ಕರ್ನಾಟಕ ಜನಶಕ್ತಿ ಅಂಗ ಸಂಸ್ಥೆ 'ಮಹಿಳಾ ಮುನ್ನಡೆ' ವತಿಯಿಂದ ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಚೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.
ಭದ್ರಾವತಿ, ಮಾ. ೮: ನಗರದ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸೋಮವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
ಮಹಿಳಾ ಮುನ್ನಡೆ'ವತಿಯಿಂದ ಮಹಿಳಾ ದಿನಾಚರಣೆ:
ಕರ್ನಾಟಕ ಜನಶಕ್ತಿ ಅಂಗ ಸಂಸ್ಥೆ 'ಮಹಿಳಾ ಮುನ್ನಡೆ' ವತಿಯಿಂದ ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ ಜನ್ನಾಪುರ ಎನ್‌ಟಿಬಿ ಕಚೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.
ನ್ಯೂಟೌನ್ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಭಾರತಿ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶ್ವೇತಾ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಅರಿವಳಿಕೆ ತಜ್ಞೆ ಡಾ. ಪ್ರೀತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
'ಮಹಿಳಾ ಮನ್ನಡೆ' ಅಧ್ಯಕ್ಷೆ ಎನ್ ನಾಗವೇಣಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ವರಲಕ್ಷ್ಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪಾರ್ವತಿ ಸ್ವಾಗತಿಸಿ, ರೂಪಾ ವಂದಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಕರ್ನಾಟಕ ಜನಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹನುಮಮ್ಮ, ಆಮ್ ಆದ್ಮಿ ಪಾರ್ಟಿ ಪ್ರಮುಖರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಕೇರಳ ಸಮಾಜಂ ಮಹಿಳಾ ವಿಭಾಗಂ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.
ಮಹಿಳಾ ದಿನಾಚರಣೆ : ರೋಗಿಗಳಿಗೆ ಬ್ರೆಡ್, ಹಣ್ಣು ವಿತರಣೆ
ಕೇರಳ ಸಮಾಜಂ ಮಹಿಳಾ ವಿಭಾಗಂ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.
ಮಹಿಳಾ ವಿಭಾಗಂ ಅಧ್ಯಕ್ಷೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ಶೋಭ ಬಾಲಚಂದ್ರನ್, ಸಹಕಾರ್ಯದಶಿ ಎಸ್.ಎಚ್ ಕಲ್ಯಾಣಿ ಶಶಿಧರನ್, ರೇಖಾ ಚಂದ್ರಶೇಖರ್, ಸದಸ್ಯರಾದ ಶೈಲಜ ಸುರೇಶ್, ಶಾಂತ, ಸ್ವಾತಿ, ಪುಷ್ಪ ಹಾಗೂ ಕೇರಳ ಸಮಾಜಂ ಅಧ್ಯಕ್ಷ ಗಂಗಾಧರ್, ಪ್ರಧಾನP ರ್ಯದರ್ಶಿ ಜಿ. ಸುರೇಶ್, ಖಜಾಂಚಿ ಎ. ಚಂದ್ರಶೇಖರ್, ಎಸ್.ಕುಮಾರ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಿರಿಯ ವೈದ್ಯ ಡಾ. ರವೀಂದ್ರನಾಥ ಕೋಠಿ, ಡಾ. ವರ್ಷ, ಮೇರಿ ಸಿಸ್ಟರ್, ರಶ್ಮಿ ಕುಲಕರ್ಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಂತರ ನ್ಯೂಟೌನ್ ಮಾರಿಯಮ್ಮ ದೇವಸ್ಥಾನದ ಮುಂಭಾಗ ವಿವಿಧ ಕ್ರೀಡಾ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸೋಮವಾರ ಕಾರ್ಖಾನೆ ಆಡಳಿತ ಕಛೇರಿ ಆವರಣದಲ್ಲಿರುವ ಮಹಾತ್ಮಗಾಂಧಿ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಮಹಿಳಾ ದಿನಾಚರಣೆ:
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸೋಮವಾರ ಕಾರ್ಖಾನೆ ಆಡಳಿತ ಕಛೇರಿ ಆವರಣದಲ್ಲಿರುವ ಮಹಾತ್ಮಗಾಂಧಿ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ಪ್ರಭಾರಿ ಮಹಾಪ್ರಬಂಧಕ (ಸಿಬ್ಬಂದಿ ಮತ್ತು ಆಡಳಿತ), ಮಹಾಪ್ರಬಂಧಕ (ನಗರಾಳಿತ) ವಿಶ್ವನಾಥ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್. ವೀರಣ್ಣ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.
