Tuesday, December 8, 2020

ಭಾರತ್ ಬಂದ್ ಬೆಂಬಲಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಾಥಾ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ  

ಭದ್ರಾವತಿ ಹುತ್ತಾ ಬಸ್ ನಿಲ್ದಾಣದ ಮುಂಭಾಗ ಜಾಥಾಕ್ಕೆ ಒಕ್ಕೂಟದ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ಚಾಲನೆ ನೀಡಿದರು
ಭದ್ರಾವತಿ, ಡಿ. ೮: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಭಾರತ್ ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಾಥಾ ನಡೆಸಲಾಯಿತು.
    ಹುತ್ತಾಕಾಲೋನಿ ಬಸ್ ನಿಲ್ದಾಣದ ಮುಂಭಾಗ ಜಾಥಾಕ್ಕೆ ಒಕ್ಕೂಟದ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ಚಾಲನೆ ನೀಡಿದರು. ರೈತರು ಮುಖಂಡರು ಮಾತನಾಡಿ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೈತ ಹಾಗು ದಲಿತ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇದರ ವಿರುದ್ಧ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
    ಜಾಥಾ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ತಲುಪಿತು. ತಹಸೀಲ್ದಾರ್ ಮೂಲಕ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಲಾಯಿತು.
    ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲೂಕು ಘಟಕ ಹಾಗು ಜಿಲ್ಲಾ ಮಹಿಳಾ ಘಟಕ, ದಲಿತ ಸಂಘರ್ಷ ಸಮಿತಿ, ಬಿಸಿಯೂಟ ನೌಕರರ ಸಂಘ, ಬ್ಲಾಕ್ ಕಾಂಗ್ರೆಸ್ ಸಮಿತಿ, ಜ್ಯಾತ್ಯತೀತ ಜನಾತದಳ, ಆಮ್ ಆದ್ಮಿ ಪಾರ್ಟಿ, ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಜನಶಕ್ತಿ, ಛಲವಾದಿ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳು ಪ್ರಗತಿಪರ ಸಂಘಟನೆಗಳ ಒಕ್ಕೂಟದೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದವು.
    

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಭಾರತ್ ಬಂದ್ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಾಥಾ ನಡೆಸಲಾಯಿತು.
      ರೈತ ಮುಖಂಡರಾದ ಕೆ.ಟಿ ಗಂಗಾಧರ್, ಎಚ್ ಆರ್ ಬಸವರಾಜಪ್ಪ, ಯಶವಂತರಾವ್ ಘೋರ್ಪಡೆ, ಡಿ.ವಿ ವೀರೇಶ್, ರಾಮಚಂದ್ರರಾವ್, ಹಿರಿಯಣ್ಣಯ್ಯ, ಶರತ್ಚಂದ್ರ, ಮೋಹನ್, ವಸಂತ್, ಕೋಮು ಸೌಹಾರ್ದ ವೇದಿಕೆಯ ಕೆ.ಎಲ್ ಅಶೋಕ್, ರಾಜೇಂದ್ರ, ಪ್ರೊ. ಎಂ. ಚಂದ್ರಶೇಖರಯ್ಯ, ಪೇಪರ್ ಸುರೇಶ್, ಜಿ. ರಾಜು, ಕರ್ನಾಟಕ ಜನಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾರದಮ್ಮ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಅನಿತಾ, ಶಾರದ, ಮಹೇಶ್ವರಿ, ಪದ್ಮಮ್ಮ, ಸುಮಿತ್ರಾ, ಹೇಮಾ, ಸೌಮ್ಯ, ಶಾರದಕುಮಾರಿ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ರವಿಕುಮಾರ್, ಉಮೇಶ್, ದಿಲೀಪ್, ತರುಣ್, ಲೋಕೇಶ್, ಕುಮಾರ್, ರಾಮಕೃಷ್ಣ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಸತ್ಯ, ಚಿನ್ನಯ್ಯ, ಕಾಣಿಕ್‌ರಾಜ್, ರಂಗನಾಥ್, ಹಾಲೇಶಪ್ಪ, ಪಳನಿ, ಕುಬೇಂದ್ರಪ್ಪ, ಆಮ್‌ಆದ್ಮಿ ಪಾರ್ಟಿ ಪ್ರಮುಖರಾದ ಜೋಸೆಫ್, ಮುಳ್ಕೆರೆ ಲೋಕೇಶ್, ಪರಮೇಶ್ವರಚಾರ್, ಎಚ್. ರವಿಕುಮಾರ್, ವಿನೋದ್, ಪರಮೇಶ್‌ನಾಯ್ಕ್, ಜೋಸೆಫ್, ಇಬ್ರಾಹಿಂ ಖಾನ್, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಈರಣ್ಣ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Monday, December 7, 2020

