Saturday, May 15, 2021

ರಕ್ಮಾಬಾಯಿ ನಿಧನ

ರಕ್ಮಾಬಾಯಿ
    ಭದ್ರಾವತಿ, ಮೇ. ೧೫: ಹಳೇನಗರದ ದೊಡ್ಡಕುರುಬರ ಬೀದಿ ನಿವಾಸಿ ರಕ್ಮಾಬಾಯಿ(೮೫) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. 
ಪತಿ ನಿವೃತ್ತ ಮುಖ್ಯ ಪೇದೆ ಟಿ.ಟಿ ರಂಗಪ್ಪ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳು, ಮೊಮ್ಮಕ್ಕಳನ್ನು ಹಾಗು ಮರಿಮೊಮ್ಮಕ್ಕಳನ್ನು ಹೊಂದಿದ್ದರು. ಹಳೇನಗರ ಭಾಗದಲ್ಲಿ ಚಿರಪರಿಚಿತರಾಗಿದ್ದರು. ಮೃತರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 

Friday, May 14, 2021

ಬಸವ ಜಯಂತಿಯಂದು ಭದ್ರಾವತಿ ೧೦೩ ಸೋಂಕು ಪತ್ತೆ

   ಭದ್ರಾವತಿ, ಮೇ. ೧೪: ರಾಜ್ಯ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿಗೊಳಿಸಿ ೫ ದಿನ ಕಳೆದಿದ್ದು, ಈ ನಡುವೆಯೂ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿಲ್ಲ. ಶುಕ್ರವಾರ ೧೦೩ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
   ಒಟ್ಟು ೨೦೪ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೦೩ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ೧೨೯ ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಒಂದು ಬಲಿಯಾಗಿದ್ದು, ಇದುವರೆಗು ಒಟ್ಟು ೫೯ ಮಂದಿ ಮೃತಪಟ್ಟಿದ್ದಾರೆ. ೩೮೨ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು ೨೫ ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ೨ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಹಸಿದವರಿಗೆ ನೆರವು : ವಿವಿಧ ಸಂಘ-ಸಂಸ್ಥೆಗಳಿಂದ ಮುಂದುವರೆದ ಸೇವಾ ಕಾರ್ಯ

