![](https://blogger.googleusercontent.com/img/b/R29vZ2xl/AVvXsEis6GQ73BWyN1aBCY6xUCrmT9pZMmSveKDn34ISLpLhefQuloOcxxzrQqwEk9zlh7HF9FjrTP68LYXyg5bdRk1BKVLgvmbC60m3klxT5LilULtv8tLoG76Pb6KDQsgbKTkka14pQe6Plv-s/w640-h248-rw/D9-BDVT5-755857.jpg)
ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ನಗರದ ಪದ್ಮನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ ಹಾಗು ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪ ಮಾತನಾಡಿದರು.
ಭದ್ರಾವತಿ, ಏ. ೯: ಸಾಹಿತ್ಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಮುಖ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪ ಹೇಳಿದರು.
ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ನಗರದ ಪದ್ಮನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ ಹಾಗು ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಯಾವುದೇ ಸಾಹಿತ್ಯ ಚಟುವಟಿಕೆಗಳು ಸಹ ಪಾರದರ್ಶಕವಾಗಿರಬೇಕೆಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಯೊಂದು ಚಟುವಟಿಕೆಗಳನ್ನು ಮುಕ್ತವಾಗಿರಸಲಾಗಿದೆ. ಪರಿಷತ್ ಕಾರ್ಯ ವೈಖರಿಗಳ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲೂ ಇದೆ ರೀತಿಯ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದರು.
ಪರಿಷತ್ ಜಿಲ್ಲಾ ಉಪಾಧ್ಯಕ್ಷ ಎಚ್.ಎನ್ ಮಹಾರುದ್ರಾ, ತಾಲೂಕು ಪರಿಷತ್ ಅಧ್ಯಕ್ಷ ಅಪೇಕ್ಷಾ ಮಂಜುನಾಥ್, ಉಪಾಧ್ಯಕ್ಷ ಡಾ. ಬಿ.ಎಂ ನಾಸಿರ್‌ಖಾನ್ ಸೇರಿದಂತೆ ಇನ್ನಿತರರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಪ್ರಸ್ತುತ ತನ್ನತನವನ್ನು ಕಾಯ್ದುಕೊಳ್ಳುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಜಿಲ್ಲಾ ಘಟಕದ ಪ್ರತಿಯೊಂದು ಕಾರ್ಯಚಟುವಟಿಕೆಗಳು ಇಂದು ಮುಕ್ತವಾಗಿವೆ. ಇದಕ್ಕೆ ಪರಿಷತ್‌ನ ಅಧ್ಯಕ್ಷರಾದ ಡಿ.ಬಿ ಶಂಕರಪ್ಪನವರ ಪರಿಶ್ರಮ ಕಾರಣವಾಗಿದೆ ಎಂದರು.
ನಗರಸಭೆ ಪೌರಾಯುಕ್ತ ಮನೋಹರ್, ಹಿರಿಯ ಅಧಿಕಾರಿ ಕೆ.ಜೆ ತಮ್ಮಣ್ಣಗೌಡ, ಪರಿಷತ್ ಕಾರ್ಯದರ್ಶಿಗಳಾದ ಸಿ. ಚನ್ನಪ್ಪ, ವೈ.ಕೆ ಹನುಮಂತಯ್ಯ, ಖಜಾಂಚಿ ಸತ್ಯಮೂರ್ತಿ, ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉದ್ಯಮಿ ಎ. ಮಾಧುಸ್ವಾಮಿ, ಪ್ರಮುಖರಾದ ಸಿದ್ದಲಿಂಗಯ್ಯ, ಆಂಜನೇಯ, ಎನ್. ಮಂಜುನಾಥ್, ದಿವಾಕರ್, ಜೆ.ಎನ್ ಬಸವರಾಜಪ್ಪ, ಕತ್ತಲಗೆರೆ ತಿಮ್ಮಪ್ಪ, ಅರಳೇಹಳ್ಳಿ ಅಣ್ಣಪ್ಪ, ರಾಮಾಚಾರಿ, ಮಂಜುನಾಥ್, ಕಾಂತಪ್ಪ, ಮಹಿಳಾ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.