ಭಾರತ್ ಬಂದ್‌ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ

ಸೋಮವಾರ ಸಂಜೆ ಭದ್ರಾವತಿ ಮಿಲಿಟರಿ ಕ್ಯಾಂಪ್ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಭೆ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ನೇತೃತ್ವದಲ್ಲಿ ನಡೆಯಿತು.
    ಭದ್ರಾವತಿ, ಡಿ. ೭: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರೆ ನೀಡಲಾಗಿರುವ ಭಾರತ್ ಬಂದ್‌ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
    ಸೋಮವಾರ ಸಂಜೆ ಮಿಲಿಟರಿ ಕ್ಯಾಂಪ್ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭದ್ರಾವತಿಯಲ್ಲೂ ಸಂಪೂರ್ಣ ಬಂದ್ ನಡೆಸುವ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಬೆಳಿಗ್ಗೆ ೧೦ ಗಂಟೆಗೆ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ, ನಂತರ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.
    ಸಭೆಯಲ್ಲಿ ರೈತ ಮುಖಂಡರಾದ ಎಚ್ ಆರ್ ಬಸವರಾಜಪ್ಪ, ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ರಾಮಚಂದ್ರ, ಡಿ ವಿ ವೀರೇಶ್, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ಪೇಪರ್ ಸುರೇಶ್, ಎಎಪಿ ಪಕ್ಷದ ಎಚ್ ರವಿಕುಮಾರ್, ಇಬ್ರಾಹಿಂ ಖಾನ್, ಭಾಸ್ಕರ್,  ಕರವೇ ಅಧ್ಯಕ್ಷ ಎಂ ಪರಮೇಶ್, ರಾಜೇಂದ್ರ, ಜನಶಕ್ತಿ ಜಿ ರಾಜು, ಪೀರ್ ಶರೀಫ್, ಬಸವರಾಜ ಬಿ ಆನೇಕೊಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಒಕ್ಕಲಿಗರ ನಿಗಮ ಮಂಡಳಿ ಸ್ಥಾಪಿಸಲು ಆಗ್ರಹಿಸಿ ಮನವಿ

ರಾಜ್ಯದಲ್ಲಿ ಒಕ್ಕಲಿಗರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನಿಗಮ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೭: ರಾಜ್ಯದಲ್ಲಿ ಒಕ್ಕಲಿಗರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನಿಗಮ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ತಾಲೂಕು ಒಕ್ಕಲಿಗರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
     ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿದ್ದು, ಎಲ್ಲರನ್ನೂ ಸಮಾನತೆ ತಳಹದಿಯಲ್ಲಿ ನೋಡುವಂತಾಗಬೇಕು. ಈ ಹಿನ್ನಲೆಯಲ್ಲಿ ನಿಗಮ ಮಂಡಳಿ ಸ್ಥಾಪಿಸಿ ಸಮುದಾಯ ಅಭಿವೃದ್ಧಿಗೆ ಮುಂದಾಗಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
     ಸಂಘದ ಕಾರ್ಯದರ್ಶಿ ಪ್ರಶಾಂತ್, ಪ್ರಮುಖರಾದ ಶಾರದ ಅಪ್ಪಾಜಿ, ಟಿ. ವೆಂಟಕೇಶ್, ಧರ್ಮೇಗೌಡ, ಟಿ. ಚಂದ್ರೇಗೌಡ, ಗೊಂದಿ ಜಯರಾಮ್, ರಾಮಕೃಷ್ಣ, ಕರೀಗೌಡ, ಶಶಿಕುಮಾರ್ ಗೌಡ, ಸತೀಶ್‌ಗೌಡ, ಎಂ.ಎಸ್ ಸುಧಾಮಣಿ, ಅನ್ನಪೂರ್ಣ ಸತೀಶ್, ರಾಧಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಹಾಲಿ ಗ್ರಾ.ಪಂ. ಸದಸ್ಯೆ ಹೆಸರೇ ನಾಪತ್ತೆ : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಜಯಕರ್ನಾಟಕ ಜನಪರ ವೇದಿಕೆ ಮೂಲಕ ತಹಸೀಲ್ದಾರ್‌ಗೆ ಮನವಿ

