![](https://blogger.googleusercontent.com/img/b/R29vZ2xl/AVvXsEj99XVsykurxBUQyQjycHNEliGw6CJzpBBT7G4OlIQkQFfH4Q7XWMgvSSrXvcI-YEFRzfOxJQ7CWcWKjkdneJ1COloPQjJwHlW-wHcRnxT_aeKPDXWhyDLwQjcrp-pyO9_xjHKq_X3SvTUG/w400-h272-rw/D23-BDVT-721162.jpg)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸ್ ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಬುಧವಾರ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೨೩: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸ್ ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಬುಧವಾರ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ವೆ ನಂ.೧೧೨ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಸುಮಾರು ೮೦೦ ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಹಿರೇಕೆರೆ ಸುತ್ತಲೂ ಬಸಿಕಾಲುವೆ(ಟ್ರಂಚ್) ನಿರ್ಮಿಸುವುದು. ಕೆರೆಯ ನೀರು ಸರಾಗವಾಗಿ ಹರಿಯಲು ೪ ಅಡಿ ವಿಸ್ತೀರ್ಣವುಳ್ಳ ೮ ಪೈಪ್‌ಗಳನ್ನು ಅಳವಡಿಸುವುದು. ನಗರಸಭೆ ನ್ಯೂಟೌನ್ ಶಾಖಾ ಕಛೇರಿಯಲ್ಲಿ ಜನಸಂದಣಿ ಅಧಿಕವಾಗಿದ್ದು, ಈ ಹಿನ್ನಲೆಯಲ್ಲಿ ಪ್ರತಿನಿತ್ಯ ಕ್ರಿಮಿನಾಶಕ ಸಿಂಪಡಿಸುವುದು ಹಾಗು ಆವರಣದಲ್ಲಿ ಬ್ಯಾರಿಕೇಡ್ ಅಳವಡಿಸುವಂತೆ ಕೋರಲಾಗಿದೆ.
ನಗರಸಭೆ ವ್ಯಾಪ್ತಿಯ ನ್ಯೂಟೌನ್ ಭಾಗದಲ್ಲಿ ಈಗಾಗಲೇ ಒಳಚರಂಡಿ ಕಾಮಗಾರಿ ಕೆಲಸ ಪೂರ್ಣಗೊಂಡಿದ್ದು, ತಕ್ಷಣ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ಪೂರ್ಣಗೊಳಿಸುವುದು. ಜನ್ನಾಪುರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಗಳನ್ನು ಪೂರ್ಣಗೊಳಿಸುವುದು. ನಗರಸಭೆ ನ್ಯೂಟೌನ್ ಶಾಖಾ ಕಛೇರಿಯಲ್ಲಿ ಮನೆ ಹಾಗು ನೀರಿನ ಕಂದಾಯ ಪಾವತಿಸಲು ಕೌಂಟರ್ ತೆರೆಯುವಂತೆ ಮನವಿ ಮಾಡಲಾಗಿದೆ.
ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್, ಕಾರ್ಯಾಧ್ಯಕ್ಷೆ ರಮಾವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಆರ್. ಮುರುಗೇಶ್, ಸಂಚಾಲಕರಾದ ಶೈಲಜಾ ರಾಮಕೃಷ್ಣ, ಗೀತಾಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.