ಭದ್ರಾವತಿಯಲ್ಲಿ ಜೀವಾಮೃತ ಚಾರಿಟಬಲ್ ಟ್ರಸ್ಟ್ ಕೈಗೊಂಡಿರುವ ೧೧ನೇ ದಿನದ ಸೇವಾ ಕಾರ್ಯದಲ್ಲಿ ಟೊಮೊಟೋ ಬಾತ್ ಹಾಗು ಮೈಸೂರು ಪಾಕ್ ತಯಾರಿಸಿ ಹಸಿವಿನಿಂದ ಸಂಕಷ್ಟದಲ್ಲಿ ಬಳಲುತ್ತಿರುವವರಿಗೆ ವಿತರಿಸಲಾಯಿತು.
    ಭದ್ರಾವತಿ, ಮೇ. ೧೪: ಸೆಮಿ ಲಾಕ್‌ಡೌನ್ ಪರಿಣಾಮ ಸಂಕಷ್ಟಕ್ಕೆ ಒಳಗಾಗಿ ಹಸಿವಿನಿಂದ ಬಳಲುತ್ತಿರುವವರ ನೆರವಿಗೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳು ಮುಂದಾಗುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
    ಕೆಲವು ಸಂಘಟನೆಗಳು ದೊಡ್ಡ ಪ್ರಮಾಣದಲ್ಲಿ ನೆರವಿಗೆ ಮುಂದಾಗಿವೆ. ಇನ್ನೂ ಕೆಲವು ತಮಗೆ ಸಾಧ್ಯವಿರುವಷ್ಟು ಮಟ್ಟಿಗೆ ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಒಟ್ಟಾರೆ ಎಲ್ಲಾ ಸಂಘಟನೆಗಳು ಮಾನವೀಯ ನೆಲೆಯಲ್ಲಿ ಸೇವಾ ಕಾರ್ಯಕ್ಕೆ ಮುಂದಾಗಿವೆ.
        ೧೧ನೇ ದಿನ ಪೂರೈಸಿದ ಜೀವಾಮೃತ ಚಾರಿಟಬಲ್ ಟ್ರಸ್ಟ್:
      ಜೀವಾಮೃತ ಚಾರಿಟಬಲ್ ಟ್ರಸ್ಟ್ ಕೈಗೊಂಡಿರುವ ೧೧ನೇ ದಿನದ ಸೇವಾ ಕಾರ್ಯಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯನವರ ಹುಟ್ಟುಹಬ್ಬ ಹಾಗು ಶ್ರೀ ಜಗಜ್ಯೊತಿ ಬಸವೇಶ್ವರರ ಜನ್ಮದಿನಾಚರಣೆ ಅಂಗವಾಗಿ ಒಂದು ದಿನದ ನೆರವು ನೀಡಲಾಯಿತು.
     ಶುಕ್ರವಾರ ವಿಶೇಷವಾಗಿ ಟೊಮೊಟೋ ಬಾತ್ ಮತ್ತು ಮೈಸೂರ್ ಪಾಕ್ ತಯಾರಿಸಿ ಹಸಿವಿನಿಂದ ಬಳಲುತ್ತಿರುವ ನಿರ್ಗತಿಕರಿಗೆ, ಅಸಹಾಯಕರಿಗೆ, ಭಿಕ್ಷುಕರಿಗೆ, ಜೊತೆಗೆ ಕೊರೋನಾ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಸಿಬ್ಬಿಂದಿಗಳಿಗೆ, ಕೊರೋನಾ ಸೋಂಕಿಗೆ ಒಳಗಾಗಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ವಿತರಿಸಲಾಗುತ್ತಿದೆ.


ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಭದ್ರಾವತಿಯಲ್ಲಿ ಹಿರಿಯ ಉಪಾಧ್ಯಕ್ಷ ಫಾಸ್ಟರ್ ದೇವನೇಸಂರವರ ಮಾರ್ಗದರ್ಶನದಲ್ಲಿ ಹಸಿದವರಿಗೆ ಅನ್ನ ನೀಡುವ ಕಾರ್ಯ ಶುಕ್ರವಾರ ೩ನೇ ದಿನ ಯಶಸ್ವಿಯಾಗಿ ಪೂರೈಸಿತು.
       ೩ನೇ ದಿನದ ಸೇವಾ ಕಾರ್ಯದಲ್ಲಿ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ-ಸಂಸ್ಥೆಗಳ ಒಕ್ಕೂಟ:
     ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಹಿರಿಯ ಉಪಾಧ್ಯಕ್ಷ ಫಾಸ್ಟರ್ ದೇವನೇಸಂರವರ ಮಾರ್ಗದರ್ಶನದಲ್ಲಿ ಹಸಿದವರಿಗೆ ಅನ್ನ ನೀಡುವ ಕಾರ್ಯ ಶುಕ್ರವಾರ ೩ನೇ ದಿನ ಯಶಸ್ವಿಯಾಗಿ ಪೂರೈಸಿದೆ.
    ಸೆಲ್ವರಾಜ್, ಎಂ.ಜಿ ರಾಮಚಂದ್ರನ್, ವಿಲ್ಸನ್ ಬಾಬು, ಡಾರ್ವಿನ್, ದಾಸ್, ಹಬಕ್ಕೂರ್, ಪ್ರೇಮ್, ಅನಿಲ್, ಭಾಸ್ಕರ್ ಮತ್ತು ನಗರಸಭೆ ಮಾಜಿ ಸದಸ್ಯ ಫ್ರಾನ್ಸಿಸ್ ಸೇರಿದಂತೆ ಇನ್ನಿತರರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಪ್ರತಿ ದಿನ ಸುಮಾರು ೧೦೦ ಮಂದಿಗೆ ಸಾಕಾಗುವಷ್ಟು ಆಹಾರ ತಯಾರಿಸಿ ವಿತರಿಸಲಾಗುತ್ತಿದೆ.