ಭದ್ರಾವತಿ ತಾಲೂಕಿನ ಕೊರಲಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆಯೊಬ್ಬರ ಹೆಸರನ್ನು ರಾಜಕೀಯ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಾಲೂಕು ಕಛೇರಿ ಮುಂಭಾಗ ಸೋಮವಾರ ಪತ್ರಿಭಟನೆ ನಡೆಸಲಾಯಿತು.
    ಭದ್ರಾವತಿ, ಡಿ. ೭: ತಾಲೂಕಿನ ಕೊರಲಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆಯೊಬ್ಬರ ಹೆಸರನ್ನು ರಾಜಕೀಯ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಾಲೂಕು ಕಛೇರಿ ಮುಂಭಾಗ ಸೋಮವಾರ ಪತ್ರಿಭಟನೆ ನಡೆಸಲಾಯಿತು.
    ಈ ಬಾರಿ ಚುನಾವಣೆಗೆ ಸ್ಪರ್ಧಿಸಬಾರದೆಂಬ ದುರುದ್ದೇಶದಿಂದ ಹಾಲಿ ಸದಸ್ಯೆ ಬಿ.ಆರ್ ಸಿಂಧುರವರ ಹೆಸರನ್ನು ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಟ್ಟು ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಕೀಳುಮಟ್ಟದ ಕುತಂತ್ರ ರಾಜಕಾರಣದ ಅಮಿಷಕ್ಕೆ ಬಲಿಯಾಗಿ ಬಿಎಲ್‌ಓ ಹಾಗು ಸಂಬಂಧಪಟ್ಟ ಅಧಿಕಾರಿಗಳು ಈ ಕೃತ್ಯನಡೆಸಿದ್ದಾರೆಂದು ಆರೋಪಿಸಲಾಯಿತು.
ಇಂದೊಂದು ಸಂವಿಧಾನದ ಕಗ್ಗೊಲೆಯಾಗಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ ತಕ್ಷಣ ನಡೆದಿರುವ ತಪ್ಪನ್ನು ಸರಿಪಡಿಸಿ ಚುನಾವಣೆಗೆ ಸ್ಪಧಿಸಲು ಅವಕಾಶ ಕೊಡಬೇಕೆಂದು ಆಗ್ರಹಿಸಲಾಯಿತು.
   ಜನಪರ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಹುಲಗಿ ಕೃಷ್ಣ, ಕಾರ್ಯಾಧ್ಯಕ್ಷ ಮಹಮದ್ ಶಫಿ, ಅಬಿದ್, ಸದಸ್ಯೆ ಬಿ.ಅರ್ ಸಿಂಧು ಹಾಗು ಕೊರಲಕೊಪ್ಪ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಬಾಲಕಿ ಮೇಲೆ ಅತ್ಯಚಾರ ಎಸಗಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

