ಸರ್‌ಎಂವಿ ಕಬಡ್ಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ಎಂ.ಜೆ.ಎ ಟ್ರೋಫಿ ಕಬಡ್ಡಿ ಪಂದ್ಯಾವಳಿಯ ಕೊನೆಯ ರೋಚಕ ಪಂದ್ಯ ಎಂಜೆಎ ಮತ್ತು ಸೆವೆನ್ಸ್ ಸ್ಪೋರ್ಟ್ಸ್ ಕ್ಲಬ್ ತಂಡಗಳ ನಡುವೆ ನಡೆಯಿತು.
ಭದ್ರಾವತಿ, ನ. ೮: ಸರ್‌ಎಂವಿ ಕಬಡ್ಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ಎಂ.ಜೆ.ಎ ಟ್ರೋಫಿ ಕಬಡ್ಡಿ ಪಂದ್ಯಾವಳಿ ಎಂಜೆಎ ತಂಡ ಮೊದಲ ಬಹುಮಾನ ಪಡೆದುಕೊಂಡಿತು.
ಭಾನುವಾರ ರಾತ್ರಿ ಅಂತಿಮ ಪಂದ್ಯದಲ್ಲಿ ಎಂಜೆಎ ಮತ್ತು ಸೆವೆನ್ಸ್ ಸ್ಪೋರ್ಟ್ಸ್ ಕ್ಲಬ್ ತಂಡಗಳು ಟ್ರೋಫಿಗಾಗಿ ರೋಚಕ ಸೆಣೆಸಾಟ ನಡೆಸಿದವು. ಅಂತಿಮವಾಗಿ ಎಂಜೆಎ ತಂಡ ಮೊದಲ ಬಹುಮಾನ ಪಡೆದುಕೊಂಡಿತು. ಎರಡನೇ ಬಹುಮಾನ ಸೆವೆನ್ಸ್ ಸ್ಪೋರ್ಟ್ಸ್ ಕ್ಲಬ್ ತಂಡದ ಪಾಲಾಯಿತು. ಶಿವಮೊಗ್ಗ ಜಿಲ್ಲೆಯಿಂದ ಒಟ್ಟು ೮ ತಂಡಗಳು ಪಾಲ್ಗೊಂಡಿದ್ದವು.
ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಪಂದ್ಯಾವಳಿ ನೇತೃತ್ವ ವಹಿಸಿದ್ದರು. ಪ್ರಮುಖರಾದ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಕೃಷ್ಣೇಗೌಡ, ನಗರಸಭೆ ಮಾಜಿ ಸದಸ್ಯರಾದ ಕರಿಯಪ್ಪ, ಎಂ.ಎ ಅಜಿತ್, ಬದರಿನಾರಾಯಣ, ಗುಣಶೇಖರ್, ಅನಿಲ್‌ಕುಮಾರ್, ಎಚ್.ಬಿ ರವಿಕುಮಾರ್, ಎಂ. ರಾಜು, ಮುಖಂಡರಾದ ಉಮೇಶ್, ದಿಲೀಪ್, ಕ್ಲಬ್ ಸುರೇಶ್, ಡಾರ್ವಿನ್, ಗಿರೀಶ್‌ಕುಮಾರ್, ಲಕ್ಷ್ಮೀನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸರ್‌ಎಂವಿ ಕಬಡ್ಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಈ ಹಿಂದೆ ೨೦೧೫ರಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಮ್ಯಾಟ್ ಪ್ರೋ ಮಾದರಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಅವರ ನಿಧನದ ನಂತರ ಇದೀಗ ಅವರ ಸವಿನೆನಪಿನಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸುವ ಮೂಲಕ ಜಿಲ್ಲೆಯಲ್ಲಿರುವ ಯುವ ಕಬಡ್ಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕಾರ್ಯ ಕೈಗೊಳ್ಳಲಾಗಿದೆ.
ಸರ್‌ಎಂವಿ ಕಬಡ್ಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ಎಂ.ಜೆ.ಎ ಟ್ರೋಫಿ ಕಬಡ್ಡಿ ಪಂದ್ಯಾವಳಿ ಎಂಜೆಎ ತಂಡ ಮೊದಲ ಬಹುಮಾನ ಪಡೆದುಕೊಂಡಿತು.