ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿ ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ವತಿಯಿಂದ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೧೫: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ವತಿಯಿಂದ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜನ್ನಾಪುರ-ಹುತ್ತಾ ವ್ಯಾಪ್ತಿಯಲ್ಲಿ ಯು.ಜಿ.ಡಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಶೌಚಾಲಯದ ಗುಂಡಿಗಳು ಭರ್ತಿಯಾಗಿ ಸಮಸ್ಯೆಗಳು ಎದುರಾಗಿವೆ. ಈ ಹಿನ್ನಲೆಯಲ್ಲಿ ತಕ್ಷಣ ಯು.ಜಿ.ಡಿ ಕಾಮಗಾರಿ ಪೂರ್ಣಗೊಳಿಸಿ ಸಂಪರ್ಕ ಕಲ್ಪಿಸುವುದು. ಎಲ್ಲರಿಗೂ ಕುಡಿಯುವ ನೀರು ಸಮರ್ಪಕವಾಗಿ ಕಲ್ಪಿಸಿಕೊಡುವುದು. ಅಲ್ಲಲ್ಲಿ ನೀರಿನ ಕೊಳವೆಗಳು ಹಾಳಾಗಿದ್ದು, ಇದರಿಂದಾಗಿ ಕುಡಿಯುವ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಹಾಳಾದ ನೀರಿನ ಕೊಳವೆಗಳನ್ನು ದುರಸ್ತಿಗೊಳಿಸುವುದು. ಜನ್ನಾಪುರ ಕೆರೆ ಶುದ್ಧೀಕರಣ ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಬೀದಿನಾಯಿಗಳ ಕಾಟ, ಸೊಳ್ಳೆಕಾಟ ಹೆಚ್ಚಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವುದು. ನಗರಸಭೆ ಎನ್‌ಟಿಬಿ ಶಾಖಾ ಕಛೇರಿಯಲ್ಲಿ ಕಂದಾಯ ಪಾವತಿಸಲು ಕಂಪ್ಯೂಟರ್ ವಿಭಾಗ ತೆರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮನವಿ ಮಾಡಲಾಗಿದೆ.
ಸಂಘದ ಅಧ್ಯಕ್ಷ ಕೆ.ಎಂ ಸತೀಶ್, ಉಪಾಧ್ಯಕ್ಷ ಬಿ. ಯಲ್ಲಪ್ಪ, ಕಾರ್ಯದರ್ಶಿ ಬಿ. ಚಂದ್ರಶೇಖರಯ್ಯ, ಸಹಕಾರ್ಯದರ್ಶಿ ಬಿ.ಎಂ ಚಂದ್ರಪ್ಪ, ಖಜಾಂಚಿ ಭದ್ರಯ್ಯ, ಸದಸ್ಯರಾದ ಜೆಪಿಎಸ್ ಚಂದ್ರಶೇಖರ್, ಪಿ. ಶಿವನ್, ಚಂದು, ಜಿ.ಟಿ ಚಂದ್ರಶೇಖರ್, ಎನ್. ಕೃಷ್ಣಪ್ಪ ಮತ್ತು ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.