ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪಿನ ಸಮುದಾಯ ಭವನದ ಬಳಿ ಬಾಕ್ಸ್ ಮಾದರಿ ಚರಂಡಿ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು.
ಭದ್ರಾವತಿ, ಜು. ೨೧: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪಿನ ಸಮುದಾಯ ಭವನದ ಬಳಿ ಬಾಕ್ಸ್ ಮಾದರಿ ಚರಂಡಿ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು.
ಊರಿನ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಸ್ಥಾನ ಸಮೀಪದಲ್ಲಿರುವ ಸಮುದಾಯ ಭವನದ ಪಕ್ಕದಲ್ಲಿ ಸುಸಜ್ಜಿತವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆ ಎದುರಾಗಿದ್ದು, ಇದೀಗ ಹೊಸದಾಗಿ ಬಾಕ್ಸ್ ಮಾದರಿ ಚರಂಡಿ ನಿರ್ಮಿಸಲಾಗುತ್ತಿದೆ.
ನಗರಸಭೆ ಸದಸ್ಯರಾದ ಜಯಶೀಲ, ಕೆ. ಸುದೀಪ್‌ಕುಮಾರ್, ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಮುಖಂಡ ಸುರೇಶ್, ದೇವಸ್ಥಾನದ ಪ್ರಧಾನ ಅರ್ಚಕ ಮುರಳಿಧರ ಸೆರಿದಂತೆ ಇನ್ನಿತರರು ಉಪಸ್ಥಿತರಿದ್ದರು.]