ನ್ಯಾಯವಾದಿ ಬಿ.ಎಸ್ ರೂಪರಾವ್ ಕಾನೂನು ಅರಿವು ಕುರಿತು ಉಪನ್ಯಾಸ ನೀಡಿದರು. ಕರಾಟೆಪಟು ಬಾಲರಾಜ್ ಮತ್ತು ಎಸ್.ಎಲ್ ವಿನೋದ್ ತಂಡದವರು ಮಹಿಳೆಯರಿಗಾಗಿ ಸ್ವಯಂ ರಕ್ಷಣೆ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ವಿಐಎಸ್‌ಎಲ್ ಆಸ್ಪತ್ರೆ ವೈದ್ಯೆ ಡಾ. ಎಸ್. ಕವಿತಾ ಮಹಿಳೆಯರ ಆರೋಗ್ಯ ರಕ್ಷಣೆ ಹಾಗು ನೈರ್ಮಲ್ಯ ಕುರಿತು ಉಪನ್ಯಾಸ ನಡೆಸಿಕೊಟ್ಟರು.
ಡಾ. ಎಸ್. ಕವಿತಾ, ಅಮೃತ, ಕುಸುಮ ಮತ್ತು ಚಂದ್ರಾವತಿ ತಂಡದವರು ಪ್ರಾರ್ಥಿಸಿದರು. ಮಂಜುಶ್ರೀ, ತ್ರಿವೇಣಿ, ರಮ್ಯ ಮತ್ತು ರಕ್ಷಿತ ತಂಡದವರು ಗೀ ಗೀ ಪದ ನಡೆಸಿಕೊಟ್ಟರು.
ರಂಗೋಲೆ ಸ್ಪರ್ಧೆ ಸೇರಿದಂತೆ ಸ್ಪರ್ಧೆಗಳನ್ನು ಆಯೊಜಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಹಾಯಕ ಪ್ರಬಂಧಕಿ ಶೋಭ ನಿರೂಪಿಸಿದರು. ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೂ ಮೊದಲು ಸೈಲ್ ಅಧ್ಯಕ್ಷೆ ಸೋಮ ಮಂಡಲ್ ಮಹಿಳಾ ಉದ್ಯೋಗಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದರು.
ಮಾ.೯ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ :
ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ವತಿಯಿಂದ ಮಾ.೯ರಂದು ಬೆಳಿಗ್ಗೆ ೧೦.೩೦ಕ್ಕೆ ಹಳೇನಗರದ ವೀರಶೈವ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರೇಮಠ, ಬಿಳಿಕಿ ದಿವ್ಯ ಸಾನಿಧ್ಯ ವಹಿಸಲಿಸಲಿದ್ದು, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುವಾಸಿನಿ ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದು, ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ಭಾರತಿ ಶ್ರೀನಿವಾಸ್, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷೆ ಸಿದ್ದಲಿಂಗಯ್ಯ, ಜಿಲ್ಲಾ ಉಪಾಧ್ಯಕ್ಷೆ ಅಕ್ಕಮಹಾದೇವಿ ಸಿದ್ದಲಿಂಗಪ್ಪ ಮಂಡಕ್ಕಿ, ರೇಣುಕಾ ನಾಗರಾಜ್, ಬಿ.ಎಸ್ ಮಹೇಶ್‌ಕುಮಾರ್, ಆರ್.ಎಸ್ ಶೋಭ, ನಂದಿನಿ ಮಲ್ಲಿಕಾರ್ಜುನ, ಕವಿತಾ ಸುರೇಶ್, ಡಿ. ಮಂಜುಳಾ ನಂಜುಂಡಪ್ಪ, ಸೌಭಾಗ್ಯ ಆರಾಧ್ಯ ಮತ್ತು ಗೌರಮ್ಮ ಪಾಲಾಕ್ಷಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.