ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಮತ್ತು ಉಜ್ಜನಿಪುರ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದನಗರದ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಸೋಮವಾರ ನಗರಸಭಾ ಸದಸ್ಯರಾದ ಬಿ.ಕೆ ಮೋಹನ್ ಮತ್ತು ಬಸವರಾಜ ಬಿ. ಆನೇಕೊಪ್ಪ ಉದ್ಘಾಟಿಸಿದರು.
ಭದ್ರಾವತಿ, ಮೇ. ೩೧: ನಗರಸಭೆ ವ್ಯಾಪ್ತಿಯ ಕಾಗದನಗರ ಮತ್ತು ಉಜ್ಜನಿಪುರ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದನಗರದ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಸೋಮವಾರ ನಗರಸಭಾ ಸದಸ್ಯರಾದ ಬಿ.ಕೆ ಮೋಹನ್ ಮತ್ತು ಬಸವರಾಜ ಬಿ. ಆನೇಕೊಪ್ಪ ಉದ್ಘಾಟಿಸಿದರು.
ಈ ವ್ಯಾಪ್ತಿಯಲ್ಲಿ ನಗರಸಭೆ ವಾರ್ಡ್ ನಂ.೧೯, ೨೦ ಮತ್ತು ೨೧ ಒಟ್ಟು ೩ ವಾರ್ಡ್‌ಗಳಿದ್ದು, ಈ ವಾರ್ಡ್‌ಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಶನಿವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪರವರು ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿ ಕೇಂದ್ರ ತೆರೆಯಲು ಮನವಿ ಮಾಡಿದ್ದರು. ಹೆಚ್ಚುವರಿ ಕೇಂದ್ರದ ಬದಲು ವಿಶಾಲವಾದ ಸ್ಥಳದಲ್ಲಿ ಒಂದೇ ಕಡೆ ಲಸಿಕಾ ಕೇಂದ್ರ ತೆರೆಯುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂಬ ಉದ್ದೇಶದೊಂದಿಗೆ ನಗರ ಆರೋಗ್ಯ ಕೇಂದ್ರದಲ್ಲಿ ತೆರೆಯಲಾಗಿದ್ದ ಲಸಿಕಾ ಕೇಂದ್ರವನ್ನು ಇದೀಗ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸಲಾಗಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ವೈದ್ಯ ಡಾ. ಗಿರಿಧರ್, ನಗರಸಭೆ ಮಾಜಿ ಸದಸ್ಯ ವೆಂಕಟಯ್ಯ, ಮುಖಂಡರಾದ ಜಿ. ರಾಜು, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.