ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಭಾಂಗಣದಲ್ಲಿ ಬುಧವಾರ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಭದ್ರಾವತಿ, ಸೆ. ೯: ಶಾಲಾ-ಕಾಲೇಜುಗಳು ಪುನರ್ ಆರಂಭಗೊಳ್ಳುವವರೆಗೂ ವಿದ್ಯಾರ್ಥಿಗಳನ್ನು ಸಕ್ರಿಯವಾಗಿರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಜಾರಿಗೆ ತಂದಿರುವ ವಿದ್ಯಾಗಮ ವಿನೂತನ ಯೋಜನೆಯ ಪ್ರಗತಿ ಕುರಿತು ಬುಧವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಈಗಾಗಲೇ ಈ ಯೋಜನೆ ತಾಲೂಕಿನ ಬಹುತೇಕ ಕಡೆ ಯಶಸ್ವಿಗೊಂಡಿದ್ದು, ಯೋಜನೆಯ ಸಾಧಕ-ಬಾಧಕಗಳ ಕುರಿತಂತೆ ಇಲಾಖೆಗೆ ಪತ್ರಗಳು ಬಂದಿವೆ. ಈ ಎಲ್ಲಾ ಬೆಳವಣಿಗೆಗಳನ್ನು ಕುರಿತು ಹಾಗು ಮುಂದೆ ರೂಪಿಸಿಕೊಳ್ಳಬಹುದಾದ ಕ್ರಮಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರಾದ ಆಡಳಿತ ವಿಭಾಗದ ಎನ್.ಎಂ ರಮೇಶ್, ಅಭಿವೃದ್ಧಿ ಯೋಜನೆ ವಿಭಾಗದ ಸುಮಂಗಳ ಪಿ. ಕುಚಿನಾಡ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಎಲ್ಲಾ ಸಿಆರ್‌ಪಿ, ಬಿಆರ್‌ಸಿ ಮತ್ತು ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಅಧಿಕಾರಿಗಳು ಪಾಲ್ಗೊಂಡಿದ್ದರು.