ಭದ್ರಾವತಿ ನಗರಸಭೆ ೧೨ನೇ ವಾರ್ಡ್ ನಿವಾಸಿಗಳಿಗೆ ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ನೇತೃತ್ವದಲ್ಲಿ ಸಿದ್ದಪಡಿಸಿದ ಆಹಾರ ವಿತರಿಸಲಾಯಿತು.
       ಸಂಕಷ್ಟಕ್ಕೆ ಸ್ಪಂದಿಸಿದ ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್:
    ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ನೇತೃತ್ವದಲ್ಲಿ ಗುರುವಾರ ನಗರಸಭೆ ವಾರ್ಡ್ ನಂ. ೧೨ರಲ್ಲಿ ಎಲ್ಲಾ ರಸ್ತೆಗಳಿಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ಅಲ್ಲದೆ ವಾರ್ಡ್‌ನ ಪ್ರತಿಯೊಂದು ಮನೆಗೂ ಸಿದ್ದಪಡಿಸಿದ ಆಹಾರ ವಿತರಿಸಲಾಯಿತು. ವಾರ್ಡ್ ಪ್ರಮುಖರಾದ ಗಿರೀಶ್, ನವೀನ್, ಪ್ರಕಾಶ್, ಅಶೋಕ್, ಚರಣ್, ರಘು, ಆಕಾಶ್, ಸುನಿಲ್, ಕಿಶೋರ್ ಸೇರಿದಂತೆ ಇನ್ನಿತರರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
   ಕಳೆದ ಬಾರಿ ಸಹ ಲಾಕ್‌ಡೌನ್ ಸಮಯದಲ್ಲೂ ಸುದೀಪ್‌ಕುಮಾರ್ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದರು. ಅಲ್ಲದೆ ಜಯಕರ್ನಾಟಕ ಜನಪರ ವೇದಿಕೆ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
       ಸಿದ್ದಪಡಿಸಿದ ಆಹಾರ ಖರೀದಿಸಿ ಬಡವರಿಗೆ ವಿತರಣೆ:
     ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಿವಾಸಿ, ಬಿಜೆಪಿ ಕಾರ್ಯಕರ್ತ ಭರತ್‌ರಾವ್ ಹಾಗು ಸ್ನೇಹಿತರು ಕಳೆದ ಕೆಲವು ದಿನಗಳಿಂದ ಉಜ್ಜನಿಪುರ, ಆನೇಕೊಪ್ಪ ಹಾಗು ಕಾಗದನಗರ ವ್ಯಾಪ್ತಿಯಲ್ಲಿ ದೀನದಲಿತರು, ನಿರ್ಗತಿಕರು, ಅಸಹಾಯಕರು, ಭಿಕ್ಷುಕರಿಗೆ ಸಿದ್ದಪಡಿಸಿದ ಆಹಾರ ವಿತರಿಸಲಾಗುತ್ತಿದೆ.
ಪ್ರತಿದಿನ ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ವೇಳೆ ಸುಮಾರು ೨೦೦ ಮಂದಿಗೆ ಸಾಕಾಗುವಷ್ಟು ಸಿದ್ದಪಡಿಸಿದ ಆಹಾರ ಖರೀದಿಸಿ ಸಂಕಷ್ಟಕ್ಕೆ ವಿತರಿಸಲಾಗುತ್ತಿದೆ. ಕಳೆದ ಬಾರಿ ಸಹ ಲಾಕ್‌ಡೌನ್ ಸಮಯದಲ್ಲಿ ಹಸಿದವರ ಸಂಕಷ್ಟಕ್ಕೆ ಈ ತಂಡ ಸ್ಪಂದಿಸಿತ್ತು.

