![](https://blogger.googleusercontent.com/img/b/R29vZ2xl/AVvXsEiz7U_vlwFUq6loF13eKp_JMcj9bBhwIxjSTAQpSVv_Iw4KlodwtsNr9lKfx70TI_jcN4bQvwkg4dyd6SEQQ-mBe6SylPW4pvK9VybQ-vDX1f7o1ZUQNAtN5A6sgi0lSwtpE724jURgdi6O/w640-h350-rw/D15-BDVT5-766673.jpg)
ಭದ್ರಾವತಿ ತಾಲೂಕಿನ ವಿವಿಧೆಡೆ ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸೋಮವಾರ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕಿ ಅಮೂಲ್ಯರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಭದ್ರಾವತಿ, ಫೆ. ೧೫: ತಾಲೂಕಿನ ವಿವಿಧೆಡೆ ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸೋಮವಾರ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕಿ ಅಮೂಲ್ಯರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಕೋವಿಡ್-೧೯ರ ಹಿನ್ನಲೆಯಲ್ಲಿ ಕಡಿತಗೊಳಿಸಲಾಗಿದ್ದ ಬಸ್ ಸಂಚಾರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇನ್ನೂ ಸರಿಯಾಗಿ ಆರಂಭಗೊಂಡಿಲ್ಲ. ಬಸ್‌ಗಳ ಸಂಚಾರ ಕಡಿಮೆ ಇದ್ದು, ಇದರಿಂದಾಗಿ ಬಹಳಷ್ಟು ಕಡೆ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು, ಸರ್ಕಾರಿ ಹಾಗು ಖಾಸಗಿ ನೌಕರರು, ಕೂಲಿ ಕಾರ್ಮಿಕರು, ವೃದ್ದರು, ಮಹಿಳೆಯರು ನಗರ ಪ್ರದೇಶಗಳಿಗೆ ಬಂದು ಹೋಗುವುದು ಕಷ್ಟಕರವಾಗಿದೆ ಎಂದು ಅಳಲು ವ್ಯಕ್ತಪಡಿಸಲಾಗಿದೆ.
ತಕ್ಷಣ ಒಂದನೇ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಟಿಪ್ಪು ಸರ್ಕಲ್, ಅನ್ವರ್ ಕಾಲೋನಿ, ಅಮೀರ್ ಜಾನ್ ಕಾಲೋನಿ, ಹೊಳೆಹೊನ್ನೂರು ಮಾರ್ಗವಾಗಿ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರುವರೆಗೆ, ಎರಡನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ಅರಬಿಳಚಿವರೆಗೆ, ಮೂರನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ಹೊಸಮನೆ, ಕಾಚಗೊಂಡನಹಳ್ಳಿ, ದೇವರಹಳ್ಳಿ, ಗುಡ್ಡದ ನೇರಳೆಕೆರೆವರೆಗೆ ಹಾಗು ನಾಲ್ಕನೇ ಮಾರ್ಗವಾಗಿ ತಾಲೂಕಿನ ಹೊಳೆಹೊನ್ನೂರು, ಕೈಮರ, ಕಲ್ಲಿಹಾಳ್, ಮಾರಶೆಟ್ಟಿಹಳ್ಳಿ, ಅರಬಿಳಚಿ, ಅರಬಿಳಚಿ ಕ್ಯಾಂಪ್, ಕೂಡ್ಲಿಗೆರೆ, ಅರಳಿಹಳ್ಳಿ, ಶ್ರೀರಾಮನಗರ, ಸೀಗೆಬಾಗಿ ಮೂಲಕ ಆಲ್ ಮಹಮೂದ್ ಶಾಲೆ, ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಿಂದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ವರೆಗೆ ಮತ್ತು ೫ನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ನ್ಯೂಟೌನ್, ಜಯಶ್ರೀ ಸರ್ಕಲ್, ಮಿಲ್ಟ್ರಿಕ್ಯಾಂಪ್, ಬೊಮ್ಮನಕಟ್ಟೆ, ಹಿರಿಯೂರು, ಗೊಂದಿ, ಹುಣಸೇಕಟ್ಟೆ ಜಂಕ್ಷನ್‌ವರೆಗೆ ಬಸ್ ಸಂಚಾರ ಆರಂಭಿಸುವಂತೆ ಮನವಿ ಮಾಡಲಾಗಿದೆ.
ಎಸ್‌ಡಿಪಿಐ ತಾಲೂಕು ಘಟಕದ ಅಧ್ಯಕ್ಷ ಮಹಮದ್ ತಾಹೇರ್, ಕಾರ್ಯದರ್ಶಿ ಮಹಮದ್ ಗೌಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.