ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಹಿನ್ನಲೆಯಲ್ಲಿ ನಗರಸಭೆಗೆ ಕೆರೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೩ ಬಿ.ಆರ್.ಎಲ್.ಬಿ.ಸಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಬಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೯: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಹಿನ್ನಲೆಯಲ್ಲಿ ನಗರಸಭೆಗೆ ಕೆರೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೩ ಬಿ.ಆರ್.ಎಲ್.ಬಿ.ಸಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಬಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಕಳೆದ ಸುಮಾರು ೨೫ ವರ್ಷಗಳಿಂದ ನಗರಸಭೆ ವ್ಯಾಪ್ತಿಯಲ್ಲಿರುವ ಯಾವುದೇ ಕೆರೆಯ ಬೌಂಡರಿ ನಿಗದಿಪಡಿಸಿಲ್ಲ. ಜೊತೆಗೆ ಅಭಿವೃದ್ದಿ ಸಹ ಕೈಗೊಂಡಿಲ್ಲ. ದಕ್ಷ ಅಧಿಕಾರಿಯಾಗಿರುವ ಮನೋಹರ್ ನಗರಸಭೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ರೈತರಿಗೆ, ದನಗಾಹಿಗಳಿಗೆ ಹಾಗು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೦ ಕೆರೆಗಳನ್ನು ಗುರುತಿಸಿದ್ದು, ತಾಲೂಕು ಆಡಳಿತದಿಂದ ಬೌಂಡರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಕೆರೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.
ಈಗಾಗಲೇ ತಾಲೂಕು ಆಡಳಿತದ ಅಧೀನದಲ್ಲಿರುವ ಸುಮಾರು ೧೭ ಕೆರೆಗಳನ್ನು, ಜಿಲ್ಲಾ ಪಂಚಾಯಿತಿ ಅಧೀನದಲ್ಲಿರುವ ಸುಮಾರು ೧೫ ಕೆರೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ನಗರಸಭೆ ಆಡಳಿತಕ್ಕೆ ಹಸ್ತಾಂತರಿಸಲಾಗಿದೆ. ಕರ್ನಾಟಕ ನೀರಾವರಿ ನಿಗಮದಲ್ಲಿ ಕೆರೆಗಳ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಲಭ್ಯವಿರುವುದಿಲ್ಲ. ಈ ಹಿನ್ನಲೆಯಲ್ಲಿ ನಿಗಮಕ್ಕೆ ಸೇರಿದ ಕೆರೆಗಳನ್ನು ನಗರಸಭೆಗೆ ಹಸ್ತಾಂತರಿಸುವಂತೆ ಮನವಿಯಲ್ಲಿ ಕೋರಲಾಗಿದೆ.
ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮುಖಂಡರಾದ ವಿಶ್ವೇಶ್ವರರಾವ್ ಗಾಯಕ್ವಾಡ್, ಗಿರಿನಾಯ್ದು, ಎನ್. ರಾಮಕೃಷ್ಣ, ಮುರುಗನ್, ಪ್ರಸನ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.