ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ವರ್ಷದ ಗಣ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಭದ್ರಾವತಿ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.
ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.
ಭದ್ರಾವತಿ, ಜ. ೨೬: ನಗರದ ವಿವಿಧೆಡೆ ಸರ್ಕಾರಿ ಕಛೇರಿಗಳು, ಶಾಲಾ-ಕಾಲೇಜು, ವಿವಿಧ ಸಂಘ-ಸಂಸ್ಥೆಗಳಲ್ಲಿ ೭೨ನೇ ವರ್ಷದ ಗಣ ರಾಜ್ಯೋತ್ಸವ ಆಚರಿಸಲಾಯಿತು.
ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗಣರಾಜ್ಯೋತ್ಸವ:
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಖಾನೆಯಲ್ಲಿ ಹಲವಾರು ಗುಣಾತ್ಮಕ ಕ್ರಮಗಳ ಮೂಲಕ ವೆಚ್ಚ ಕಡಿಮೆ ಮಾಡಿ ಉತ್ಪಾದನೆಯಲ್ಲಿ ಗಣನೀಯವಾಗಿ ಸುಧಾರಣೆ ಕಂಡು ಕೊಳ್ಳಲಾಗಿದೆ. ಇದರ ಪರಿಣಾಮ ೨೦೨೦ರ ಸಾಲಿನಲ್ಲಿ ೮೪ ಲಕ್ಷ ರು. ಲಾಭ ಗಳಿಸಿದೆ. ಮುಂದಿನ ಇನ್ನೂ ಹೆಚ್ಚಿನ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಮೂಲಕ ಗತವೈಭವ ಮರಳಿ ಪಡೆಯಲು ಪ್ರಯತ್ನಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ೨೦೨೦ರಲ್ಲಿ ಕಾರ್ಖಾನೆಯಲ್ಲಿ ಶ್ರೇಷ್ಠ ಸಾಧನೆ ಮಾಡಿರುವವರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು. ಅಧಿಕಾರಿಗಳ ಹಾಗು ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ನಿರೂಪಿಸಿದರು.
ಗೃಹ ರಕ್ಷಕದಳದಿಂದ ಗಣ ರಾಜ್ಯೋತ್ಸವ :
ನಗರದ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ೭೨ನೇ ವರ್ಷದ ಗಣ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಪೌರಾಯುಕ್ತ ಮನೋಹರ್, ಘಟಕಾಧಿಕಾರಿ ಜಗದೀಶ್, ಹಿರಿಯ ವೈದ್ಯಾಧಿಕಾರಿ ಡಾ. ರವೀಂದ್ರನಾಥ ಕೋಠಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಪೇಪರ್‌ಟೌನ್ ಆಂಗ್ಲ ಶಾಲೆ ಗಣ ರಾಜ್ಯೋತ್ಸವ:
ಕಾಗದನಗರದ ಪೇಪರ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣ ರಾಜ್ಯೋತ್ಸವದಲ್ಲಿ ಎಂಪಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ದತ್ತಾತ್ರೇಯ ಭಾರದ್ವಾಜ್ ಧ್ವಜಾರೋಹಣ ನೆರವೇರಿಸಿದರು.
ಶಾಲೆಯ ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಆಯೋಗ ಆಯೋಜಿಸಿದ್ದ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಟ್ರ್ಯಾಕ್ಟರ್ ರ್‍ಯಾಲಿಗೆ ಬೆಂಬಲ:
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.
ಟ್ರ್ಯಾಕ್ಟರ್ ರ್‍ಯಾಲಿ ಮಧ್ಯಾಹ್ನ ೧೨.೩೦ಕ್ಕೆ ಆರಂಭಗೊಂಡು ನಗರದ ಸಿ.ಎನ್ ರಸ್ತೆ, ಬಿ.ಎಚ್ ರಸ್ತೆ ಮೂಲಕ ಶಿವಮೊಗ್ಗ ತಲುಪಿತು. ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ಪ್ರಮುಖರಾದ ರಾಮಚಂದ್ರರಾವ್, ಮೋಹನ್, ಶರತ್ಚಂದ್ರ, ವೀರೇಶ್, ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸುಮಾರು ೪೦ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದವು.
ಕೇರಳ ಸಮಾಜಂ ವತಿದಿಂದ ಗಣರಾಜ್ಯೋತ್ಸವ :
ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ನಗರದ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.
ಸಮಾಜಂ ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್, ಉಪಾಧ್ಯಕ್ಷರಾದ ವಿ.ಕೆ ಮೊಹಿನ್, ಖಜಾಂಚಿ ಎ. ಚಂದ್ರಶೇಖರ್, ಮಹಿಳಾ ವಿಭಾಗಂ ಕಾರ್ಯದರ್ಶಿ ಎಸ್.ಎಚ್. ಕಲ್ಯಾಣಿ ಶಶಿಧರನ್, ಸಹಕಾರ್ಯದರ್ಶಿ ರೇಖಾಚಂದ್ರನ್ ಮತ್ತು ಸದಸ್ಯರಾದ ಎಸ್. ಕುಮಾರ್, ಶಶಿಕಲಾ ಸುರೇಶ್, ಶೈಲಜಾ ಸುರೇಶ್, ಪ್ರೇಮ ವೇಲಾಯುದನ್, ಕೆ.ಎಸ್ ಯಶೋಧ, ಶಾಂತಮ್ಮ ಅನಿತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.