ಅಂತರಾಷ್ಟ್ರೀಯ ಯೋಗ ಪಟು ಡಿ. ನಾಗರಾಜ್
ಭದ್ರಾವತಿ, ಜ. ೧೭: ಅಂತರಾಷ್ಟ್ರೀಯ ಯೋಗ ಪಟು, ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್ ಆನ್‌ಲೈನ್ ಇಂಟರ್‌ನ್ಯಾಷನಲ್ ಯೂನಿಕ್ ಯೋಗ ಕಂಟೆಸ್ಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳ ಕೊಲ್ಕತಾದ ಯೋಗ ಎರ ವತಿಯಿಂದ ಸ್ವಾತಿ ಯೋಗ ಅಂಡ್ ಫಿಟ್ ಪಾಯಿಂಟ್ ಮತ್ತು ಯೋಗ ಆಬ್ಜೇಕ್ಟಿವ್ ಗ್ವೈಡ್ಲೇನ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೪೦ ವರ್ಷ ಮೇಲ್ಪಟ್ಟ ವಯೋಮಾನದವರ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿಕೊಂಡಿದ್ದು, ಪಂದ್ಯಾವಳಿಯಲ್ಲಿ ಇರಾನ್, ಥೈಲಾಂಡ್, ಶ್ರೀಲಂಕಾ, ಸಿಂಗಾಪುರ, ಮಲೇಷಿಯಾ, ವಿಯೆಟ್ನಾಮ್ ಸೇರಿದಂತೆ ವಿವಿಧ ದೇಶಗಳ ಸುಮಾರು ೬೩೦ಕ್ಕೂ ಹೆಚ್ಚು ಯೋಗ ಪಟುಗಳು ಭಾಗವಹಿಸಿದ್ದರು.
ಡಿ. ನಾಗರಾಜ್‌ರವರು ಸುಮಾರು ೩೫ ವರ್ಷಗಳಿಂದ ರಾಷ್ಟ್ರೀಯ, ಅಂತರಾಷ್ಟ್ರೀಯ ಮತ್ತು ರಾಜ್ಯಮಟ್ಟದ ವಿವಿಧ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಸುಮಾರು ೩೦೦ಕ್ಕೂ ಹೆಚ್ಚು ಪದಕಗಳನ್ನು ಪಡೆದುಕೊಂಡಿದ್ದು, ಇವರನ್ನು ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ಆರ್. ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಡಿ. ಪುಟ್ಟೇಗೌಡ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.