ಸಂಸದ ಬಿ.ವೈ ರಾಘವೇಂದ್ರರಿಗೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ
![](https://blogger.googleusercontent.com/img/b/R29vZ2xl/AVvXsEj6iro1nxRvuOrCWg9Gs31WueqvIKSA7t7HY577CDWprGvlONAIKm_C9xzYnXbMeJa3YPI-aHp2L9bpL4aJdVRUVG0djcqOikxq4i016NUh4D7raEtg2_AvZdBi4fBw50SM3-Zd992XKR0s/w400-h270-rw/D13-BDVT1-751985.jpg)
ಭದ್ರಾವತಿ ನಗರಸಭೆಗೆ ೧೦೦ ಕೋ. ರು. ವಿಶೇಷ ಅನುದಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಂಸದ ಬಿ.ವೈ ರಾಘವೇಂದ್ರರಿಗೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೧೩: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಸದ ಬಿ.ವೈ ರಾಘವೇಂದ್ರರಿಗೆ ನಗರದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನಗರಸಭೆ ಅಸ್ತಿತ್ವಕ್ಕೆ ಬಂದು ೨೫ ವರ್ಷಗಳು ಕಳೆದಿದ್ದು, ಈ ಹಿನ್ನಲೆಯಲ್ಲಿ ಸರ್.ಎಂ ವಿಶ್ವೇಶ್ವರಯ್ಯನವರಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ನಗರಸಭೆ ಜನ್ನಾಪುರ ಎನ್‌ಟಿಬಿ ಶಾಖಾ ಕಛೇರಿ ರ‍್ತೆಯಲ್ಲಿರುವ ನಗರಸಭೆ ಖಾಲಿ ನಿವೇಶನದಲ್ಲಿ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಿಸಲು ೩ ಕೋ.ರು. ಹಾಗು ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ೧೦೦ ಕೋ. ರು. ವಿಶೇಷ ಅನುದಾನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಲಾಗಿದೆ.
ನಗರಸಭೆ ವ್ಯಾಪ್ತಿಯ ೬೯ ಕೆರೆಗಳನ್ನು ಅಭಿವೃದ್ಧಿ ಪಡಿಸಲು ವಿಶೇಷ ಅನುದಾನ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಸುಮಾರು ೫೦೦ ಮನೆಗಳನ್ನು ನಿರ್ಮಿಸಲು ಮಂಜೂರಾತಿ, ನಗರಸಭೆಗೆ ಆದಾಯ ಬರುವ ದೃಷ್ಟಿಯಿಂದ ಅನಧಿಕೃತ ಕಟ್ಟಡ ಹಾಗು ನಿವೇಶನಗಳನ್ನು ಸಕ್ರಮಗೊಳಿಸುವುದು ಮತ್ತು ಎಂಪಿಎಂ ನಗರಾಡಳಿತ ಇಲಾಖೆ ವ್ಯಾಪ್ತಿಗೆ ಒಳಪಡುವ ಕಾಗದನಗರದ ೪,೫,೬,೮ ಮತ್ತು ಆನೆಕೊಪ್ಪ ಕೊಳಚೆ ಪ್ರದೇಶದಲ್ಲಿನ ಅಂಗಡಿಮುಂಗಟ್ಟುಗಳನ್ನು ಖಾಸಗಿಯವರಿಗೆ ವಹಿಸಿಕೊಡುವ ಬದಲು ನಗರಸಭೆ ಆಡಳಿತಕ್ಕೆ ವಹಿಸಿಕೊಡುವಂತೆ ಆಗ್ರಹಿಸಲಾಗಿದೆ.
ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್ , ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಏಳುಕೋಟಿ, ತಾಲೂಕು ನಗರ ಸಂಚಾಲಕ ಆರ್. ತಮ್ಮಯ್ಯ, ತಾಲೂಕು ಸಂಘಟನಾ ಸಂಚಾಲಕ ರವಿನಾಯ್ಕ, ಅಣ್ಣಪ್ಪ, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.