ಭದ್ರಾವತಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ಸಭೆಯಲ್ಲಿ ಕೆಲವು ಪಂಚಾಯಿತಿಗಳ ಸದಸ್ಯರು ಮೀಸಲಾತಿ ನಿಗದಿ ಸಂಬಂಧ ಉಂಟಾದ ಗೊಂದಲಗಳನ್ನು ಸ್ಥಳದಲ್ಲಿಯೇ ಚರ್ಚಿಸಿ ಬಗೆಹರಿಸಿಕೊಂಡರು.
ಭದ್ರಾವತಿ, ಜ. ೨೮: ತಾಲೂಕಿನ ೪೧ ಗ್ರಾಮ ಪಂಚಾಯಿತಿಗಳ ಪೈಕಿ ೩೭ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಯಿತು.
ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಚಿತ್ರ ಮಂದಿರ(ಡಬಲ್ ಟಾಕೀಸ್)ದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದಲ್ಲಿ ಮೀಸಲಾತಿ ನಿಗದಿ ಸಭೆ ನಡೆಯಿತು.
ಅರಕೆರೆ ಅಧ್ಯಕ್ಷ 'ಎ' ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ದೊಣಬಘಟ್ಟ ಅಧ್ಯಕ್ಷ 'ಎ' ವರ್ಗಕ್ಕೆ, ಉಪಾಧ್ಯಕ್ಷ ಎಸ್.ಸಿ ಮಹಿಳೆ, ಕಲ್ಲಹಳ್ಳಿ ಅಧ್ಯಕ್ಷ 'ಎ'ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ, ಯರೇಹಳ್ಳಿ ಅಧ್ಯಕ್ಷ 'ಎ' ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಸೈದರಕಲ್ಲಹಳ್ಳಿ ಅಧ್ಯಕ್ಷ 'ಎ' ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಸಿದ್ಲೀಪುರ ಅಧ್ಯಕ್ಷ 'ಎ'ವರ್ಗ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ಮಾರಶೆಟ್ಟಿಹಳ್ಳಿ ಅಧ್ಯಕ್ಷ 'ಎ' ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ತಡಸ ಅಧ್ಯಕ್ಷ 'ಎ'ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕಾಗೇಕೋಡಮಗ್ಗಿ ಅಧ್ಯಕ್ಷ 'ಎ' ವರ್ಗ ಮಹಿಳೆ, ಉಪಾಧ್ಯಕ್ಷ 'ಬಿ' ವರ್ಗ ಮಹಿಳೆ, ದಾಸರಕಲ್ಲಹಳ್ಳಿ ಅಧ್ಯಕ್ಷ 'ಬಿ' ವರ್ಗ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಬಾರಂದೂರು ಅಧ್ಯಕ್ಷ 'ಬಿ'ವರ್ಗ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಗುಡಮಘಟ್ಟ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಆಗರದಹಳ್ಳಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಯಡೇಹಳ್ಳಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅರಹತೊಳಲು ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಕಲ್ಲಿಹಾಳ್ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಅರಬಿಳಚಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ವೀರಾಪುರ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ 'ಬಿ'ವರ್ಗ, ದೊಡ್ಡೇರಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಮಾವಿನಕೆರೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಅರಳಿಕೊಪ್ಪ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ತಾವರಘಟ್ಟ ಅಧ್ಯಕ್ಷ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಆನವೇರಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ, ಮಂಗೋಟೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ನಾಗತಿಬೆಳಗಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕೂಡ್ಲಿಗೆರೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕೊಮಾರನಹಳ್ಳಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಅರಳಿಹಳ್ಳಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ, ಅಂತರಗಂಗೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ 'ಎ'ವರ್ಗ, ಕಂಬದಾಳ್ ಹೊಸೂರು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಪಂಗಡ ಮಹಿಳೆ, ಮೈದೊಳಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ಸನ್ಯಾಸಿಕೋಡಮಗ್ಗೆ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ 'ಎ'ವರ್ಗ ಮಹಿಳೆ, ಹನುಮಂತಪುರ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಸಿಂಗನಮನೆ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನಿಂಬೆಗೊಂದಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಅತ್ತಿಗುಂದ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ, ಬಿಳಿಕಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕಾರೇಹಳ್ಳಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮತ್ತು ಹಿರಿಯೂರು ಅಧ್ಯಕ್ಷ ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮೀಸಲಾಗಿದೆ.
ಮೀಸಲಾತಿ ನಿಗದಿ ಸಂಬಂಧ ಕೆಲವು ಪಂಚಾಯಿತಿಗಳ ಸದಸ್ಯರು ಜಿಲ್ಲಾಧಿಕಾರಿಗಳೊಂದಿಗೆ ಪ್ರಶ್ನಿಸಿ ಗೊಂದಲ ಬಗೆಹರಿಸಿಕೊಂಡರು. ಪ್ರಸ್ತುತ ೩೦ ತಿಂಗಳ ಅವಧಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.
ತಾಲೂಕಿನ ಒಟ್ಟು ೪೧ ಗ್ರಾಮ ಪಂಚಾಯಿತಿಗಳ ಪೈಕಿ ಕಳೆದ ತಿಂಗಳು ಡಿಸೆಂಬರ್ನಲ್ಲಿ ೩೫ ಪಂಚಾಯಿತಿಗಳಿಗೆ ಮಾತ್ರ ಚುನಾವಣೆ ನಡೆಸಲಾಯಿತು. ಅವಧಿ ಮುಗಿಯದ ಕಾರಣ ಕೊಮಾರನಹಳ್ಳಿ ಮತ್ತು ವೀರಾಪುರ ಈ ಎರಡು ಗ್ರಾಮ ಪಂಚಾಯಿತಿಗಳಿಗೆ ಹಾಗು ಉಳಿದಂತೆ ಸರ್ಕಾರ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಹೊಳೆಹೊನ್ನೂರು, ಹನುಮಂತಾಪುರ, ಸಿದ್ಲಿಪುರ ಮತ್ತು ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿಲ್ಲ. ಇದೀಗ ಮೀಸಲಾತಿ ೩೭ ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಲಾಗಿದೆ.
ಹಿರಿಯ ಅಧಿಕಾರಿ ವೆಂಕಟೇಶ್ ಬನಕಟ್ಟಿ, ತಹಸೀಲ್ದಾರ್ ಜಿ. ಸಂತೋಷ್ಕುಮಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.