ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ
![](https://blogger.googleusercontent.com/img/b/R29vZ2xl/AVvXsEgy4C9fYyJpBryDXcgO1NcbASThV5aWe0KJ_czUf5rM0PEm0KS3K1aEUjkiEoVuXF3t7ree_63QadIihvRDi8zUX9cKcxvvIGlURWkmNl2PHk2oaOUYlwi7grLcExBQQsrgo-_s6_6gG9xn/w400-h300-rw/D12-BDVT-779735.jpg)
ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ತುರ್ತು ಸಭೆ ಕರೆಯುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೧೨: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ತುರ್ತು ಸಭೆ ಕರೆಯುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಕೆರೆಗಳಿದ್ದು, ಈ ಕೆರೆಗಳ ಅಂತರ್ಜಲ ಹೆಚ್ಚಿಸಿ ಪ್ರಾಣಿ, ಪಕ್ಷಿಗಳಿಗೆ, ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈಗಾಗಲೇ ಕೆಲವು ಕೆರೆಗಳ ಸಮೀಪದ ರೈತರು ಸರ್ಕಾರದಿಂದ ಯಾವುದೇ ಅನುದಾನ ನಿರೀಕ್ಷೆ ಮಾಡದೆ ಸ್ವ ಇಚ್ಚಿಯಿಂದ ಕೆರೆಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋ. ರು. ಉಳಿತಾಯವಾಗುತ್ತಿದೆ ಎಂದು ಮನವರಿಕೆ ಮಾಡಲಾಗಿದೆ.
ಕೆರೆಗಳ ಸಂರಕ್ಷಣೆಯಲ್ಲಿ ತೊಡಗಿರುವ ರೈತರ ಕಾರ್ಯಕ್ಕೆ ಕೆಲವು ಸ್ಥಳೀಯರು ಅಡ್ಡಿ ಉಂಟು ಮಾಡುತ್ತಿದ್ದು, ಇದರಿಂದಾಗಿ ಕೆರೆಗಳ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಕರ್ನಾಟಕ ನೀರಾವರಿ ನಿಗಮ, ರಕ್ಷಣಾ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ತುರ್ತು ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ.
ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮೊಹಮ್ಮದ್ ಅನಿಫ್, ಮುರುಗೇಶ್, ನಗರಸಭಾ ಸದಸ್ಯರಾದ ಚನ್ನಪ್ಪ, ಸುದೀಪ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.