ಪರಿಸರ ಕಾಳಜಿ, ಆಮ್ಲಜನಿಕ ಮಹತ್ವ ಕುರಿತು ಜಾಗೃತಿ
ಭದ್ರಾವತಿ ನಗರದಲ್ಲಿ ನೂತನವಾಗಿ ಕಾರ್ಯಾರಂಭಗೊಂಡಿರುವ ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ವತಿಯಿಂದ ಮೊದಲ ಬಾರಿಗೆ ಶುಕ್ರವಾರ ವೃಕ್ಷಾರೋಹಣ ಕಾರ್ಯಕ್ರಮ ನೆರವೇರಿತು.
ಭದ್ರಾವತಿ, ಜು. ೨: ನಗರದಲ್ಲಿ ನೂತನವಾಗಿ ಕಾರ್ಯಾರಂಭಗೊಂಡಿರುವ ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ವತಿಯಿಂದ ಮೊದಲ ಬಾರಿಗೆ ಶುಕ್ರವಾರ ವೃಕ್ಷಾರೋಹಣ ಕಾರ್ಯಕ್ರಮ ನೆರವೇರಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ಜ.೧೬ರಂದು ೯೭ ಬಿ.ಎನ್ ಕ್ಷಿಪ್ರ ಕಾರ್ಯ ಪಡೆ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಕ್ಷಿಪ್ರ ಕಾರ್ಯ ಪಡೆ ತನ್ನ ಸ್ವಾಧೀನದಲ್ಲಿರುವ ಖಾಲಿ ಜಾಗದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿದೆ. ಅದರಲ್ಲೂ ಆಮ್ಲಜನಕ ಕೊರತೆ ಕಂಡು ಬರುತ್ತಿರುವ ಪ್ರಸ್ತುತ ದಿನಗಳಲ್ಲಿ ಸುತ್ತಮುತ್ತಲಿನ ಜನವಸತಿ ಪ್ರದೇಶಗಳಪರಿಸರದಲ್ಲೂ ಸಸಿಗಳನ್ನು ನೆಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ.
ಕ್ಷಿಪ್ರ ಕಾರ್ಯಪಡೆ ಡೆಪ್ಯೂಟಿ ಕಮಾಂಡೆಂಟ್‌ಗಳಾದ ಬೀನಮ್ಮ ಜೋಸೆಫ್, ಎಂ. ನರೇಶ್‌ಕುಮಾರ್, ಅಸಿಸ್ಟೆಂಟ್ ಕಮಾಂಡೆಂಟ್‌ಗಳಾದ ಕೆ. ರಮೇಶ್‌ಕುಮಾರ್ ಮತ್ತು ಶಹಜಹಾನ್ ನೇತೃತ್ವದಲ್ಲಿ ಪೊಲೀಸ್ ಉಪಾಧೀಕ್ಷಕ ಐಪಿಎಸ್ ಅಧಿಕಾರಿ ಬಿ. ಸಾಹಿಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ, ವಲಯ ಅರಣ್ಯಾಧಿಕಾರಿ ಕೆ.ಎಂ ಮಂಜುನಾಥ್, ಉಪ ತಹಸೀಲ್ದಾರ್ ನಾರಾಯಣಗೌಡ, ಪೇಪರ್‌ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್, ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್, ಮುರಾರ್ಜಿದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಬಸವರಾಜಪ್ಪ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.