ಬಸವ ಜಯಂತಿ : ಪೌರಾಯುಕ್ತ ಮನೋಹರ್‌ಗೆ ಸನ್ಮಾನ


ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಭದ್ರಾವತಿ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಸರಳವಾಗಿ ಬಸವ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೌರಾಯುಕ್ತ ಮನೋಹರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ, ಮೇ. ೧೪:  ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಸರಳವಾಗಿ ಬಸವ ಜಯಂತಿ ಆಚರಿಸಲಾಯಿತು. 
    ವಿಶ್ವಜ್ಞಾನಿ, ಮಹಾಮಾನವತಾವಾದಿ, ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಪುಷ್ಪನಮನ ಸಲ್ಲಿಸಿ ಜನಮೆಚ್ಚಿದ ಅಧಿಕಾರಿ ಪೌರಾಯುಕ್ತ ಮನೋಹರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. 
    ಬಸವೇಶ್ವರ ಸಭಾಭವನ ಮಾಲೀಕ ಶಿವಕುಮಾರ್, ಪ್ರಮುಖರಾದ ಮಹೇಶ್‌ಕುಮಾರ್, ಮಂಜುನಾಥ್, ವಾಗೀಶ್, ಜಗದೀಶ್‌ಪಟೇಲ್,  ನಾಗರತ್ನ,  ಪೂರ್ಣಿಮಾ, ಕವಿತ ಸುರೇಶ್, ಸೌಭಾಗ್ಯಮ್ಮ, ಸರೋಜಮ್ಮ, ಸೌಮ್ಯ ಮತ್ತು ಶಕುಂತಳಮ್ಮ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, May 13, 2021

ಹಸಿದವರ ಸಂಕಷ್ಟಕ್ಕೆ ಸ್ಪಂದಿಸಿದ ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್

ಭದ್ರಾವತಿಯಲ್ಲಿ ಗುರುವಾರ ನಗರಸಭೆ ೧೨ನೇ ವಾರ್ಡ್ ನಿವಾಸಿಗಳಿಗೆ ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ನೇತೃತ್ವದಲ್ಲಿ ಸಿದ್ದಪಡಿಸಿದ ಆಹಾರ ವಿತರಿಸಲಾಯಿತು.
     ಭದ್ರಾವತಿ, ಮೇ. ೧೩: ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ನೇತೃತ್ವದಲ್ಲಿ ಗುರುವಾರ ನಗರಸಭೆ ವಾರ್ಡ್ ನಂ. ೧೨ರಲ್ಲಿ ಎಲ್ಲಾ ರಸ್ತೆಗಳಿಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಅಲ್ಲದೆ ವಾರ್ಡ್‌ನ ಪ್ರತಿಯೊಂದು ಮನೆಗೂ ಸಿದ್ದಪಡಿಸಿದ ಆಹಾರ ವಿತರಿಸಲಾಯಿತು. ವಾರ್ಡ್ ಪ್ರಮುಖರಾದ ಗಿರೀಶ್, ನವೀನ್, ಪ್ರಕಾಶ್, ಅಶೋಕ್, ಚರಣ್, ರಘು, ಆಕಾಶ್, ಸುನಿಲ್, ಕಿಶೋರ್ ಸೇರಿದಂತೆ ಇನ್ನಿತರರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
   ಕಳೆದ ಬಾರಿ ಸಹ ಲಾಕ್‌ಡೌನ್ ಸಮಯದಲ್ಲೂ ಸುದೀಪ್‌ಕುಮಾರ್ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದರು. ಅಲ್ಲದೆ ಜಯಕರ್ನಾಟಕ ಜನಪರ ವೇದಿಕೆ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಒಂದೇ ದಿನ ೨೭೭ ಮಂದಿಗೆ ಸೋಂಕು : ೪ ಮಂದಿ ಬಲಿ