ಬಂಜಾರ ಯುವಕರ ಸಂಘದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಹುರುಗಲುವಾಡಿಯಲ್ಲಿ ವಲಸೆ ಕಾರ್ಮಿಕ ಕುಟುಂಬದ ೧೨ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾವತಿ ತಾಲ್ಲೂಕು ಬಂಜಾರ ಯುವಕರ ಸಂಘ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಡಿ. ೭: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಹುರುಗಲುವಾಡಿಯಲ್ಲಿ ವಲಸೆ ಕಾರ್ಮಿಕ ಕುಟುಂಬದ ೧೨  ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕು ಬಂಜಾರ ಯುವಕರ ಸಂಘ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ತಾಳೆಬಸವಾಪುರ ತಾಂಡದ ದಿವಂಗತ ಪಾಂಡುನಾಯ್ಕ ಶಕುಂತಲ ಬಾಯಿ ದಂಪತಿಯ ಪುತ್ರಿ ಹೊಟ್ಟೆಪಾಡಿಗಾಗಿ ಕೂಲಿ ಕೆಲಸಕ್ಕೆ ಕಬ್ಬು ಕಡಿಯಲು ಹೋಗಿದ್ದಾಗ ಆಅತ್ಯಾಚಾರವೆಸಗಿ ಭೀಕರವಾಗಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಲಕಿಯ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡುವ ಜೊತೆಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಲಾಯಿತು.   
      ಬಂಜಾರ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ  ಕೃಷ್ಣನಾಯ್ಕ, ಪ್ರಮುಖರಾದ ಬಿ. ಪ್ರವೀಣ್ ಕುಮಾರ್, ರವಿನಾಯ್ಕ, ಕೇಶವನಾಯ್ಕ, ಚಂದ್ರನಾಯ್ಕ, ಕುಮಾರ್ ನಾಯ್ಕ, ನಿತಿನ್ ನಾಯ್ಕ, ಸೋಮನಾಯ್ಕ, ರಮೇಶ್ ನಾಯ್ಕ, ಟಿ ಚಂದ್ರೇಗೌಡ, ಎಚ್ ರವಿಕುಮಾರ್, ಬಿ.ವಿ ಗಿರೀಶ್, ಶಶಿಕುಮಾರ್ ಎಸ್ ಗೌಡ, ಸತೀಶ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Sunday, December 6, 2020

ಛಲವಾದಿ ಮಹಾಸಭಾದಿಂದ ಪರಿನಿರ್ವಾಣ ದಿನ : ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಭದ್ರಾವತಿಯಲ್ಲಿ ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ನಗರದ ಬಿ ಎಚ್ ರಸ್ತೆ ಅಂಡರ್ ಬ್ರಿಡ್ಜ್  ಬಳಿಯಿರುವ ಡಾ. ಬಿ ಆರ್ ಅಂಬೇಡ್ಕರ್ ಅಂಬೇಡ್ಕರ್ ಪ್ರತಿಮೆಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
ಭದ್ರಾವತಿ, ಡಿ. ೬: ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ನಗರದ ಬಿ ಎಚ್ ರಸ್ತೆ ಅಂಡರ್ ಬ್ರಿಡ್ಜ್  ಬಳಿಯಿರುವ ಡಾ. ಬಿ ಆರ್ ಅಂಬೇಡ್ಕರ್ ಅಂಬೇಡ್ಕರ್ ಪ್ರತಿಮೆಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
     ಮಹಾಸಭಾ ಅಧ್ಯಕ್ಷ ಸುರೇಶ್, ಪ್ರಮುಖರಾದ ಜಯರಾಜ್, ಈ ಬಿ ಬಸವರಾಜ್, ಛಲವಾದಿ ಕೃಷ್ಣ, ಮಹೇಶ್ ಲೋಕೇಶ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಖಾಸಗಿಕರಣ ಬೇಡ, ಕಾಯಂ, ಗುತ್ತಿಗೆ, ನಿವೃತ್ತ ಕಾರ್ಮಿಕರ ಹಿತ ಕಾಪಾಡಿ

