ಭದ್ರಾವತಿ, ನ. ೧೩: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ 2021-22ನೇ ಸಾಲಿನ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರಾಷ್ಟೀಯ ಮತದಾರರ ದಿನಾಚರಣೆ(ಎನ್‌ವಿಡಿ) ಪ್ರಯುಕ್ತ ತಾಲೂಕು ಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ನ. 15ರಂದು ಬೆಳಿಗ್ಗೆ 10.30ಕ್ಕೆ ನಗರದ ಹೊಸ ಸೇತುವೆ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಭಿತ್ತಿ ಚಿತ್ರ ಹಾಗು ರಸಪ್ರಶ್ನೆ ಸ್ಪರ್ಧೆಗಳು ನಡೆಯಲಿವೆ. ಆಯಾ ಶಾಲೆಗಳಲ್ಲಿ ಪ್ರಬಂಧ ಹಾಗು ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಓರ್ವ ವಿದ್ಯಾರ್ಥಿ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಾಕ್ಷರತಾ ಸಂಘಗಳ ತಾಲೂಕು ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ಮೊ: ೯೮೮೬೨೧೪೧೬೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ.