ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಬುಧವಾರ ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದಲ್ಲಿ ಬಿಜೆಪಿ ಜನ್ನಾಪುರ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಮೇ. ೫: ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಬುಧವಾರ ನಗರದ ನ್ಯೂಟೌನ್ ಜಯಶ್ರೀ ವೃತ್ತದಲ್ಲಿ ಬಿಜೆಪಿ ಜನ್ನಾಪುರ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜನ್ನಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಕುಮಾರ್, ಪ್ರಮುಖರಾದ ಶಿವಕುಮಾರ್, ಸುರೇಶ್, ಗಾಯತ್ರಿ, ಚಿನ್ಮಯ, ಮಂಜುನಾಥ್, ಶಿವಕುಮಾರ್ ರವರು, ರೂಪ ನಾಗರಾಜ್, ಬೂತ್ ಅಧ್ಯಕ್ಷ ರಕ್ಷಿತ್, ಪ್ರದೀಪ್, ಕಿರಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಹೊಸಮನೆ ಶಕ್ತಿ ಕೇಂದ್ರ :
ಹೊಸಮನೆ ಶಕ್ತಿ ಕೇಂದ್ರದ ವತಿಯಿಂದ ಹೊಸಮನೆ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಹೊಸಮನೆ ಶಕ್ತಿ ಕೇಂದ್ರದ ಅಧ್ಯಕ್ಷ ರಾಮನಾಥ್ ಬರ್ಗೆ, ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.