ಭದ್ರಾವತಿ, ಏ. ೧೪: ಕೊರೋನಾ ನಡುವೆಯೂ ನಗರದ ವಿವಿಧೆಡೆ ಬುಧವಾರ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮ ದಿನ ಅದ್ದೂರಿಯಾಗಿ ಆಚರಿಸಲಾಯಿತು.
ಮಕ್ಕಳನ್ನು ವಿದ್ಯಾವಂತರನ್ನಾಗಿಸಿ :
ನಗರದ ರಂಗಪ್ಪವೃತ್ತ ಸಮೀಪ ಜೈಭೀಮಾ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ದಲಿತರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಿದಾಗ ಮಾತ್ರ ಅಂಬೇಡ್ಕರ್‌ರವರ ಆಶಯ ಈಡೇರಿದಂತಾಗುತ್ತದೆ. ಪ್ರತಿಯೊಬ್ಬರು ಅಂಬೇಡ್ಕರ್‌ರವರ ಆಶಯದಂತೆ ನಡೆದುಕೊಳ್ಳಬೇಕೆಂದರು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್, ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ, ಕಂದಾಯಾಧಿಕಾರಿ ಪ್ರಶಾಂತ್, ಮಾರುತಿ ಮೆಡಿಕಲ್ ಆನಂದ್, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ತಾಲೂಕು ಸಂಚಾಲಕ ರಂಗನಾಥ್, ನೌಕರರ ಒಕ್ಕೂಟದ ಸಿ. ಜಯಪ್ಪ, ಎಸ್. ಉಮಾ, ನಗರಸಭೆ ಎನ್. ಗೋವಿಂದ, ನವೀನ್, ಹರೀಶ್, ಮಂಜು, ಶಂಕರ್, ಶಶಿ, ಕಿರಣ್, ನಾಗರಾಜ್, ಮಂಜುನಾಥ್, ಎಂ. ಕೃಷ್ಣ, ಗಂಗಾಧರ್, ಕೇಶವ, ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಿಗರ್ತಿಕರು, ಅಂಗವಿಕಲರಿಗೆ ಉಚಿತ ಕ್ಷೌರ :
ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನದ ಅಂಗವಾಗಿ ತಾಲೂಕು ಸವಿತಾ ಸಮಾಜ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ನಿಗರ್ತಿಕರು, ಅಂಗವಿಕಲರಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು.
ದಾನಿ ಮಾರುತಿ ಮೆಡಿಕಲ್ಸ್ ಆನಂದ್, ತಾಲೂಕು ಸವಿತಾ ಸಮಾಜ ಅಧ್ಯಕ್ಷ ವಿಶ್ವನಾಥ್, ಪ್ರಮುಖರಾದ ಮಹೇಶ್, ಗೋಪಿ, ಕರಾವೇ ತಾಲೂಕು ಅಧ್ಯಕ್ಷ ಎಂ. ಪರಮೇಶ್ ಹಾಗು ದಯಾಸಾಗರ್ ಟ್ರಸ್ಟ್‌ನ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಂಬೇಡ್ಕರ್ ಭವನ ಮುಂಭಾಗ :
ನಗರದ ಹೃದಯ ಭಾಗದಲ್ಲಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ ಮುಕ್ತಾಯದ ಹಂತದಲ್ಲಿರುವ ಅಂಬೇಡ್ಕರ್ ಭವನದ ಮುಂಭಾಗ ಈ ಬಾರಿ ವಿಶೇಷವಾಗಿ ಅಂಬೇಡ್ಕರ್ ಭವನ ಹೋರಾಟ ಸಮಿತಿ ವತಿಯಿಂದ ಅಂಬೇಡ್ಕರ್ ಜನ್ಮ ದಿನ ಆಚರಿಸಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಸಿಹಿ ಹಂಚಲಾಯಿತು. ಹೋರಾಟ ಸಮಿತಿಯ ಪ್ರಮುಖರಾದ ವಿಜಿಯಮ್ಮ, ಬಿ.ಎನ್ ರಾಜು, ಚಂದ್ರಶೇಖರ್, ಸುಬ್ಬೇಗೌಡ, ಬ್ರಹ್ಮಲಿಂಗಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ :
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು. ಆಕಾಶ್, ಮನು, ಅಖಿಲೇಶ್, ಅಶ್ರಿತ, ಸ್ಪೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಛಲವಾದಿ ಸಮಾಜ(ಪರಿಶಿಷ್ಟ ಜಾತಿ):
ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿ ಸಮಾಜದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು.
ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಂ ಮಹಾದೇವಯ್ಯ, ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಲೋಕೇಶ್ ಮಾಳೇನಹಳ್ಳಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಆಮ್ ಆದ್ಮಿ ಪಾರ್ಟಿ :
ಆಮ್ ಆದ್ಮಿ ಪಾರ್ಟಿ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು. ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು.
ಪಕ್ಷದ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಇಬ್ರಾಹಿಂ ಖಾನ್, ಗೀತಾ, ಬಸವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಛಲವಾದಿ ಮಹಾಸಭಾ:
ತಾಲೂಕು ಛಲವಾದಿ ಮಹಾಸಭಾ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು. ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು.
ಮಹಾಸಭಾ ತಾಲೂಕು ಅಧ್ಯಕ್ಷ ಸುರೇಶ್, ಮುಖಂಡರಾದ ಜಯರಾಜ್, ಈ.ಪಿ ಬಸವರಾಜ್, ಜಗದೀಶ್, ಆದಿತ್ಯಶಾಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬಂಜಾರ ಯುವಕರ ಸಂಘ :
ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ಸಿರಿಯೂರು ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು.
ಸಿರಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ್, ಪ್ರಮುಖರಾದ ಶೋಭಾಬಾಯಿ, ಅರುಣ್‌ನಾಯ್ಕ, ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬಿಜೆಪಿ ನಗರಸಭೆ ೧೦ನೇ ವಾರ್ಡ್ :
ಭಾರತೀಯ ಜನತಾ ಪಕ್ಷ ನಗರಸಭೆ ೧೦ನೇ ವಾರ್ಡ್‌ನ ಪ್ರಮುಖರು ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನದ ಅಂಗವಾಗಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಕರ್ನಾಟಕ ರಾಜ್ಯ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಮಲ್ಲೇಶ್, ಸುನಿಲ್ ಗಾಯಕ್‌ವಾಡ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಿಶ್ವೇಶ್ವರಾಯ ವಿದ್ಯಾಸಂಸ್ಥೆ :
ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು.
ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪದನಿಮಿತ್ತ ಅಧ್ಯಕ್ಷ ಎನ್. ಕೃಷ್ಣಪ್ಪ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಾಧ್ಯಾಪಕ ಡಾ. ಧನಂಜಯ, ಎಂ.ಎಸ್ ಬಸವರಾಜ್, ಕೆ. ನಿಂಗಪ್ಪ, ಶಿವಲಿಂಗೇಗೌಡ, ಎ.ಎಚ್ ಶಕುಂತಲಾ, ಎಂ. ಹೇಮಾವತಿ, ಜೆಸಿಂತಾ ಕೆ. ಚೈತ್ರ, ಕವಿತಾ, ಆರ್. ರವಿ, ಶಿಲ್ಪ, ಎನ್. ರೇಣುಕಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.