ಭದ್ರಾವತಿಯಲ್ಲಿ ಶುಕ್ರವಾರ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನೌಕರರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಜೂ. ೨೫: ಸರ್ಕಾರಿ ನೌಕರರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವುದರ ಜೊತೆಗೆ ಕೊರೋನಾ ಸೋಂಕಿಗೆ ಒಳಗಾಗದಂತೆ ತಮ್ಮ ಆರೋಗ್ಯ ರಕ್ಷಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಶುಕ್ರವಾರ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನೌಕರರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜಕ್ಕೆ ಸರ್ಕಾರಿ ನೌಕರರ ಕೊಡುಗೆ ಅಪಾರವಾಗಿದ್ದು, ನೌಕರರು ಕರ್ತವ್ಯದ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅದರಲ್ಲೂ ಕೊರೋನಾ ಸೋಂಕಿಗೆ ಒಳಗಾಗದಂತೆ ಹೆಚ್ಚಿನ ಜಾಗೃತಿ ವಹಿಸಬೇಕೆಂದರು.
ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭಾ ಸದಸ್ಯ ಸುದೀಪ್ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ವಿದ್ಯಾಸಂಸ್ಥೆ ಛೇರ್ಮನ್ ಬಿ.ಎಲ್ ರಂಗಸ್ವಾಮಿ, ಎ.ಜೆ. ರಂಗನಾಥಪ್ರಸಾದ್, ಡಿ.ಎಸ್ ರಾಜಪ್ಪ, ಶ್ರೀಕಾಂತ್, ರಾಜ್ಕುಮಾರ್, ದಿನೇಶ್ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.