ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಆಡಳಿತ ಕಛೇರಿ ಮುಂಭಾಗದಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ಭದ್ರಾವತಿ, ಸೆ. ೧೫: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಭಾರತರತ್ನ, ನಗರದ ನಿರ್ಮಾತೃ, ಅನ್ನದಾತ ಸರ್.ಎಂ. ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ಕಾರ್ಖಾನೆ ಆಡಳಿತ ಕಛೇರಿ ಮುಂಭಾಗದಲ್ಲಿರುವ ಸರ್.ಎಂ.ವಿ ಪ್ರತಿಮೆಗೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ಮಾಲಾರ್ಪಣೆ ನೆರವೇರಿಸಿ ಗೌರವ ಸಲ್ಲಿಸಿದರು.
ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಸುರಜೀತ್ ಮಿಶ್ರ, ಮಹಾಪ್ರಬಂಧಕರು ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧ್ಯಕ್ಷರು, ಅಧಿಕಾರಿಗಳ ಸಂಘದ ಅಧ್ಯಕ್ಷ ಏ.ಆರ್ ವೀರಣ್ಣ ಹಾಗೂ ವಿವಿಧ ಇಲಾಖೆಗಳು ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಅತಿಥಿ ಗೃಹದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಿದರು.
ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಜನ್ಮ ದಿನಾಚರಣೆ:
ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಅತಿಥಿ ಗೃಹದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಿದರು.
ಕಾರ್ಯಕ್ರಮವನ್ನು ಮಹಾಪ್ರಬಂಧಕರು ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ, ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಅತಿಥಿಗೃಹದ ಅಧಿಕಾರಿಗಳಾದ ಚಂದ್ರಕಾಂತ, ಉಮೇಶ್ ಹುಕ್ಕೆ, ಸಿಬ್ಬಂದಿಗಳಾದ ಮೋಹನ್, ಪ್ರಭಾಕರ್, ಅಸ್ಲಾಂ, ಆದಿನಾರಾಯಣ, ಅಖಿಲ, ಪ್ರತಾಪ್, ರವಿ, ವಿಲ್ಸನ್, ಸೋಮಶೇಖರ್, ಪದ್ಮಮ್ಮ, ಸುಜಾತಮ್ಮ, ಸಾವಿತ್ರಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಸರ್.ಎಂ. ವಿಶ್ವೇಶ್ವರಾಯ ಅಭಿಮಾನ ಬಳಗದಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು. ರೈಲ್ವೆ ನಿಲ್ದಾಣದ ಬಳಿ ಸರ್.ಎಂ.ವಿ ದಿನಾಚರಣೆ:
ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಸರ್.ಎಂ. ವಿಶ್ವೇಶ್ವರಾಯ ಅಭಿಮಾನ ಬಳಗದಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿ ಸಿಹಿ ಹಂಚಲಾಯಿತು. ಅಭಿಮಾನಿ ಬಳಗದ ಪ್ರಮುಖರಾದ ಎನ್. ಕೃಷ್ಣಮೂರ್ತಿ, ಎಂ.ಎಸ್ ಮುರುಳಿ, ಆರ್.ಜಿ ಶ್ರೀನಿವಾಸಶೆಟ್ಟಿ, ಬಿ.ಎಂ ಮಹಾದೇವಯ್ಯ, ರಮೇಶ್, ತಿಮ್ಮಯ್ಯ, ಮಹಾದೇವ, ನಾರಾಯಣ, ಬಿ.ಎಸ್ ಮಂಜುನಾಥ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
ವಿಜ್ಞಾನ ಕಾಲೇಜಿನಲ್ಲಿ ಸರ್.ಎಂ.ವಿ ದಿನಾಚರಣೆ:
ನಗರದ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
ಕಾಲೇಜಿನಲ್ಲಿ ಪ್ರತಿಷ್ಠಾಪಿಸಲಾಗಿರುವ ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎ ವಿಷ್ಣುಮೂರ್ತಿ, ಹಿರಿಯ ಪತ್ರಕರ್ತ ಕೆ.ಎನ್ ರವೀಂದ್ರನಾಥ್(ಬ್ರದರ್), ಎನ್‌ಎಸ್‌ಎಸ್ ಅಧಿಕಾರಿ ಸೋಮಶೇಖರ್, ರೇಂಜರ‍್ಸ್ ಅಂಡ್ ರೋವರ‍್ಸ್ ಅಧಿಕಾರಿಗಳಾದ ವಿ. ಅನಿತಾ, ಕೆ.ಎಸ್ ಗಂಧರ್ವ, ಟಿ.ಎಸ್. ರಶ್ಮಿ, ವಸಂತಕುಮಾರ್ ಹಾಗು ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಭದ್ರಾವತಿ ಎಂಪಿಎಂ ಕಾರ್ಖಾನೆಯಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
ಎಂಪಿಎಂ ಕಾರ್ಖಾನೆಯಲ್ಲಿ ಸರ್‌ಎಂವಿ ದಿನಾಚರಣೆ:
ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ಕಾರ್ಖಾನೆಯಲ್ಲಿರುವ ಸರ್‌ಎಂವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನಾಥ್, ಆಡಳಿತಾಧಿಕಾರಿ ಶ್ರೀನಿವಾಸ್, ಕಾರ್ಖಾನೆಯ ಅರಣ್ಯ ವಿಭಾಗದ ಅರಣ್ಯಾಧಿಕಾರಿ ಆರ್. ರಘುನಾಥ್, ನಗರಾಡಳಿತಾಧಿಕಾರಿ ಸತೀಶ್, ಕಾರ್ಮಿಕ ಸಂಘದ ಅಧ್ಯಕ್ಷ ಧರ್ಮಲಿಂಗ ಸ್ವಾಮಿ, ಕಾರ್ಯದರ್ಶಿ ದಿನೇಶ್, ಕಾರ್ಮಿಕ ಮುಖಂಡ ಎಸ್. ಚಂದ್ರಶೇಖರ್ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.