ಕೆಲವರಿಂದ ಹಣ ದುರುಪಯೋಗದ ಸುಳ್ಳು ದೂರು : ಎನ್. ಉಮೇಶ್
ಎನ್. ಉಮೇಶ್
ಭದ್ರಾವತಿ, ಅ. ೫: ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದ ಪ್ರಾಥಮಿಕ ಶಾಲೆಯ ಕಾಂಪೌಂಡ್ ಮುಖ್ಯದ್ವಾರದಲ್ಲಿ ಒಟ್ಟು ಸುಮಾರು ೩೦ ಸಾವಿರ ರು. ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಗೇಟ್ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮುರಿದು ಬಿದ್ದಿದ್ದು, ಈ ಗೇಟನ್ನು ಗ್ರಾಮ ಪಂಚಾಯಿತಿ ವಶಕ್ಕೆ ಒಪ್ಪಿಸಲಾಗಿದೆ ಎಂದು ಈ ಭಾಗದ ಪಂಚಾಯಿತಿ ಸದಸ್ಯ ಎನ್. ಉಮೇಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಉಮೇಶ್, ಯರೇಹಳ್ಳಿ ಗ್ರಾಮ ಪಂಚಾಯಿತಿ ೧೪ನೇ ಹಣಕಾಸಿನ ಯೋಜನೆಯಡಿ ಒಟ್ಟು ೩೦,೦೦೦ ರು. ಅನುದಾನದಲ್ಲಿ ಶಾಲೆಯ ಕಾಂಪೌಂಡ್‌ಗೆ ಪಿಲ್ಲರ್ ಹಾಕಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರಿಂದ ಮೆಜರ್‌ಮೆಂಟ್ ಬುಕ್ ಬರೆಸಿ ಗುತ್ತಿಗೆದಾರರಿಂದ ಗೇಟ್ ಅಳವಡಿಸಲಾಗಿದೆ. ಗುತ್ತಿಗೆದಾರರಿಗೂ ಹಣ ಪಾವತಿಸಲಾಗಿದ್ದು, ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಬಸ್ ಚಾಲಕನ ನಿರ್ಲಕ್ಷ್ಯತನದಿಂದ ಗೇಟ್ ಮುರಿದು ಬಿದ್ದಿದೆ. ಈ ಹಿನ್ನಲೆಯಲ್ಲಿ ಈ ಗೇಟನ್ನು ಗ್ರಾಮ ಪಂಚಾಯಿತಿ ವಶಕ್ಕೆ ಒಪ್ಪಿಸಲಾಗಿದೆ.
ಈ ವಿಚಾರವನ್ನು ಕೆಲವರು ಮುಚ್ಚಿ ಹಾಕಿ ಹಣ ದುರುಪಯೋಗ ಮಾಡಲಾಗಿದೆ ಎಂದು ದೂರು ನೀಡಿದ್ದು, ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು, ಇದಕ್ಕೆ ಯಾರು ಸಹ ಕಿವಿಕೊಡಬಾರದೆಂದು ಮನವಿ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದ ಪ್ರಾಥಮಿಕ ಶಾಲೆಯ ಕಾಂಪೌಂಡ್ ಮುಖ್ಯದ್ವಾರದಲ್ಲಿ ಒಟ್ಟು ಸುಮಾರು ೩೦ ಸಾವಿರ ರು. ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಗೇಟ್