![](https://blogger.googleusercontent.com/img/b/R29vZ2xl/AVvXsEhpdw0OxKWQYtG1aQCRnValwvE6T9x34nagGyhEO4wDNj-XY4QWjRqMfNIkF_lXglBhK7CYEQAefuF92-fG2YtWJOaw7GgAbL8dTTMOIVxXeEmEyPlfggiwhdNltQV7-PK8kIx7jd0R2CHw/w400-h211-rw/D10-BDVT1-765505.jpg)
ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆಯಾದ ಭದ್ರಾವತಿ ಜೈಭೀಮಾ ನಗರದ ನಿವಾಸಿ, ನಗರಸಭೆ ಗುತ್ತಿಗೆ ಪೌರ ಕಾರ್ಮಿಕ ಸುನಿಲ್ ನಿವಾಸಕ್ಕೆ ಭಾರತೀಯ ಜನತಾ ಪಕ್ಷದ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಭದ್ರಾವತಿ, ಆ. ೧೦: ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆಯಾದ ಜೈಭೀಮಾ ನಗರದ ನಿವಾಸಿ, ನಗರಸಭೆ ಗುತ್ತಿಗೆ ಪೌರ ಕಾರ್ಮಿಕ ಸುನಿಲ್ ನಿವಾಸಕ್ಕೆ ಭಾರತೀಯ ಜನತಾ ಪಕ್ಷದ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕೋವಿಡ್-೧೯ರ ಹಿನ್ನಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಗುತ್ತಿಗೆ ಪೌರ ಕಾರ್ಮಿಕ ಸುನಿಲ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ಎಲ್ಲೆಡೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು.
ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಸುನಿಲ್ ನಿವಾಸಕ್ಕೆ ಆಗಮಿಸಿ ಸಾಂತ್ವನ ಹೇಳುವ ಮೂಲಕ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. ಇದೀಗ ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಿಜೆಪಿ ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಗಣೇಶ್‌ರಾವ್ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.