ಭದ್ರಾವತಿ, ಮಾ. ೯: ಎಚ್‌ಐವಿ/ಏಡ್ಸ್ ನಿಯಂತ್ರಣ ಕುರಿತು ಮನೆ-ಮನೆ ಸಮೀಕ್ಷೆ ಮಾಹಿತಿ ಅಭಿಯಾನ ಮಾ.೧೨ ರಿಂದ ೧೫ರವರೆಗೆ ನಡೆಯಲಿದ್ದು, ಅಭಿಯಾನಕ್ಕೆ ಮಾ.೧೧ರಂದು ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಚಾಲನೆ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದ್ದಾರೆ.
ತಾಲೂಕಿನಾದ್ಯಂತ ಆಶಾ ಕಾರ್ಯಕರ್ತೆಯರು ಹಾಗು ಆರೋಗ್ಯ ಸಿಬ್ಬಂದಿಗಳು ಎಚ್‌ಐವಿ/ಏಡ್ಸ್ ನಿಯಂತ್ರಣ ಕುರಿತು ಮನೆ-ಮನೆ ಸಮಿಕ್ಷೆ ಮಾಡಿ ಸೋಂಕಿನ ತಡೆಗಟ್ಟುವಿಕೆ ಮತ್ತು ನಿಯಂತ್ರಣ, ಸೋಂಕಿತರಿಗೆ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿಯನ್ನು ನೀಡಲಿದ್ದಾರೆ.
ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಿಸುವುದು, ಸೋಂಕು ನಿಯಂತ್ರಣದಲ್ಲಿ ಜನರ ಪಾಲ್ಗೊಳ್ಳುವಿಕೆ ಉತ್ತೇಜಿಸುವುದು, ಐಸಿಟಿಸಿ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪ್ರೇರೇಪಿಸುವುದು ಅಭಿಯಾನದ ಉದ್ದೇಶವಾಗಿದೆ. ಅಭಿಯಾನ ಯಶಸ್ವಿಗೊಳಿಸುವಂತೆ ಡಾ. ಎಂ.ವಿ ಅಶೋಕ್ ಕೋರಿದ್ದಾರೆ.