![](https://blogger.googleusercontent.com/img/b/R29vZ2xl/AVvXsEg4-FkfcGdVg3jvnvvUGzY-pkKZrlpqpfu8tiBLuBaXSZaGG1SE-vfmQ62YzK6JoyTxROlECFMYOsG3JbD9neqGRzcVDlr4bnFqTXp4cZ95TUAhj8FWQ138Bvn03D_6DOmCNm-W6yMOEHNX/w640-h304-rw/D31-BDVT-790582.jpg)
ಇಲ್ಲಿಗೆ ಸಮೀಪದ ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ಪೈಂಟ್‌ರ್ ಸಂಘದ ಉದ್ಘಾಟನೆ, ಕೋವಿಡ್-೧೯ ಕುರಿತು ಆರೋಗ್ಯ ಜಾಗೃತಿ ಮತ್ತು ಮಹಿಳಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್ ಉದ್ಘಾಟಿಸಿದರು.
ಭದ್ರವತಿ, ಮಾ. ೩೧: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಸಂಘಟನೆ ಹೆಚ್ಚು ಕ್ರಿಯಾಶೀಲವಾಗಬೇಕೆಂದು ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್ ಹೇಳಿದರು.
ಅವರು ಬುಧವಾರ ಇಲ್ಲಿಗೆ ಸಮೀಪದ ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ಪೈಂಟ್‌ರ್ ಸಂಘದ ಉದ್ಘಾಟನೆ, ಕೋವಿಡ್-೧೯ ಕುರಿತು ಆರೋಗ್ಯ ಜಾಗೃತಿ ಮತ್ತು ಮಹಿಳಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಟ್ಟಡ ಕಾರ್ಮಿಕರು ಇಂದಿಗೂ ಬಡತನ ರೇಖೆಯಿಂದ ಹೊರಬಂದಿಲ್ಲ. ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಸರ್ಕಾರ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಆದರೂ ಸಹ ಯೋಜನೆಗಳು ಸಮರ್ಪಕವಾಗಿ ತಲುಪುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ವಿಶೇಷವಾಗಿ ಮಹಿಳಾ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ. ಮಹಿಳೆಯರು ಸಹ ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಶ್ರೀ ಕ್ಷೇತ್ರದ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ವಿವರಿಸಿದರು.
ಜಿಲ್ಲಾಧ್ಯಕ್ಷ ಸುಬ್ರಮಣಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ತಾಲೂಕು ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ತಾಲೂಕು ಅಧ್ಯಕ್ಷ ನಾಗರಾಜ್, ಪೈಂಟರ್ ಸಂಘದ ಅಧ್ಯಕ್ಷ ಶಿವಣ್ಣ, ಮಹಿಳಾ ಘಟಕದ ಪದಾಧಿಕಾರಿಗಳಾದ ವಿಜಿಯಮ್ಮ, ಇಂಚರ, ಪ್ರಮುಖರಾದ ನಾರಾಯಣಸ್ವಾಮಿ, ಚಂದ್ರಶೇಖರ್, ಶಿವಣ್ಣ, ಶ್ರೀನಿವಾಸ್, ಷಣ್ಮುಖಂ, ಸಂಪತ್, ಅಭಿಲಾಶ್, ಮನೋಹರ್, ಸುಬ್ಬು, ಮಂಜುನಾಥ್, ರಘು, ಮಾರಸ್ವಾಮಿ, ಆರ್‍ಮುಗಂ, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.