ವಿಐಎಸ್‌ಎಲ್ ಉಳಿಸಿ ಹೋರಾಟ ಸಮಿತಿಯಿಂದ ಸಂಸದ ರಾಘವೇಂದ್ರಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಕರಣಗೊಳಿಸಬಾರದು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಮತ್ತು ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಸಂಸದ ಬಿ.ವೈ ರಾಘವೇಂದ್ರರವರಿಗೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ವಿಐಎಸ್‌ಎಲ್ ಉಳಿಸಿ ಹೋರಾಟ ಸಮಿತಿ ಮನವಿ ಮಾಡಿತು.
    ಭದ್ರಾವತಿ, ಡಿ. ೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಕರಣಗೊಳಿಸಬಾರದು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಮತ್ತು ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಸಂಸದ ಬಿ.ವೈ ರಾಘವೇಂದ್ರರವರಿಗೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ವಿಐಎಸ್‌ಎಲ್ ಉಳಿಸಿ ಹೋರಾಟ ಸಮಿತಿ ಮನವಿ ಮಾಡಿತು.
      ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಖಾಸಗಿಕರಣಗೊಳಿಸಲು ಮುಂದಾಗಿರುವುದು ವಿಷಾದನೀಯ ಬೆಳವಣಿಗೆಯಾಗಿದ್ದು, ಇದಕ್ಕೆ ಅವಕಾಶ ನೀಡಬಾರದು.  ಪ್ರಸ್ತುತ ಕಾರ್ಖಾನೆಯಲ್ಲಿರುವ ಗುತ್ತಿಗೆ ಕಾರ್ಮಿಕರಿಗೆ ಪೂರ್ಣಾವಧಿ ಕೆಲಸ ನೀಡಬೇಕು. ನಿವೃತ್ತ ಕಾರ್ಮಿಕರು ವಾಸಿಸುತ್ತಿರುವ ಮನೆಗಳನ್ನು ಮುಂದುವರೆಸುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.
ಸಮಿತಿ ಮನವಿಗೆ ಸ್ಪಂದಿಸಿದ ಸಂಸದರು, ಉಕ್ಕು ಪ್ರಾಧಿಕಾರದ ಎಎಸ್‌ಪಿ ಮತ್ತು ಎಸ್‌ಎಸ್‌ಪಿ ಕಾರ್ಖಾನೆಗಳಲ್ಲಿ ಯಾವುದಾದರೊಂದು ಕಾರ್ಖಾನೆಯನ್ನು ಖಾಸಗಿಕರಣ ಪ್ರಕ್ರಿಯೆಯಿಂದ ಒಂದು ವೇಳೆ ಕೈಬಿಟ್ಟಲ್ಲಿ ವಿಐಎಸ್‌ಎಲ್‌ಯನ್ನು ಸಹ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನಿಸಲಾಗುವುದು. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೊಂದಿಗೆ ಕಾರ್ಖಾನೆ ಸಮಸ್ಯೆಗಳನ್ನು ಚರ್ಚಿಸಲು ಸಮಯ ನಿಗದಿಪಡಿಸಿಕೊಡುವುದಾಗಿ ಭರವಸೆ ನೀಡಿದರು.
     ಮುಖ್ಯಮಂತ್ರಿಗಳ ಭೇಟಿ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೋರಾಟ ಸಮಿತಿ ಅಧ್ಯಕ್ಷ ಎಸ್ ಎನ್ ಬಾಲಕೃಷ್ಣ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಜೆಡಿಎಸ್ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿ ಶೇಖರ್, ಮುಖಂಡರಾದ ಎಂ.ಎ ಅಜಿತ್ ಅಪ್ಪಾಜಿ, ಬಾಲಕೃಷ್ಣ, ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್, ಮಂಗೋಟೆ ರುದ್ರೇಶ್, ವೆಂಕಟೇಶ್, ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಬಸಂತ ಕುಮಾರ್, ಅಮೃತ್ ಕುಮಾರ್, ಗುತ್ತಿಗೆ ಕಾರ್ಮಿಕರ ಸಂಘದ ಸುರೇಶ್, ರಾಕೇಶ್, ಶ್ರೀನಿವಾಸ್ ಮತ್ತು ನರಸಿಂಹಾಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.