ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಬಿಜೆಪಿ ಅಭ್ಯರ್ಥಿ ರಮಾವೆಂಕಟೇಶ್ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಆ. ೨೩: ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಬಿಜೆಪಿ ಅಭ್ಯರ್ಥಿ ರಮಾವೆಂಕಟೇಶ್ ನಾಮಪತ್ರ ಸಲ್ಲಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ತರೀಕೆರೆ ರಸ್ತೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ತೆರೆಯಲಾಗಿರುವ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.
ಜನ್ನಾಪುರ ಶಕ್ತಿಕೇಂದ್ರದ ಅಧ್ಯಕ್ಷ ನವೀನ್‌ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್ ರಾಜ್, ರೂಪನಾಗರಾಜ್, ಚಂದ್ರಪ್ಪ, ಧನುಷ್ ಬೋಸ್ಲೆ, ನಕುಲ್ ರೇವಣ್‌ಕರ್, ಗೋಕುಲ್ ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.