ಕೆಲವೇ ದಿನಗಳಲ್ಲಿ ಸಂಪೂರ್ಣ ತೆರವು ಕಾರ್ಯಾಚರಣೆ
ಶುಕ್ರವಾರ ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ, ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಅಳತೆ ಕಾರ್ಯ ನಡೆದು ಬೌಂಡರಿ ನಿಗದಿಪಡಿಸಲಾಗಿತ್ತು. ಶನಿವಾರ ಮೊದಲ ಹಂತದಲ್ಲಿ ಗುರುತು ಮಾಡಲಾದ ಸ್ಥಳದಲ್ಲಿ ಕಂದಕ ನಿರ್ಮಿಸಲಾಗಿದೆ.
ಭದ್ರಾವತಿ, ಡಿ. ೫ : ಶುಕ್ರವಾರ ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ, ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಅಳತೆ ಕಾರ್ಯ ನಡೆದು ಬೌಂಡರಿ ನಿಗದಿಪಡಿಸಲಾಗಿತ್ತು. ಶನಿವಾರ ಮೊದಲ ಹಂತದಲ್ಲಿ ಗುರುತು ಮಾಡಲಾದ ಸ್ಥಳದಲ್ಲಿ ಕಂದಕ ನಿರ್ಮಿಸಲಾಗಿದೆ.
ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಕಳೆದ ೪-೫ ದಶಕಗಳಿಂದ ಒತ್ತುವರಿ ಮಾಡಿಕೊಂಡು ಬರುತ್ತಿದ್ದು, ಸಮೃದ್ಧವಾದ ಭೂಮಿಯನ್ನಾಗಿ ಪರಿವರ್ತಿಸಿಕೊಂಡು ಅಡಕೆ, ಬಾಳೆ, ತೆಂಗಿನ ತೋಟಗಳನ್ನು ನಿರ್ಮಿಸಿಕೊಂಡಿದ್ದಾರೆ. ಪೌರಾಯುಕ್ತರ ಮನೋಹರ್‌ರವರ ದಿಟ್ಟ ಪ್ರಯತ್ನದಿಂದಾಗಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಮೊದಲ ಹಂತದಲ್ಲಿ ಗುರುತು ಮಾಡಲಾಗಿರುವ ಸ್ಥಳದಲ್ಲಿ ಕಂದಕ ನಿಮಿಸಲಾಗಿದೆ. ಕೆಲವೇ ದಿನಗಳಲ್ಲಿ ಸಂಪೂರ್ಣ ತೆರವು ಕಾರ್ಯಾಚರಣೆ ನಡೆಯಲಿದೆ.
ಇದೆ ರೀತಿ ನಗರಸಭೆ ವ್ಯಾಪ್ತಿಯ ಹಳೇ ಸೀಗೆಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಒತ್ತುವರಿ ಕಾರ್ಯಾಚರಣೆ ಸಹ ನಡೆಸಲಾಗುತ್ತಿದೆ.