ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಜನ ಜಾಗೃತಿ ಕಾರ್ಯಕ್ರಮದಲ್ಲಿ ಕಳೆದ ೬ ತಿಂಗಳಿನಿಂದ ಕೊರೋನಾ ವಾರಿಯರ್ಸ್‌ಗಳಾಗಿ ಶ್ರಮಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಭದ್ರಾವತಿ, ಅ. ೨೪: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಜನ ಜಾಗೃತಿ ಕಾರ್ಯಕ್ರಮದಲ್ಲಿ ಕಳೆದ ೬ ತಿಂಗಳಿನಿಂದ ಕೊರೋನಾ ವಾರಿಯರ್ಸ್‌ಗಳಾಗಿ ಶ್ರಮಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.
ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕೊರೋನಾ ಸಂಕಷ್ಟದ ಸಮಯದಲ್ಲಿ ಶ್ರೀಸಾಮಾನ್ಯರ ನೆರವಿಗೆ ಧಾವಿಸಿದ ವಿವಿಧ ಸೇವಾ ಸಂಸ್ಥೆಗಳ ಮುಖಂಡರು, ಪತ್ರಕರ್ತರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರನ್ನು ಗುರುತಿಸಿ ಸನ್ಮಾನಿಸಿದರು.
ಜನ ಜಾಗೃತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಕೇಶವಮೂರ್ತಿ, ನಗರಸಭೆ ಸದಸ್ಯರಾದ ವಿ. ಕದಿರೇಶ್, ಲಕ್ಷ್ಮೀದೇವಿ, ಮುಖಂಡರಾದ ನರಸಿಂಹಚಾರ್, ರಮಾಕಾಂತ್, ಬಾಲಕೃಷ್ಣ, ಶಿವಬಸಪ್ಪ, ಜೆಬಿಟಿ ಬಾಬು ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.