Friday, November 12, 2021
ನಡೆ, ನುಡಿ, ಕ್ರಿಯಾಶೀಲತೆಯಿಂದ ವ್ಯಕ್ತಿತ್ವ : ಎಚ್.ಎನ್ ಮಹಾರುದ್ರ
Thursday, November 11, 2021
ಎಂಪಿಎಂ ಕಾರ್ಮಿಕರಿಗೆ ಸೇವಾ ಭದ್ರತೆ : ಮುಖ್ಯಮಂತ್ರಿಗಳಿಗೆ ಕೃತಜ್ಞತೆ
ಟೈಯರ್ ಪಂಕ್ಚರ್ : ರಸ್ತೆ ಬದಿಗೆ ಹಾರಿ ಪ್ರಾಣ ಕಳೆದುಕೊಂಡ ಚಾಲಕ
ಕೋಟ್ಪಾ ಕಾಯ್ದೆಯಡಿ ಕಾರ್ಯಾಚರಣೆ : ೫,೧೦೦ ರು. ದಂಡ ವಸೂಲಾತಿ
ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ತಾಲೂಕಿನ ಆನವೇರಿ, ಮೈದೊಳಲು ಮತ್ತು ಕೈಮರ ಗ್ರಾಮಗಳ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
ಭದ್ರಾವತಿ, ನ. ೧೧: ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕಿನ ಆನವೇರಿ, ಮೈದೊಳಲು ಮತ್ತು ಕೈಮರ ಗ್ರಾಮಗಳ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಒಟ್ಟು ರು. ೫,೧೦೦ ದಂಡ ವಿಧಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ, ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯಾಧಿಕಾರಿ ಹಾಲಸ್ವಾಮಿ, ಅಲ್ಲಾಉದ್ಧಿನ್ ತಾಜ್, ಆರೋಗ್ಯ ನಿರೀಕ್ಷಕರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ ದೇವರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವಿಧಾನ ಪರಿಷತ್ ಚುನಾವಣೆ : ಪೂರ್ವಭಾವಿ ಸಭೆ
ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಭದ್ರಾವತಿ, ನ. ೧೧: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಟಿ.ವಿ ಪ್ರಕಾಶ್‌ರವರು ಚುನಾವಣಾ ಪೂರ್ವ ಸಿದ್ಧತೆ ವಿವರವಾದ ಮಾಹಿತಿ ನೀಡಿದರು. ತಹಶೀಲ್ದಾರ್ ಆರ್. ಪ್ರದೀಪ್‌ರವರು ಚುನಾವಣಾ ಪ್ರಕ್ರಿಯೆಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿಕೊಡಬಹುದಾದ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು.
ಮತಗಟ್ಟೆ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರು ಹಾಗು ವಯೋವೃದ್ಧರಿಗೆ ಮತಗಟ್ಟೆ ಕೊಠಿಡಿಗೆ ತೆರಳಲು ಸೂಕ್ತ ವ್ಯವಸ್ಥೆ ಸೇರಿದಂತೆ ಅಂಶಗಳ (ಎ.ಎಂ.ಎಫ್)ಬಗ್ಗೆ ಪರಿಶೀಲಿಸಿ ವರದಿ ನೀಡುವುದು ಹಾಗು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಾದರಿ ನೀತಿ ಸಂಹಿತೆ ಜಾರಿಗೆ ಸಂಬಂಧಪಟ್ಟಂತೆ ರಚಿಸಲಾಗುವ ತಂಡಗಳಿಗೆ ಪೊಲೀಸ್ ಇಲಾಖೆಯಿಂದ ಒಬ್ಬ ಎ.ಎಸ್.ಐ ಅಥವಾ ಹೆಚ್.ಸಿ ದರ್ಜೆಯ ಅಧಿಕಾರಿಗಳನ್ನು ನಿಯೋಜಿಸುವಂತೆ ರಕ್ಷಣಾ ಇಲಾಖೆಯವರಿಗೆ ಸೂಚಿಸಲಾಯಿತು.
ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲಾ . ನಗರಸಭೆ ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಮೇಶ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ವೃತ್ತ ನಿರೀಕ್ಷಕರು ಗಳು ಮತ್ತು ಅಬಕಾರಿ ಇಲಾಖೆಯ ವೃತ್ತ ನಿರೀಕ್ಷಕರು, ಎಲ್ಲಾ ಹೋಬಳಿಯ ಉಪತಹಶೀಲ್ದಾರ್‌ಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ರಾಜಸ್ವ ನಿರೀಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.