ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು.
ಭದ್ರಾವತಿ, ಜು. ೨೮: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಎ.ಜೆ ರಂಗನಾಥ ಪ್ರಸಾದ್ ಹಾಗು ಕಾರ್ಯದರ್ಶಿಯಾಗಿ ಡಿ.ಎಸ್ ರಾಜಪ್ಪ ಆಯ್ಕೆಯಾಗಿದ್ದಾರೆ.
ಹಿರಿಯ ಉಪಾಧ್ಯಕ್ಷರಾಗಿ ಎಂ.ಎಸ್ ಬಸವರಾಜ, ಉಪಾಧ್ಯಕ್ಷರಾಗಿ ಆರ್. ಅಶೋಕ್‌ರಾವ್, ಸಿ. ಮಂಜಾನಾಯ್ಕ ಮತ್ತು ರಾಜ್‌ಕುಮಾರ್, ಜಂಟಿ ಕಾರ್ಯದರ್ಶಿಗಳಾಗಿ ಎಂ. ಪುಟ್ಟಲಿಂಗಮೂರ್ತಿ, ಜೆ. ಕಾಂತರಾಜ್ ಮತ್ತು ಬಿ.ಆರ್ ದಿನೇಶ್‌ಕುಮಾರ್, ಸಂಘಟನಾ ಕಾರ್ಯದರ್ಶಿಗಳಾಗಿ ಆರ್. ಜನಾರ್ಧನ, ಡಿ. ನಾಗರತ್ನ ಮತ್ತು ಎ. ರಂಗನಾಥ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಆರ್. ಶಿವಾಜಿರಾವ್ ಮತ್ತು ಕೃಷ್ಣ, ಕ್ರೀಡಾ ಕಾರ್ಯದರ್ಶಿಗಳಾಗಿ ಶ್ರೀಕಾಂತ್ ಮತ್ತು ಜಾನ್ ನಿರ್ಮಲ್ ಹಾಗು ಆಂತರಿಕ ಲೆಕ್ಕ ಪರಿಶೋಧಕರಾಗಿ ಎಚ್.ಎಂ ನಾಗರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಖೆಯ ಅಧ್ಯಕ್ಷ ಸಿದ್ದಬಸಪ್ಪ ತಿಳಿಸಿದ್ದಾರೆ.