾಲೂಕು ಪದಾಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕೆಯೊಂದಿಗೆ ಮಾತನಾಡಿ, ಪಕ್ಷದ ಸಿದ್ದಾಂತದಂತೆ ಹೋರಾಟ ನಡೆಸಲಾಗುತ್ತಿದೆ. ಮೊದಲು ಧೂಮಪಾನ, ಮಧ್ಯಪಾನ ನಿಷೇಧವಾಗಬೇಕು. ಪ್ರಸ್ತುತ ಕೋವಿಡ್-೧೯ರ ಪರಿಣಾಮ ಎಲ್ಲೆಡೆ ಆರ್ಥಿಕ ಸಂಕಷ್ಟ ಎದುರಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಹಣ ಬಲವಂತವಾಗಿ ವಸೂಲಾತಿ ಮಾಡುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇದರ ವಿರುದ್ಧ ಸಹ ಪಕ್ಷ ಹೋರಾಟ ನಡೆಸುತ್ತಿದೆ ಎಂದರು.
      ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಸಮರ್ಥ ಹಾಗೂ ನಿಷ್ಠಾವಂತ ಹೋರಾಟಗಾರರನ್ನು ಗುರುತಿಸಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಲಾಗುವುದು. ರಾಜ್ಯಾಧ್ಯಕ್ಷರಾದ ಮಹಿಳಾ ಜೆ. ಪಟೇಲ್ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಾಗರಾಜ್‌ರವರ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.
     ಜಿಲ್ಲೆಯಲ್ಲಿ ಕೈಗರಿಕಾ ನಗರವಾಗಿರುವ ಭದ್ರಾವತಿ ಇಂದಿನ ಪರಿಸ್ಥಿತಿ ಬಗ್ಗೆ ಹೆಚ್ಚಿನ ಅರಿವಿದೆ. ಈಗಾಗಲೇ ಮುಂದಿನ ದಿನಗಳಲ್ಲಿ ಎಂಪಿಎಂ ಮತ್ತು ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಡೆಸಬೇಕಾದ ಹೋರಾಟದ ಬಗ್ಗೆ ರೂಪುರೇಷೆ ಸಿದ್ದಪಡಿಸಿಕೊಳ್ಳಲಾಗಿದೆ. ಸ್ಥಳೀಯ ಮುಖಂಡರೊಂದಿಗೆ ಹೋರಾಟ ನಡೆಸಲಾಗುವುದು ಎಂದರು.
     ಪಕ್ಷದ ಮುಖಂಡರಾದ ಶಶಿಕುಮಾರ್ ಎಸ್. ಗೌಡ, ಬಾಬು ದೀಪಕ್‌ಕುಮಾರ್, ಗಂಗಾರಾಜ್, ಬಿ.ಆರ್ ಜಗನ್ನಾಥರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, August 13, 2020

ಬಿಜೆಪಿ ಯುವ ಮೋರ್ಚಾ ನೂತನ ಪದಾಧಿಕಾರಿಗಳು


ಭದ್ರಾವತಿ, ಆ. ೧೩: ತಾಲೂಕು ಬಿಜೆಪಿ ಮಂಡಲ ಯುವ ಮೋರ್ಚಾ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
    ಅಧ್ಯಕ್ಷರಾಗಿ ಎಂ. ವಿಜಯ್‌ರಾಜ್, ಉಪಾಧ್ಯಕ್ಷರಾಗಿ ಎಸ್. ಕಿರಣ್‌ಕುಮಾರ್, ಯೋಗೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಕುಲ್ ರೇವಣಕರ್, ಕಾರ್ಯದರ್ಶಿಯಾಗಿ ದೇವರಾಜ್ ಅರಳಿಹಳ್ಳಿ, ಸಚಿನ್ ರೇಣಕರ್, ಖಜಾಂಚಿಯಾಗಿ ವಿಜಯ್ ಮತ್ತು ಸದಸ್ಯರಾಗಿ ಹೇಮಂತ್, ಲಕ್ಷ್ಮಣ್, ಗೋಪಿನಾಥ್, ಜೆ. ಕೃಷ್ಣ, ಆರ್. ಅನಂತು, ಆಕಾಶ್ ಜಿ. ಜಾಧವ್, ಕೆ. ಪುನೀತ್, ಆದರ್ಶ್ ಮತ್ತು ಹೃಷಿಕೇಶ್ ಅವರನ್ನು ನೇಮಕ ಮಾಡಲಾಗಿದೆ.