೧೦೦ ಹಾಸಿಗೆಯುಳ್ಳ ಆರೈಕೆ ಕೇಂದ್ರ ಮೇ.೧೪ ರಿಂದ ಕಾರ್ಯಾರಂಭ


ಕಳೆದ ೪ ದಿನಗಳ ಹಿಂದೆ ಭದ್ರಾವತಿ ಕಾಗದ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ತೆರೆಯಲಾಗಿರುವ ೧೦೦ ಹಾಸಿಗೆಯುಳ್ಳ ಕೋವಿಡ್ ಆರೈಕೆ ಕೇಂದ್ರ ಇನ್ನೂ ಕಾರ್ಯಾರಂಭಗೊಂಡಿಲ್ಲ
   ಭದ್ರಾವತಿ, ಮೇ. ೧೩: ರಾಜ್ಯ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿಗೊಳಿಸಿ ೪ ದಿನ ಕಳೆದಿದ್ದು, ಈ ನಡುವೆ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಗುರುವಾರ ಒಂದೇ ದಿನ ೨೭೭ ಸೋಂಕು ಪತ್ತೆಯಾಗಿದೆ.
   ಸೋಂಕಿನ ಪ್ರಮಾಣ ಇಳಿಮುಖವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ೪ ದಿನಗಳಿಂದ ಏರಿಕೆ ಹಂತದಲ್ಲಿಯೇ ಸಾಗುತ್ತಿದೆ. ಒಟ್ಟು ೩೩೮ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೨೭೭ ಸೋಂಕು ದೃಢಪಟ್ಟಿದೆ. ಈ ನಡುವೆ ೭೮ ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ೪ ಜನ ಬಲಿಯಾಗಿದ್ದಾರೆ.
   ಇದುವರೆಗೂ ಒಟ್ಟು ೫೮ ಮಂದಿ ಮೃತಪಟ್ಟಿದ್ದು, ೨೮೯ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ೨೫ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨ ಜೋನ್ ತೆರವುಗೊಳಿಸಲಾಗಿದೆ.
       ಆರೈಕೆ ಕೇಂದ್ರ ಖಾಲಿ:
    ಕಳೆದ ೪ ದಿನಗಳ ಹಿಂದೆ ಕಾಗದ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ತೆರೆಯಲಾಗಿರುವ ೧೦೦ ಹಾಸಿಗೆಯುಳ್ಳ ಕೋವಿಡ್ ಆರೈಕೆ ಕೇಂದ್ರ ಇನ್ನೂ ಕಾರ್ಯಾರಂಭಗೊಂಡಿಲ್ಲ. ಪ್ರಸ್ತುತ ವಿಐಎಸ್‌ಎಲ್ ಆಸ್ಪತ್ರೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ೧೨ ಮಂದಿ ಇದ್ದು, ಇವರನ್ನು ಶುಕ್ರವಾರ ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದ್ದಾರೆ.

ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಸ್ಯಾನಿಟೈಜರ್ ಸಿಂಪಡಣೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತು.
    ಭದ್ರಾವತಿ, ಮೇ. ೧೩: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಲಕ್ಕಪ್ಪನ ಕ್ಯಾಂಪ್, ಅಟಗಾರಿ ಕ್ಯಾಂಪ್, ಕಲ್ಪನಹಳ್ಳಿ, ಹಳೇ ಕೂಡ್ಲಿಗೆರೆ, ಕೂಡ್ಲಿಗೆರೆ ಹಾಗು ಕೋಡಿಹಳ್ಳಿ ಒಟ್ಟು ೬ ಗ್ರಾಮಗಳಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲಕ್ ವೀರಪ್ಪನ್, ಸದಸ್ಯರಾದ ಎಂ. ಜಯಣ್ಣ, ಆರ್.ಎನ್ ರುದ್ರೇಶ್, ಸಿ. ವಿಶ್ವನಾಥ್, ಗೌರಮ್ಮ ಮಹಾದೇವ, ಉಮಾದೇವಿ ತಿಪ್ಪೇಶ್, ಸಿದ್ದಮ್ಮ ನಾಗೇಶ್, ಮುಖಂಡರಾದ ಕೂಡ್ಲಿಗೆರೆ ಎಸ್ ಮಹಾದೇವ, ಎಸ್‌ಡಿಎಂಸಿ ಅಧ್ಯಕ್ಷ ವೀರಪ್ಪನ್, ಆಶಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.