ಗಲಭೆ ಪೂರ್ವ ನಿಯೋಜಿತ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಆ. ೧೧ರಂದು ನಡೆದಿರುವ ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಭದ್ರಾವತಿಯಲ್ಲಿ ಬಜರಂಗದಳ ವತಿಯಿಂದ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
       ಭದ್ರಾವತಿ, ಆ. ೧೩: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಆ. ೧೧ರಂದು ನಡೆದಿರುವ ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಬಜರಂಗದಳ ವತಿಯಿಂದ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
     ಏಕಾಏಕಿ ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಚ್ಚಿ ಕಂಡ ಕಂಡ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸುವ ಜೊತೆಗೆ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವುದು ಖಂಡನೀಯವಾಗಿದೆ. ಇದೊಂದು ಪೂರ್ವ ನಿಯೋಜಿತ ಗಲಭೆಯಾಗಿದ್ದು, ಸಾರ್ವಜನಿಕರಲ್ಲಿ ಭಯಭೀತಿ ಉಂಟುಮಾಡಿರುವ ಗಲಭೆಕೋರರನ್ನು ತಕ್ಷಣ ಬಂಧಿಸಬೇಕು. ಅಲ್ಲದೆ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಸ್‌ಡಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಲಾಯಿತು.
     ತಾಲೂಕು ಸಂಯೋಜಕ ವಡಿವೇಲು ನೇತೃತ್ವ ವಹಿಸಿದ್ದರು. ನಗರ ಸಹ ಸಂಯೋಜಕ ಎಂ. ರಮೇಶ್, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್, ಎಂಪಿಎಂ ಸೇರಿದಂತೆ ವಿವಿದೆಡೆ ಸ್ವಾತಂತ್ರ್ಯ ದಿನಾಚರಣೆ

ಟಿ.ಜಿ ಬಸವರಾಜಯ್ಯ

ಹಿರಿಯ ಕಾರ್ಮಿಕ ಟಿ.ಜಿ ಬಸವರಾಜಯ್ಯನವರಿಗೆ ಆಹ್ವಾನ

ಭದ್ರಾವತಿ, ಆ. ೧೩: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ವತಿಯಿಂದ ಈ ಬಾರಿ ಕಾರ್ಖಾನೆಯ ಮುಖ್ಯ ದ್ವಾರದಲ್ಲಿ ಹಮ್ಮಿಕೊಳ್ಳಲಾಗಿರುವ ೭೪ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಿರಿಯ ಕಾರ್ಮಿಕ ಟಿ.ಜಿ ಬಸವರಾಜಯ್ಯ ಅವರಿಗೆ ಧ್ವಜಾರೋಹಣ ನೆರವೇರಿಸಲು ಆಹ್ವಾನಿಸಲಾಗಿದೆ.
        ಪ್ರಸ್ತುತ ಕಾರ್ಖಾನೆಯಲ್ಲಿ ನಿವೃತ್ತಿ ಪಡೆಯದೆ ಉಳಿದು ಕೊಂಡಿರುವ ಖಾಯಂ ಕಾರ್ಮಿಕರ ಪೈಕಿ ಬಸವರಾಜಯ್ಯ ಹಿರಿಯರಾಗಿದ್ದು, ಪ್ರಸ್ತುತ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ ಸರಳವಾಗಿ ೯ ಗಂಟೆಗೆ ನಡೆಯಲಿದ್ದು, ಧ್ವಜಾರೋಹಣ ನೆರವೇರಿಸಲು ಆಹ್ವಾನಿಸಿರುವುದಕ್ಕೆ ಎಂಪಿಎಂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
       ವಿಐಎಸ್‌ಎಲ್ ವತಿಯಿಂದ ಸ್ವಾತಂತ್ರ್ಯೋತ್ಸವ :
   ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆ.೧೫ರಂದು ಬೆಳಿಗ್ಗೆ ೮.೩೦ಕ್ಕೆ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆಎಲ್‌ಎಸ್ ರಾವ್ ಧ್ವಜಾರೋಹಣ ನೆರವೇರಿಸಲಿದ್ದು, ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುದಿಲ್ಲ. ಸರಳವಾಗಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕ ಸಂಪರ್ಕ ಇಲಾಖೆ ಮುಖ್ಯ ವ್ಯವಸ್ಥಾಪಕ ಎಲ್ ಪ್ರವೀಣ್‌ಕುಮಾರ್ ಕೋರಿದ್ದಾರೆ.
      ತಾಲೂಕು ಆಡಳಿತದಿಂದ ೭೪ನೇ ಸ್ವಾತಂತ್ರ್ಯೋತ್ಸವ :
ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಧ್ವಜಾರೋಹಣ ನೆರವೇರಿಸುವರು.
     ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಉಪಾಧ್ಯಕ್ಷೆ ನೇತ್ರಾಬಾಯಿ, ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಎಸ್. ರಮೇಶ್, ಜಿ.ಪಂ. ಸದಸ್ಯರಾದ ಜೆ.ಪಿ. ಯೋಗೇಶ್, ಎಸ್. ಮಣಿಶೇಖರ್, ಡಿ.ಆರ್ ರೇಖಾಉಮೇಶ್, ವೀರಭದ್ರಪ್ಪ ಪೂಜಾರಿ, ಎಪಿಎಂಸಿ ಅಧ್ಯಕ್ಷ ಐ.ಈ ಲವೇಶ್‌ಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕ, ಉಪ ಅರಣ್ಯ ಸಂರಕ್ಷನಾಧಿಕಾರಿ ಕೆ.ಎಂ. ಗಮನಗಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.